
ಚಾಂಪಿಯನ್ಸ್ ಟ್ರೋಫಿಯ (Champions Trophy 2025) ಔಪಚಾರಿಕ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ಮುಖಾಮುಖಿಯಾಗಿವೆ. ಎರಡೂ ತಂಡಗಳು ಸೆಮಿಫೈನಲ್ ತಲುಪಿವೆಯಾದರೂ ಈ ಪಂದ್ಯದ ಫಲಿತಾಂಶ ಯಾವ ತಂಡ ಗುಂಪಿನಲ್ಲಿ ಅಗ್ರಸ್ಥಾನ ಪಡೆದು ಸೆಮಿಫೈನಲ್‌ಗೆ ಮುನ್ನಡೆಯುತ್ತದೆ ಎಂಬುದನ್ನು ಖಚಿತಪಡಿಸುತ್ತದೆ. ಈ ಪಂದ್ಯದಲ್ಲಿ ಭಾರತ ಗೆದ್ದರೆ, ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಒಂದು ವೇಳೆ ಸೋತರೆ ದಕ್ಷಿಣ ಆಫ್ರಿಕಾವನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ, ಈ ಪಂದ್ಯ ಎರಡೂ ತಂಡಗಳಗೆ ಮಹತ್ವದಾಗಿದೆ. ಇದೀಗ ಪಂದ್ಯದ ಟಾಸ್ ಮುಗಿದಿದ್ದು, ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.
ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವು ಖಚಿತವಾಗಿದೆ. ಆ ಪ್ರಕಾರ ಟೀಂ ಇಂಡಿಯಾದಲ್ಲಿ ನಾಯಕ ರೋಹಿತ್ ಶರ್ಮಾ ಒಂದು ಬದಲಾವಣೆ ಮಾಡಿದ್ದಾರೆ. ವಾಸ್ತವವಾಗಿ ಇದುವರೆಗೆ ಆಡಿದ ಎರಡು ಪಂದ್ಯಗಳಲ್ಲಿ ರೋಹಿತ್ ಶರ್ಮಾ ಅದೇ ಪ್ಲೇಯಿಂಗ್ 11 ಅನ್ನು ಕಣಕ್ಕಿಳಿಸಿದ್ದರು. ಆದಾಗ್ಯೂ, ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ.
🚨 Toss 🚨 #TeamIndia have been to put into bat first against New Zealand
Updates ▶️ https://t.co/Ba4AY30p5i#TeamIndia | #NZvIND | #ChampionsTrophy pic.twitter.com/uhSvImvgEQ
— BCCI (@BCCI) March 2, 2025
ಟಾಸ್ ಸೋತ ಬಳಿಕ ಮಾತನಾಡಿದ ರೋಹಿತ್ ಎರಡೂ ಪಂದ್ಯಗಳಲ್ಲಿ ನಾವು ಚೇಸಿಂಗ್ ಮಾಡಿದ್ದರಿಂದ, ಈ ಪಂದ್ಯದಲ್ಲಿ ನಾವು ಮೊದಲು ಬ್ಯಾಟಿಂಗ್ ಮಾಡಲು ಬಯಸಿದ್ದೆವು ಎಂದರು. ಆ ಬಳಿಕ ತಂಡದಲ್ಲಾಗಿರುವ ಬದಲಾವಣೆಯ ಬಗ್ಗೆ ಮಾತನಾಡಿದ ರೋಹಿತ್, ಹರ್ಷಿತ್‌ಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಬದಲಿಗೆ ಸ್ಪಿನ್ನರ್ ವರುಣ್ ಚಕ್ರವರ್ತಿ ಆಡುತ್ತಿದ್ದಾರೆ ಎಂದರು.
ಇದನ್ನೂ ಓದಿ: ವಿದೇಶಿಗರನ್ನು ಅಪಹರಿಸಿ ಸುಲಿಗೆಗೆ ಸಂಚು; ಚಾಂಪಿಯನ್ಸ್ ಟ್ರೋಫಿಗೆ ಭಯೋತ್ಪಾದಕರ ಭೀತಿ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ.
ನ್ಯೂಜಿಲೆಂಡ್ ತಂಡ: ವಿಲ್ ಯಂಗ್, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ವಿಲಿಯಂ ಒ’ರೂರ್ಕ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:33 pm, Sun, 2 March 25