AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: 3ನೇ ಪಂದ್ಯದಲ್ಲೂ ಟಾಸ್ ಸೋತ ಭಾರತ; ಬೌಲರ್ ಬದಲು ಸ್ಪಿನ್ನರ್​ಗೆ ತಂಡದಲ್ಲಿ ಸ್ಥಾನ

Champions Trophy 2025: ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಚಾಂಪಿಯನ್ಸ್ ಟ್ರೋಫಿಯ ಔಪಚಾರಿಕ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಈ ಪಂದ್ಯದ ಫಲಿತಾಂಶ ಸೆಮಿಫೈನಲ್‌ಗೆ ಅರ್ಹತೆ ಮತ್ತು ಗುಂಪಿನಲ್ಲಿ ಅಗ್ರಸ್ಥಾನ ಪಡೆಯುವುದನ್ನು ನಿರ್ಧರಿಸುತ್ತದೆ. ಭಾರತ ಗೆದ್ದರೆ ಆಸ್ಟ್ರೇಲಿಯಾವನ್ನು, ಸೋತರೆ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ನ್ಯೂಜಿಲೆಂಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿದೆ. ಭಾರತ ತಂಡದಲ್ಲಿ ವರುಣ್ ಚಕ್ರವರ್ತಿ ಹರ್ಷಿತ್ ಬದಲಿ ಆಡುತ್ತಿದ್ದಾರೆ.

IND vs NZ: 3ನೇ ಪಂದ್ಯದಲ್ಲೂ ಟಾಸ್ ಸೋತ ಭಾರತ; ಬೌಲರ್ ಬದಲು ಸ್ಪಿನ್ನರ್​ಗೆ ತಂಡದಲ್ಲಿ ಸ್ಥಾನ
Rohit Sharma
ಪೃಥ್ವಿಶಂಕರ
|

Updated on:Mar 02, 2025 | 2:38 PM

Share

ಚಾಂಪಿಯನ್ಸ್ ಟ್ರೋಫಿಯ (Champions Trophy 2025) ಔಪಚಾರಿಕ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ಮುಖಾಮುಖಿಯಾಗಿವೆ. ಎರಡೂ ತಂಡಗಳು ಸೆಮಿಫೈನಲ್ ತಲುಪಿವೆಯಾದರೂ ಈ ಪಂದ್ಯದ ಫಲಿತಾಂಶ ಯಾವ ತಂಡ ಗುಂಪಿನಲ್ಲಿ ಅಗ್ರಸ್ಥಾನ ಪಡೆದು ಸೆಮಿಫೈನಲ್‌ಗೆ ಮುನ್ನಡೆಯುತ್ತದೆ ಎಂಬುದನ್ನು ಖಚಿತಪಡಿಸುತ್ತದೆ. ಈ ಪಂದ್ಯದಲ್ಲಿ ಭಾರತ ಗೆದ್ದರೆ, ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಒಂದು ವೇಳೆ ಸೋತರೆ ದಕ್ಷಿಣ ಆಫ್ರಿಕಾವನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ, ಈ ಪಂದ್ಯ ಎರಡೂ ತಂಡಗಳಗೆ ಮಹತ್ವದಾಗಿದೆ. ಇದೀಗ ಪಂದ್ಯದ ಟಾಸ್ ಮುಗಿದಿದ್ದು, ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.

ಭಾರತ ತಂಡದಲ್ಲಿ 1 ಬದಲಾವಣೆ

ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವು ಖಚಿತವಾಗಿದೆ. ಆ ಪ್ರಕಾರ ಟೀಂ ಇಂಡಿಯಾದಲ್ಲಿ ನಾಯಕ ರೋಹಿತ್ ಶರ್ಮಾ ಒಂದು ಬದಲಾವಣೆ ಮಾಡಿದ್ದಾರೆ. ವಾಸ್ತವವಾಗಿ ಇದುವರೆಗೆ ಆಡಿದ ಎರಡು ಪಂದ್ಯಗಳಲ್ಲಿ ರೋಹಿತ್ ಶರ್ಮಾ ಅದೇ ಪ್ಲೇಯಿಂಗ್ 11 ಅನ್ನು ಕಣಕ್ಕಿಳಿಸಿದ್ದರು. ಆದಾಗ್ಯೂ, ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ.

ಟಾಸ್ ಸೋತ ಬಳಿಕ ಮಾತನಾಡಿದ ರೋಹಿತ್ ಎರಡೂ ಪಂದ್ಯಗಳಲ್ಲಿ ನಾವು ಚೇಸಿಂಗ್ ಮಾಡಿದ್ದರಿಂದ, ಈ ಪಂದ್ಯದಲ್ಲಿ ನಾವು ಮೊದಲು ಬ್ಯಾಟಿಂಗ್ ಮಾಡಲು ಬಯಸಿದ್ದೆವು ಎಂದರು. ಆ ಬಳಿಕ ತಂಡದಲ್ಲಾಗಿರುವ ಬದಲಾವಣೆಯ ಬಗ್ಗೆ ಮಾತನಾಡಿದ ರೋಹಿತ್, ಹರ್ಷಿತ್‌ಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಬದಲಿಗೆ ಸ್ಪಿನ್ನರ್ ವರುಣ್ ಚಕ್ರವರ್ತಿ ಆಡುತ್ತಿದ್ದಾರೆ ಎಂದರು.

ಇದನ್ನೂ ಓದಿ: ವಿದೇಶಿಗರನ್ನು ಅಪಹರಿಸಿ ಸುಲಿಗೆಗೆ ಸಂಚು; ಚಾಂಪಿಯನ್ಸ್ ಟ್ರೋಫಿಗೆ ಭಯೋತ್ಪಾದಕರ ಭೀತಿ

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ.

ನ್ಯೂಜಿಲೆಂಡ್ ತಂಡ: ವಿಲ್ ಯಂಗ್, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ವಿಲಿಯಂ ಒ’ರೂರ್ಕ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:33 pm, Sun, 2 March 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ