AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ನ್ಯೂಝಿಲೆಂಡ್ ಆಲೌಟ್: ಟೀಮ್ ಇಂಡಿಯಾಗೆ 147 ರನ್​ಗಳ ಗುರಿ

India vs New Zealand: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಟೆಸ್ಟ್ ಪಂದ್ಯಗಳ ಸರಣಿಯನ್ನು ಈಗಾಗಲೇ ಕಿವೀಸ್ ಪಡೆ ವಶಪಡಿಸಿಕೊಂಡಿದೆ. ಈ ಸರಣಿಯ ಮೊದಲ ಮ್ಯಾಚ್​ನಲ್ಲಿ 8 ವಿಕೆಟ್​ಗಳ ಜಯ ಸಾಧಿಸಿದ್ದ ನ್ಯೂಝಿಲೆಂಡ್, 2ನೇ ಟೆಸ್ಟ್​ನಲ್ಲಿ 113 ರನ್​ಗಳ ಭರ್ಜರಿ ಜಯ ಸಾಧಿಸಿತ್ತು.

IND vs NZ: ನ್ಯೂಝಿಲೆಂಡ್ ಆಲೌಟ್: ಟೀಮ್ ಇಂಡಿಯಾಗೆ 147 ರನ್​ಗಳ ಗುರಿ
Team India
ಝಾಹಿರ್ ಯೂಸುಫ್
|

Updated on: Nov 03, 2024 | 9:39 AM

Share

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ನ್ಯೂಝಿಲೆಂಡ್ ತಂಡ 174 ರನ್​ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ನ್ಯೂಝಿಲೆಂಡ್ ತಂಡದ ಪರ ಡೇರಿಲ್ ಮಿಚೆಲ್ 82 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ನ್ಯೂಝಿಲೆಂಡ್ ತಂಡ ಪ್ರಥಮ ಇನಿಂಗ್ಸ್​ನಲ್ಲಿ 235 ರನ್​ಗಳಿಸಿ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ರವೀಂದ್ರ ಜಡೇಜಾ 5 ವಿಕೆಟ್ ಕಬಳಿಸಿದರೆ, ವಾಷಿಂಗ್ಟನ್ ಸುಂದರ್ 4 ವಿಕೆಟ್ ಪಡೆದರು.

ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಶುರು ಮಾಡಿದ ಟೀಮ್ ಇಂಡಿಯಾ ಪರ ಶುಭ್​ಮನ್ ಗಿಲ್ (90) ಹಾಗೂ ರಿಷಭ್ ಪಂತ್ (60) ಆಕರ್ಷಕ ಅರ್ಧಶತಕ ಬಾರಿಸಿದರು. ಈ ಹಾಫ್​ ಸೆಂಚುರಿಗಳ ನೆರವಿನಿಂದ ಭಾರತ ತಂಡವು 263 ರನ್​ಗಳನ್ನು ಕಲೆಹಾಕಿತು.

28 ರನ್​ಗಳ ಮುನ್ನಡೆ/ಹಿನ್ನಡೆ:

ಪ್ರಥಮ ಇನಿಂಗ್ಸ್​ನಲ್ಲಿನ 28 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ನ್ಯೂಝಿಲೆಂಡ್ ಬ್ಯಾಟರ್​ಗಳು ಭಾರತೀಯ ಸ್ಪಿನ್ನರ್​ಗಳ ದಾಳಿಗೆ ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ 2ನೇ ದಿನದಾಟದ ಅಂತ್ಯಕ್ಕೆ ನ್ಯೂಝಿಲೆಂಡ್ 9 ವಿಕೆಟ್ ಕಳೆದುಕೊಂಡು 171 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಇನ್ನು ಮೂರನೇ ದಿನದಾಟದ ಆರಂಭದಲ್ಲೇ ರವೀಂದ್ರ ಜಡೇಜಾ ಎಜಾಝ್ ಪಟೇಲ್ ವಿಕೆಟ್ ಪಡೆದರು. ಇದರೊಂದಿಗೆ ನ್ಯೂಝಿಲೆಂಡ್ ತಂಡವು 174 ರನ್​ಗಳಿಗೆ ಆಲೌಟ್ ಆಯಿತು. ಭಾರತದ ಪರ ರವೀಂದ್ರ ಜಡೇಜಾ 55 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು.

ಟೀಮ್ ಇಂಡಿಯಾಗೆ 147 ರನ್​ಗಳ ಗುರಿ:

ಮೊದಲ ಇನಿಂಗ್ಸ್​ನಲ್ಲಿನ 28 ರನ್​ಗಳ ಮುನ್ನಡೆ ಹೊಂದಿರುವ ಭಾರತ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 147 ರನ್​ ಕಲೆಹಾಕಿದರೆ ಗೆಲುವು ತನ್ನದಾಗಿಸಿಕೊಳ್ಳಬಹುದು. ಈ ಮೂಲಕ ನ್ಯೂಝಿಲೆಂಡ್ ವಿರುದ್ದದ ಕ್ಲೀನ್ ಸ್ವೀಪ್ ಸೋಲನ್ನು ತಪ್ಪಿಸಿಕೊಳ್ಳಬಹುದಾಗಿದೆ.

ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್ , ರೋಹಿತ್ ಶರ್ಮಾ (ನಾಯಕ) , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ರಿಷಭ್ ಪಂತ್ (ವಿಕೆಟ್ ಕೀಪರ್) , ಸರ್ಫರಾಝ್ ಖಾನ್ , ರವೀಂದ್ರ ಜಡೇಜಾ , ವಾಷಿಂಗ್ಟನ್ ಸುಂದರ್ , ರವಿಚಂದ್ರನ್ ಅಶ್ವಿನ್ , ಆಕಾಶ್ ದೀಪ್ , ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2025: ಐದು ಐಪಿಎಲ್​ ತಂಡಗಳಿಗೆ ಹೊಸ ನಾಯಕರುಗಳು..!

ನ್ಯೂಝಿಲೆಂಡ್ ಪ್ಲೇಯಿಂಗ್ 11: ಟಾಮ್ ಲ್ಯಾಥಮ್ (ನಾಯಕ) , ಡೆವೊನ್ ಕಾನ್ವೇ , ವಿಲ್ ಯಂಗ್ , ರಚಿನ್ ರವೀಂದ್ರ , ಡೇರಿಲ್ ಮಿಚೆಲ್ , ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್) , ಗ್ಲೆನ್ ಫಿಲಿಪ್ಸ್ , ಇಶ್ ಸೋಧಿ , ಮ್ಯಾಟ್ ಹೆನ್ರಿ , ಅಜಾಜ್ ಪಟೇಲ್ , ವಿಲಿಯಂ ಓರೋಕ್.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ