India vs New Zealand 3rd T20: ವಿಶ್ವಕಪ್ ಸೋಲಿನ ಸೇಡನ್ನು ತೀರಿಸಿಕೊಂಡ ಟೀಮ್ ಇಂಡಿಯಾ
India vs New Zealand 3rd T20 Live Score : ಟೀಮ್ ಇಂಡಿಯಾ ಈಗಾಗಲೇ ಜೈಪುರ ಮತ್ತು ರಾಂಚಿಯಲ್ಲಿ ನಡೆದ ಮೊದಲ ಎರಡು ಪಂದ್ಯಗಳನ್ನು ಗೆದ್ದು ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಹೀಗಾಗಿ ಟೀಮ್ ಇಂಡಿಯಾ ಪಾಲಿಗೆ ಇದೊಂದು ಔಪಚಾರಿಕ ಪಂದ್ಯ.
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ದದ ಕೊನೆಯ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. 73 ರನ್ಗಳ ಭರ್ಜರಿ ಜಯದೊಂದಿಗೆ ಸರಣಿಯನ್ನು ಟೀಮ್ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡಿದ್ದು, ಎಲ್ಲಾ ಪಂದ್ಯಗಳನ್ನು ಗೆಲ್ಲುವ ಮೂಲಕ ನ್ಯೂಜಿಲೆಂಡ್ ವಿರುದ್ದದ ಟಿ20 ವಿಶ್ವಕಪ್ ಸೋಲಿನ ಸೇಡನ್ನು ತೀರಿಸಿಕೊಂಡಿದೆ. ಈ ಬಾರಿ ನಡೆದ ಟಿ20 ವಿಶ್ವಕಪ್ನ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡವನ್ನು ನ್ಯೂಜಿಲೆಂಡ್ ಮಣಿಸಿತ್ತು. ಇದೀಗ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಮೂಲಕ ಟೀಮ್ ಇಂಡಿಯಾ ಸೋಲಿನ ಸೇಡನ್ನು ತೀರಿಸಿಕೊಂಡಂತಾಗಿದೆ. ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (56) ಅವರ ಅರ್ಧಶತಕದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 184 ರನ್ ಕಲೆಹಾಕಿತು. ಈ ಮೊತ್ತವನ್ನು ಬೆನ್ನತ್ತಿದ ನ್ಯೂಜಿಲೆಂಡ್ ತಂಡವು 17.2 ಎಸೆತಗಳಲ್ಲಿ 111 ರನ್ಗೆ ಸರ್ವಪತನ ಕಾಣುವ ಮೂಲಕ ಹೀನಾಯವಾಗಿ ಸೋಲನುಭವಿಸಿತು. ಟೀಮ್ ಇಂಡಿಯಾ 3 ಓವರ್ನಲ್ಲಿ 9 ರನ್ ನೀಡಿ 3 ವಿಕೆಟ್ ಕಬಳಿಸುವ ಮೂಲಕ ಅಕ್ಷರ್ ಪಟೇಲ್ ಯಶಸ್ವಿ ಬೌಲರ್ ಎನಿಸಿಕೊಂಡರು.
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ವೆಂಕಟೇಶ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್.
ನ್ಯೂಜಿಲೆಂಡ್ (ಪ್ಲೇಯಿಂಗ್ XI): ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್(ವಿಕೆಟ್ ಕೀಪರ್), ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್(ನಾಯಕ), ಆಡಮ್ ಮಿಲ್ನ್, ಲಾಕಿ ಫರ್ಗುಸನ್, ಇಶ್ ಸೋಧಿ, ಟ್ರೆಂಟ್ ಬೌಲ್ಟ್
Published On - 6:21 pm, Sun, 21 November 21