IND vs NZ: ಭಾರತ vs ನ್ಯೂಝಿಲೆಂಡ್ ನಡುವಣ 3ನೇ ಟೆಸ್ಟ್ ಪಂದ್ಯ ಯಾವಾಗ ಶುರು?
India vs New Zealand: ಭಾರತದ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ನಲ್ಲಿ ನ್ಯೂಝಿಲೆಂಡ್ ತಂಡವು 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತ್ತು. ಇದೀಗ ಪುಣೆಯಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯವನ್ನು 113 ರನ್ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಕೊನೆಯ ಪಂದ್ಯಕ್ಕೂ ಮುನ್ನ ಕಿವೀಸ್ ಪಡೆ ಸರಣಿ ವಶಪಡಿಸಿಕೊಂಡಿದೆ.
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳು ಮುಗಿದಿವೆ. ಇನ್ನುಳಿದಿರುವುದು ಕೊನೆಯ ಟೆಸ್ಟ್ ಪಂದ್ಯ ಮಾತ್ರ. ಈ ಪಂದ್ಯವು ನವೆಂಬರ್ 1 ರಿಂದ ಶುರುವಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಇರಾದೆಯಲ್ಲಿದೆ ಕಿವೀಸ್ ಪಡೆ.
ಇತ್ತ ಮೊದಲೆರಡು ಪಂದ್ಯಗಳಲ್ಲಿ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿರುವ ಟೀಮ್ ಇಂಡಿಯಾ ಕೊನೆಯ ಮ್ಯಾಚ್ನಲ್ಲಿ ಗೆದ್ದು ಕಂಬ್ಯಾಕ್ ಮಾಡುವ ಇರಾದೆಯಲ್ಲಿದೆ. ಏಕೆಂದರೆ ಈ ಸರಣಿಯ ಬಳಿಕ ಭಾರತವು ಆಸ್ಟ್ರೇಲಿಯಾ ವಿರುದ್ಧ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗಾಗಿ ತೆರಳಬೇಕಿದೆ. ಅದಕ್ಕೂ ಮುನ್ನ ಜಯದ ಲಯಕ್ಕೆ ಮರಳಬೇಕಾದ ಅನಿವಾರ್ಯತೆಯಿದೆ. ಹೀಗಾಗಿ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ತಂಡದಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
ಮೂರನೇ ಪಂದ್ಯ ಯಾವಾಗ?
ನವೆಂಬರ್ 1 ರಿಂದ 5 ರವರೆಗೆ ಮೂರನೇ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂ ಆತಿಥ್ಯವಹಿಸಲಿದೆ.
ಎಷ್ಟು ಗಂಟೆಗೆ ಮ್ಯಾಚ್ ಶುರು?
ಈ ಸರಣಿಯ ಮೂರನೇ ಪಂದ್ಯವು ಬೆಳಿಗ್ಗೆ 9.30 ರಿಂದ ಶುರುವಾಗಲಿದೆ. ಇನ್ನು ಟಾಸ್ ಪ್ರಕ್ರಿಯೆ 9 ಗಂಟೆಗೆ ನಡೆಯಲಿದೆ.
ಯಾವ ಚಾನೆಲ್‌ನಲ್ಲಿ ನೇರ ಪ್ರಸಾರ?
ಭಾರತ ಮತ್ತು–ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿಯ ಎಲ್ಲಾ ಪಂದ್ಯಗಳು ಸ್ಪೋರ್ಟ್ಸ್ 18 ಚಾನೆಲ್‌ನಲ್ಲಿ ನೇರ ಪ್ರಸಾರವಾಗಲಿದೆ. ಇನ್ನು ಜಿಯೋ ಸಿನಿಮಾ ಆ್ಯಪ್ ನಲ್ಲಿ ಉಚಿತವಾಗಿ ಲೈವ್ ವೀಕ್ಷಿಸಬಹುದು.
ಉಭಯ ತಂಡಗಳು:
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್.
ಇದನ್ನೂ ಓದಿ: RCB ಉಳಿಸಿಕೊಂಡ ಆರು ಆಟಗಾರರು ಯಾರೆಲ್ಲಾ ಗೊತ್ತಾ?
ನ್ಯೂಝಿಲೆಂಡ್ ಟೆಸ್ಟ್ ತಂಡ: ಟಾಮ್ ಲ್ಯಾಥಮ್ (ನಾಯಕ), ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಮ್ಯಾಟ್ ಹೆನ್ರಿ, ಡೇರಿಲ್ ಮಿಚೆಲ್, ವಿಲ್ ಓ’ರೂರ್ಕ್, ಅಜಾಝ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಜೇಕೊಬ್ ಡಫಿ, ವಿಲ್ ಯಂಗ್, ಮೈಕೆಲ್ ಬ್ರೇಸ್‌ವೆಲ್, ಇಶ್ ಸೋಧಿ, ಕೇನ್ ವಿಲಿಯಮ್ಸನ್.