Champions Trophy 2025: ಭಾರತ- ನ್ಯೂಜಿಲೆಂಡ್ ಫೈನಲ್ ಪಂದ್ಯಕ್ಕೆ ಅಂಪೈರ್ಗಳ ನೇಮಕ
Champions Trophy 2025: 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. 2017ರಲ್ಲಿಯೂ ಫೈನಲ್ ತಲುಪಿದ್ದ ಟೀಂ ಇಂಡಿಯಾ ಪಾಕಿಸ್ತಾನದ ವಿರುದ್ಧ ಸೋತುಹೋಗಿತ್ತು. ಈ ಬಾರಿ ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡ ಚಾಂಪಿಯನ್ ಪಟ್ಟಕ್ಕಾಗಿ ಸ್ಪರ್ಧಿಸಲಿವೆ. ಮಾರ್ಚ್ 9 ರಂದು ದುಬೈನಲ್ಲಿ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಐಸಿಸಿ, ಅಂಪೈರ್‌ಗಳು ಮತ್ತು ಇತರ ಅಧಿಕಾರಿಗಳ ಪಟ್ಟಿಯನ್ನು ಘೋಷಿಸಿದೆ.

2025 ರ ಚಾಂಪಿಯನ್ಸ್ ಟ್ರೋಫಿಯ (Champions Trophy 2025) ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವೆ ನಡೆಯಲಿದೆ. 2017 ರಲ್ಲಿ ನಡೆದಿದ್ದ ಚಾಂಪಿಯನ್ಸ್ ಟ್ರೋಫಿಯಲ್ಲೂ ಫೈನಲ್ಗೇರಿದ್ದ ಭಾರತ, ಪಾಕಿಸ್ತಾನದ ವಿರುದ್ಧ ಸೋತು ಚಾಂಪಿಯನ್ ಪಟ್ಟದಿಂದ ವಂಚಿತವಾಗಿತ್ತು. ಇದೀಗ 2013 ರ ನಂತರ ಟೀಂ ಇಂಡಿಯಾ ಮತ್ತೆ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿದೆ. ಇತ್ತ ನ್ಯೂಜಿಲೆಂಡ್ ಕೂಡ ಎರಡನೇ ಬಾರಿಗೆ ಈ ಪ್ರಶಸ್ತಿಯನ್ನು ಗೆಲ್ಲಲು ಪ್ರಯತ್ನಿಸುತ್ತಿದೆ. ಹೀಗಾಗಿ ಉಭಯ ತಂಡಗಳ ಈ ಕದನ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಉಭಯ ತಂಡಗಳ ನಡುವಿನ ಫೈನಲ್ ಹಣಾಹಣಿ ಮಾರ್ಚ್ 9 ರ ಭಾನುವಾರದಂದು ನಡೆಯಲಿದ್ದು, ಇದೀಗ ಈ ಪ್ರಶಸ್ತಿ ಪಂದ್ಯಕ್ಕೆ ಐಸಿಸಿ ಪಂದ್ಯದ ಅಧಿಕಾರಿಗಳನ್ನು ಘೋಷಿಸಿದೆ.
ಪಂದ್ಯದ ಅಧಿಕಾರಿಗಳ ಪಟ್ಟಿ
- ಮೈದಾನದ ಅಂಪೈರ್‌ಗಳು: ಪಾಲ್ ರೈಫಲ್ ಮತ್ತು ರಿಚರ್ಡ್ ಇಲ್ಲಿಂಗ್‌ವರ್ತ್
- ಮೂರನೇ ಅಂಪೈರ್: ಜೋಯಲ್ ವಿಲ್ಸನ್
- ನಾಲ್ಕನೇ ಅಂಪೈರ್: ಕುಮಾರ್ ಧರ್ಮಸೇನ
- ಪಂದ್ಯ ರೆಫರಿ: ರಂಜನ್ ಮದುಗಲೆ
ಸೆಮೀಸ್ ಮುಖಾಮುಖಿ ಹೇಗಿತ್ತು?
ಫೈನಲ್ ಪಂದ್ಯಕ್ಕೂ ಮುನ್ನ ನಡೆದಿದ್ದ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ, ಆಸ್ಟ್ರೇಲಿಯಾವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ಗೆ ಪ್ರವೇಶಿಸಿದರೆ, ಇತ್ತ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾವನ್ನು 50 ರನ್‌ಗಳಿಂದ ಸೋಲಿಸಿತ್ತು. ಇದೀಗ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಫೈನಲ್ ಪಂದ್ಯವು ಮಾರ್ಚ್ 9 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2:30 ಕ್ಕೆ ಪ್ರಾರಂಭವಾಗಲಿದೆ.
ಇದನ್ನೂ ಓದಿ: Champions Trophy 2025: ಸೋತ ಆಫ್ರಿಕಾ; ಭಾರತ- ನ್ಯೂಜಿಲೆಂಡ್ ನಡುವೆ ಚಾಂಪಿಯನ್ಸ್ ಟ್ರೋಫಿ ಫೈನಲ್
ಉಭಯ ತಂಡಗಳು
ನ್ಯೂಜಿಲೆಂಡ್ ತಂಡ: ವಿಲ್ ಯಂಗ್, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲೇಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ವಿಲಿಯಂ ಒ’ರೂರ್ಕೆ, ಜಾಕೋಬ್ ಡಫಿ, ಡೆವೊನ್ ಕಾನ್ವೇ, ಮಾರ್ಕ್ ಚಾಪ್‌ಮನ್, ನಾಥನ್ ಸ್ಮಿತ್.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ರವೀಂದ್ರ ಜಡೇಜ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:57 pm, Fri, 7 March 25