
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಮ್ಯಾಚ್ ಶುರುವಾಗಿದೆ. ಇಂದೋರ್ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ರಾಜ್ಕೋಟ್ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಪ್ರಸಿದ್ಧ್ ಕೃಷ್ಣ ಅವರನ್ನು ಈ ಬಾರಿ ಕೈ ಬಿಡಲಾಗಿದ್ದು, ಅವರ ಬದಲಿಗೆ ಅರ್ಷದೀಪ್ ಸಿಂಗ್ಗೆ ಅವಕಾಶ ನೀಡಲಾಗಿದೆ. ಅದರಂತೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.
ನ್ಯೂಝಿಲೆಂಡ್ ಪ್ಲೇಯಿಂಗ್ XI: ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ವಿಲ್ ಯಂಗ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಹೇ(ವಿಕೆಟ್ ಕೀಪರ್), ಮೈಕೆಲ್ ಬ್ರೇಸ್‌ವೆಲ್ (ನಾಯಕ), ಝಕಾರಿ ಫೌಲ್ಕ್ಸ್, ಕ್ರಿಸ್ಟಿಯನ್ ಕ್ಲಾರ್ಕ್, ಕೈಲ್ ಜೇಮಿಸನ್, ಜೇಡನ್ ಲೆನ್ನೊಕ್ಸ್.
ಈ ಪಂದ್ಯವು ಸರಣಿ ನಿರ್ಣಾಯಕ. ಏಕೆಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ ಗೆದ್ದರೆ, ದ್ವಿತೀಯ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಗೆಲುವು ದಾಖಲಿಸಿದೆ. ಅದರಂತೆ ಇದೀಗ ಮೂರನೇ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ 2-1 ಅಂತರದಿಂದ ಸರಣಿ ಗೆಲ್ಲಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.