AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ನ್ಯೂಜಿಲೆಂಡ್ 4ನೇ ಏಕದಿನ ಪಂದ್ಯಕ್ಕೆ ಮಳೆ ಭೀತಿ ಇದೆಯಾ? ಇಲ್ಲಿದೆ ಹವಾಮಾನ ವರದಿ

ನವೆಂಬರ್ 13ರಂದು ಭಾರತ vs ನ್ಯೂಜಿಲೆಂಡ್ ನಾಲ್ಕನೇ ಏಕದಿನ ಪಂದ್ಯ ಮೌಂಟ್ ಮೌಂಗನುಯಿಯಲ್ಲಿ ನಡೆಯಲಿದೆ. ಈಗಾಗಲೇ 2-0 ಮುನ್ನಡೆಯೊಂದಿಗೆ ಸರಣಿ ಗೆಲುವಿನತ್ತ ಭಾರತ ತಂಡದ ಚಿತ್ತ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ, ತಿಲಕ್ ವರ್ಮಾ, ಯಶ್ ಠಾಕೂರ್ ಸೇರ್ಪಡೆಗೊಂಡಿದ್ದಾರೆ. ಈ ಬಾರಿ ಮಳೆಯ ಭೀತಿಯಿಲ್ಲದೆ ಪೂರ್ಣ ಪಂದ್ಯ ನಡೆಯುವ ಉತ್ತಮ ಹವಾಮಾನ ನಿರೀಕ್ಷೆಯಿದೆ.

ಭಾರತ-ನ್ಯೂಜಿಲೆಂಡ್ 4ನೇ ಏಕದಿನ ಪಂದ್ಯಕ್ಕೆ ಮಳೆ ಭೀತಿ ಇದೆಯಾ? ಇಲ್ಲಿದೆ ಹವಾಮಾನ ವರದಿ
ಭಾರತ Vs ನ್ಯೂಜಿಲೆಂಡ್
ಪೃಥ್ವಿಶಂಕರ
|

Updated on: Nov 12, 2026 | 6:34 PM

Share

ನವೆಂಬರ್ 13ರ ಶುಕ್ರವಾರ ಬೇ ಓವಲ್ ಮೈದಾನದಲ್ಲಿ ನಡೆಯಲಿರುವ ನಾಲ್ಕನೇ ಏಕದಿನ ಪಂದ್ಯವನ್ನು ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳುವ ಗುರಿಯೊಂದಿಗೆ ಭಾರತ ತಂಡ ಕಣಕ್ಕಿಳಿಯಲಿದೆ. ಈಗಾಗಲೇ ಮೂರು ಪಂದ್ಯಗಳ ಪೈಕಿ ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ 2-0 ಮುನ್ನಡೆ ಸಾಧಿಸಿದೆ. ಮೂರನೇ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಇದೀಗ ಸರಣಿಯ ಕೊನೆಯ ಎರಡು ಪಂದ್ಯಗಳು ಮೌಂಟ್ ಮೌಂಗನುಯಿಯಲ್ಲಿ ನಡೆಯಲಿವೆ. ತವರಿನಲ್ಲೇ ಸರಣಿ ಸೋಲಿನ ಭೀತಿಯಲ್ಲಿರುವ ನ್ಯೂಜಿಲೆಂಡ್ ತಂಡಕ್ಕೆ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸುವ ಒತ್ತಡವಿದೆ.

ಈ ಸರಣಿಯಲ್ಲಿ ಮೊದಲ ಬಾರಿಗೆ ಏಕದಿನ ತಂಡದ ನಾಯಕತ್ವ ವಹಿಸಿಕೊಂಡಿರುವ ಶ್ರೇಯಸ್ ಅಯ್ಯರ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಇಶಾನ್ ಕಿಶನ್ ಉಪನಾಯಕನಾಗಿ ಹಾಗೂ ವಿಕೆಟ್ ಕೀಪರ್ ಆಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಟೆಸ್ಟ್ ಸರಣಿಯ ಸಿದ್ಧತೆಗಾಗಿ ಶುಭಮನ್ ಗಿಲ್ ಮತ್ತು ಕೆಎಲ್ ರಾಹುಲ್ ಏಕದಿನ ತಂಡದಿಂದ ಹೊರಬಂದಿದ್ದಾರೆ. ಅವರ ಬದಲಿಗೆ ತಿಲಕ್ ವರ್ಮಾ, ಯಶ್ ಠಾಕೂರ್ ಮತ್ತು ಕುಮಾರ್ ಕುಶಾಗ್ರ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಹವಾಮಾನ ಹೇಗಿರಲಿದೆ?

ಈ ಸರಣಿಯ ಹಿಂದಿನ ಪಂದ್ಯಗಳಿಗೆ ಮಳೆ ಅಡ್ಡಿಯಾಗಿತ್ತು. ಆದರೆ ಶುಕ್ರವಾರ ಟೌರಂಗಾದಲ್ಲಿ ಬಿಸಿಲು ಹಾಗೂ ಒಣಹವೆ ಇರಲಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ. ಮೆಟ್ ಆಫೀಸ್‌ನ ಗಂಟೆವಾರು ವರದಿ ಪ್ರಕಾರ, ಟಾಸ್‌ನಿಂದ ಪಂದ್ಯದ ಕೊನೆಯ ಹಂತದವರೆಗೂ ಮಳೆಯಾಗುವ ಸಾಧ್ಯತೆ ಶೇ.5ಕ್ಕಿಂತ ಕಡಿಮೆ ಇದೆ. ಅಕ್ಯುವೆದರ್ ಕೂಡ ಇಡೀ ದಿನ ಮಳೆಯಾಗುವ ಸಾಧ್ಯತೆಯನ್ನು ಕೇವಲ ಶೇ.1 ಎಂದು ಅಂದಾಜಿಸಿದೆ. ಪಂದ್ಯದ ವೇಳೆ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಸಂಜೆ ಸೂರ್ಯಾಸ್ತದ ನಂತರ ತಾಪಮಾನ ಕ್ರಮೇಣ ಇಳಿಕೆಯಾಗಲಿದೆ. ರಾತ್ರಿ 11 ಗಂಟೆ ವೇಳೆಗೆ 14 ಡಿಗ್ರಿ ಸೆಲ್ಸಿಯಸ್‌ಗೆ ತಲುಪುವ ನಿರೀಕ್ಷೆಯಿದೆ. ಪಂದ್ಯ ನಡೆಯುವ ಅವಧಿಯಲ್ಲಿ ಸರಾಸರಿ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಬಹುದು.

ಪಂದ್ಯಕ್ಕೆ ಮಳೆ ಅಡ್ಡಿ?

ಸದ್ಯದ ಹವಾಮಾನ ಮುನ್ಸೂಚನೆ ಪ್ರಕಾರ, ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ತೀರಾ ಕಡಿಮೆ ಇದೆ. ಪಂದ್ಯದ ಬಹುತೇಕ ಅವಧಿಯಲ್ಲಿ ಮಳೆಯ ಸಾಧ್ಯತೆ ಶೇ.5ಕ್ಕಿಂತ ಕಡಿಮೆ ಇರುವುದರಿಂದ ಸಂಪೂರ್ಣ 50 ಓವರ್‌ಗಳ ಪಂದ್ಯ ನಡೆಯುವ ನಿರೀಕ್ಷೆಯಿದೆ. ವೆದರ್‌ವಾಚ್ ವರದಿಯೂ ಟೌರಂಗಾದಲ್ಲಿ ಬಿಸಿಲಿನ ವಾತಾವರಣ ಇರಲಿದೆ ಎಂದು ತಿಳಿಸಿದೆ. ಮಳೆಯ ಸಾಧ್ಯತೆ ಕೇವಲ ಶೇ.10ರಷ್ಟಿದ್ದು, ಮಳೆ ಬಂದರೂ ಅಲ್ಪ ಪ್ರಮಾಣದಲ್ಲಿರಬಹುದು ಎಂದು ಅಂದಾಜಿಸಲಾಗಿದೆ.

ಮಳೆಯಿಂದ ಪಂದ್ಯ ರದ್ದಾದರೆ ಏನಾಗಲಿದೆ?

ಒಂದು ವೇಳೆ ಮಳೆಯಿಂದಾಗಿ ಪಂದ್ಯಕ್ಕೆ ಅಡ್ಡಿಯಾದರೆ, ಓವರ್‌ಗಳನ್ನು ಕಡಿತಗೊಳಿಸಿ ಪಂದ್ಯ ಮುಂದುವರಿಸುವ ಅವಕಾಶವಿದೆ. ಆಗ ಡಕ್‌ವರ್ತ್ ಲೂಯಿಸ್ ಸ್ಟರ್ನ್ (DLS) ನಿಯಮದ ಪ್ರಕಾರ ಗುರಿಯನ್ನು ಪರಿಷ್ಕರಿಸಲಾಗುತ್ತದೆ. ಪಂದ್ಯದ ಫಲಿತಾಂಶ ನಿರ್ಧಾರವಾಗಬೇಕಾದರೆ ಎರಡೂ ತಂಡಗಳು ಕನಿಷ್ಠ 20 ಓವರ್‌ಗಳನ್ನಾದರೂ ಆಡಿರಬೇಕು. ವೆಲ್ಲಿಂಗ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಇದೇ ನಿಯಮದಡಿ ಭಾರತ 4 ರನ್‌ಗಳ ರೋಚಕ ಗೆಲುವು ಸಾಧಿಸಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ಅರಣ್ಯ ಇಲಾಖೆಯಿಂದ 51 ಕಾವಾಡಿ ಹುದ್ದೆಗೆ ನೇಮಕಾತಿ ಸ್ಥಗಿತ
ಅರಣ್ಯ ಇಲಾಖೆಯಿಂದ 51 ಕಾವಾಡಿ ಹುದ್ದೆಗೆ ನೇಮಕಾತಿ ಸ್ಥಗಿತ
ಮೆಟ್ರೋ ಅನುದಾನ ಜಟಾಪಟಿ: ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ಲೈವ್
ಮೆಟ್ರೋ ಅನುದಾನ ಜಟಾಪಟಿ: ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ಲೈವ್
ಜೈಲಿನಿಂದ ಪರೋಲ್​​ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ
ಜೈಲಿನಿಂದ ಪರೋಲ್​​ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!