IND vs NZ, 3rd ODI, Live Streaming: ಇಂದೋರ್​ನಲ್ಲಿ ಅಂತಿಮ ಪಂದ್ಯ; ಎಷ್ಟು ಗಂಟೆಗೆ, ಯಾವ ಚಾನೆಲ್​ನಲ್ಲಿ ನೇರಪ್ರಸಾರ?

| Updated By: ಪೃಥ್ವಿಶಂಕರ

Updated on: Jan 23, 2023 | 6:04 PM

IND vs NZ, 3rd ODI, Live Streaming: ಇದೇ ಮಂಗಳವಾರ ಅಂದರೆ, ಜನವರಿ 24 ರಂದು ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ ಇಂದೋರ್​ನಲ್ಲಿ ನಡೆಯಲ್ಲಿದೆ.

IND vs NZ, 3rd ODI, Live Streaming: ಇಂದೋರ್​ನಲ್ಲಿ ಅಂತಿಮ ಪಂದ್ಯ; ಎಷ್ಟು ಗಂಟೆಗೆ, ಯಾವ ಚಾನೆಲ್​ನಲ್ಲಿ ನೇರಪ್ರಸಾರ?
ಭಾರತ- ಕಿವೀಸ್ ಪಂದ್ಯ
Follow us on

ಇದೇ ಮಂಗಳವಾರ ಅಂದರೆ, ಜನವರಿ 24 ರಂದು ಭಾರತ ಹಾಗೂ ನ್ಯೂಜಿಲೆಂಡ್ (India Vs New Zealand) ನಡುವಿನ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ ಇಂದೋರ್​ನಲ್ಲಿ ನಡೆಯಲ್ಲಿದೆ. ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದುಕೊಂಡಿರುವ ಭಾರತ ತಂಡ 2-0 ಅಂತರದಲ್ಲಿ ಅಜೇಯ ಮುನ್ನಡೆ ಸಾಧಿಸಿದ್ದು, ಸರಣಿಯನ್ನು ತನ್ನದಾಗಿಸಿಕೊಂಡಿದೆ. ಈ ಹಿಂದೆ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನೂ ಕ್ಲೀನ್ ಸ್ವೀಪ್ ಮಾಡಿದ್ದ ಟೀಂ ಇಂಡಿಯಾ ಇದೀಗ ನ್ಯೂಜಿಲೆಂಡ್ ವಿರುದ್ಧವೂ ಅದೇ ರೀತಿ ಮಾಡುವ ಅವಕಾಶ ಪಡೆದುಕೊಂಡಿದೆ. ಅಲ್ಲದೆ ಇದೇ ವರ್ಷ ಭಾರತದಲ್ಲಿಯೇ ಏಕದಿನ ವಿಶ್ವಕಪ್ (ODI World Cup) ಆಯೋಜನೆಯಾಗುತ್ತಿರುವುದರಿಂದ ಪ್ರತಿ ಏಕದಿನ ಸರಣಿಯು ರೋಹಿತ್ ಬಳಗಕ್ಕೆ ಬಹಳ ಮುಖ್ಯವಾಗಿದೆ.

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಜನವರಿ 24ರಂದು ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3ನೇ ಏಕದಿನ ಪಂದ್ಯ ಯಾವಾಗ ಆರಂಭವಾಗಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಮಧ್ಯಾಹ್ನ 1:30 ಕ್ಕೆ ಆರಂಭವಾಗಲಿದ್ದು, ಪಂದ್ಯದ ಟಾಸ್ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3ನೇ ಏಕದಿನ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?

ಚಂದಾದಾರಿಕೆಯೊಂದಿಗೆ Hotstar ನಲ್ಲಿ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು. ಇದಲ್ಲದೆ, ಪಂದ್ಯದ ಲೈವ್ ನವೀಕರಣಗಳನ್ನು tv9Kannada.com ನಲ್ಲಿಯೂ ಓದಬಹುದು.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಾಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಉಮ್ರಾನ್ ಮಲಿಕ್.

ನ್ಯೂಜಿಲೆಂಡ್ ತಂಡ: ಟಾಮ್ ಲೇಥಮ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಡ್ಯಾರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಇಶ್ ಸೋಧಿ, ಬ್ಲೇರ್ ಟಿಕ್ನರ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:04 pm, Mon, 23 January 23