India vs New zealand 3rd T20: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಬಹುತೇಕ ಖಚಿತ

| Updated By: ಝಾಹಿರ್ ಯೂಸುಫ್

Updated on: Nov 20, 2021 | 9:54 PM

India vs New zealand Predicted Playing 11: ದೆ ರುತುರಾಜ್ ಗಾಯಕ್ವಾಡ್ ಹಾಗೂ ಅವೇಶ್ ಖಾನ್ ಕೂಡ ತಂಡದಲ್ಲಿದ್ದಾರೆ. ಅದರಲ್ಲೂ ಅವೇಶ್ ಖಾನ್ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡುವ ಅವಕಾಶವನ್ನು ಎದುರು ನೋಡುತ್ತಿದ್ದಾರೆ.

India vs New zealand 3rd T20: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಬಹುತೇಕ ಖಚಿತ
India vs New zealand
Follow us on

ಭಾನುವಾರ ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ದದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ರಮುಖ ಬದಲಾವಣೆ ಮಾಡುವ ಸಾಧ್ಯತೆಯಿದೆ. ಏಕೆಂದರೆ ಟೀಮ್ ಇಂಡಿಯಾ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದ್ದು, ಮೂರನೇ ಪಂದ್ಯವು ಭಾರತದ ಪಾಲಿಗೆ ಔಪಚಾರಿಕ ಎನ್ನಬಹುದು. ಹೀಗಾಗಿ ತಂಡದಲ್ಲಿ ಅವಕಾಶ ಸಿಗದ ಯುವ ಆಟಗಾರರನ್ನು ಅಂತಿಮ ಪಂದ್ಯದಲ್ಲಿ ಕಣಕ್ಕಿಳಿಸಬಹುದು. ಅದರಂತೆ ಯುಜ್ವೇಂದ್ರ ಚಹಾಲ್ ಹಾಗೂ ಇಶಾನ್ ಕಿಶನ್​ ಸ್ಥಾನ ಖಚಿತ ಎಂದೇ ಹೇಳಬಹುದು.

ಇದಲ್ಲದೆ ರುತುರಾಜ್ ಗಾಯಕ್ವಾಡ್ ಹಾಗೂ ಅವೇಶ್ ಖಾನ್ ಕೂಡ ತಂಡದಲ್ಲಿದ್ದಾರೆ. ಅದರಲ್ಲೂ ಅವೇಶ್ ಖಾನ್ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡುವ ಅವಕಾಶವನ್ನು ಎದುರು ನೋಡುತ್ತಿದ್ದಾರೆ. ಹೀಗಾಗಿ ದೀಪಕ್ ಚಹರ್ ಸ್ಥಾನದಲ್ಲಿ ಅವೇಶ್​ಗೂ ಚಾನ್ಸ್ ಸಿಗುವ ಸಾಧ್ಯತೆಯಿದೆ. ಏಕೆಂದರೆ ಮೊದಲೆರಡು ಪಂದ್ಯಗಳಲ್ಲಿ ದೀಪಕ್ ಚಹರ್ ದುಬಾರಿ ಎನಿಸಿಕೊಂಡಿದ್ದರು. ಅತ್ತ ಸಿಕ್ಕ ಅವಕಾಶದಲ್ಲಿ ಹರ್ಷಲ್ ಪಟೇಲ್ ಮಿಂಚಿದ್ದು, ಇದೀಗ ಅವೇಶ್​​ ಖಾನ್​ಗೆ ಅವಕಾಶ ನೀಡಿ ಪರೀಕ್ಷಿಸಬಹುದು.

ಇನ್ನೊಂದೆಡೆ ರುತುರಾಜ್ ಗಾಯಕ್ವಾಡ್ ಆರಂಭಿಕ ಆಟಗಾರನಾಗಿದ್ದು, ಹೀಗಾಗಿ ರೋಹಿತ್ ಶರ್ಮಾ ಅಥವಾ ಕೆಎಲ್ ರಾಹುಲ್ ತಮ್ಮ ಬ್ಯಾಟಿಂಗ್ ಕ್ರಮಾಂಕವನ್ನು ಬದಲಿಸಬೇಕಾಗಿ ಬರಬಹುದು. ಅಥವಾ ಇಬ್ಬರಲ್ಲಿ ಒಬ್ಬರು ವಿಶ್ರಾಂತಿ ಪಡೆಯಬಹುದು. ಅದರಂತೆ ರುತುರಾಜ್ ಗಾಯಕ್ವಾಡ್​ಗೆ ಅವಕಾಶ ನೀಡಬಹುದು. ಅದಾಗ್ಯೂ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ದ ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ. ಹೀಗಾಗಿ ತಂಡದಲ್ಲಿ ನಾಲ್ಕು ಬದಲಾವಣೆ ಮಾಡಿಕೊಳ್ಳುವುದು ಕೂಡ ಅನುಮಾನ ಎನ್ನಬಹುದು. ಅದರಂತೆ ಟೀಮ್ ಇಂಡಿಯಾ ಕೊನೆಯ ಟಿ20 ಪಂದ್ಯದಲ್ಲಿ ಮೂರು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.

ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ:
ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ರಿಷಭ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಹರ್ಷಲ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್

ನ್ಯೂಜಿಲ್ಯಾಂಡ್ ಸಂಭಾವ್ಯ ಪ್ಲೇಯಿಂಗ್ ಇಲೆವೆನ್:
ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಿಮ್ ಸಿಫೆರ್ಟ್ (ವಿಕೆಟ್ ಕೀಪರ್), ಜಿಮ್ಮಿ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ (ನಾಯಕ), ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್

ಪಂದ್ಯದ ವಿವರಗಳು:

ಸ್ಥಳ: ಈಡನ್ ಗಾರ್ಡನ್ಸ್, ಕೋಲ್ಕತ್ತಾ

ದಿನಾಂಕ ಮತ್ತು ಸಮಯ: ನವೆಂಬರ್ 21,  ಸಂಜೆ 7:00 PM

ಲೈವ್ ಸ್ಟ್ರೀಮಿಂಗ್: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಡಿಸ್ನಿ+ಹಾಟ್‌ಸ್ಟಾರ್

ಇದನ್ನೂ ಓದಿ: Syed Mushtaq Ali Trophy 2021: ರೋಚಕ ಜಯದೊಂದಿಗೆ ಫೈನಲ್​ಗೆ ಲಗ್ಗೆಯಿಟ್ಟ ಕರ್ನಾಟಕ

ಇದನ್ನೂ ಓದಿ: Rohit Sharma: ಶಾಹಿದ್ ಅಫ್ರಿದಿ ವಿಶ್ವ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Martin Guptill: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್