India vs New Zealand: ಭಾರತ-ನ್ಯೂಜಿಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ: ಮ್ಯಾಚ್ ನಡೆಸಲು ಹೊಸ ಪ್ಲ್ಯಾನ್

India vs New Zealand: ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾ 6 ರನ್​ಗಳಿಂದ ರೋಚಕ ಜಯ ಸಾಧಿಸಿತು. ಇದೀಗ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಅಭ್ಯಾಸವನ್ನು ಎದುರು ನೋಡಿದ್ದ ಟೀಮ್ ಇಂಡಿಯಾಗೆ ನಿರಾಸೆ ಎದುರುರಾಗಿದೆ.

India vs New Zealand: ಭಾರತ-ನ್ಯೂಜಿಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ: ಮ್ಯಾಚ್ ನಡೆಸಲು ಹೊಸ ಪ್ಲ್ಯಾನ್
India vs New Zealand
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 19, 2022 | 2:17 PM

T20 World Cup 2022: ಬ್ರಿಸ್ಬೇನ್​ನಲ್ಲಿ ಇಂದು ಮಧ್ಯಾಹ್ನ ಶುರುವಾಗಬೇಕಿದ್ದ ಭಾರತ-ನ್ಯೂಜಿಲೆಂಡ್ (India vs New zealand) ನಡುವಣ ಅಭ್ಯಾಸ ಪಂದ್ಯವು ಮಳೆಯ ಕಾರಣ ವಿಳಂಬವಾಗಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 1.30 ಕ್ಕೆ ಆರಂಭವಾಗಬೇಕಿದ್ದ ಪಂದ್ಯಕ್ಕೆ ವರುಣ ಅಡಿಯಾಗಿದ್ದು, ಹೀಗಾಗಿ ಪಂದ್ಯವು ತಡವಾಗಿ ಶುರುವಾಗುವ ಸಾಧ್ಯತೆಯಿದೆ. ಇನ್ನು ಈ ಪಂದ್ಯದ ಕಟ್ ಆಫ್ ಟೈಮ್ ಸಂಜೆ 4.16 PM. ಆ ಬಳಿಕ ಕೂಡ ಪಂದ್ಯ ಆಯೋಜಿಸಲು ಸಾಧ್ಯವಾಗದಿದ್ದರೆ ಪಂದ್ಯವನ್ನು ರದ್ದುಗೊಳಿಸುವ ತೀರ್ಮಾನಕ್ಕೆ ಬರಲಾಗುತ್ತದೆ. ಒಂದು ವೇಳೆ ಇದರ ಮಧ್ಯೆ ಪಂದ್ಯ ಆಯೋಜಿಸಲು ಅನುಕೂಲಕರ ಸನ್ನಿವೇಶವಿದ್ದರೆ ಈ ಪಂದ್ಯವನ್ನು ಓವರ್​ಗಳ ಕಡಿತದೊಂದಿಗೆ ಆರಂಭಿಸಬಹುದು.

ಇನ್ನು ಕಟ್​ ಆಫ್ ಟೈಮ್ ಬಳಿಕ ಪಂದ್ಯ ಆಯೋಜಿಸುವುದಾದರೆ 5 ಓವರ್​ಗಳಿಗೆ ಸೀಮಿತಗೊಳಿಸಲಾಗುತ್ತದೆ. ಅಂದರೆ ಉಭಯ ತಂಡಗಳು ಕೇವಲ 5 ಓವರ್​ಗಳ ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಇನ್ನು ಐದು ಓವರ್​ಗಳ ಪಂದ್ಯವನ್ನು ಆಯೋಜಿಸಲು ಸಾಧ್ಯವಾಗದಂತಹ ಪರಿಸ್ಥಿತಿ ಇದ್ದರೆ ಮಾತ್ರ ಈ ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ.

ಇದಕ್ಕೂ ಮುನ್ನ ನಡೆದ ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾ 6 ರನ್​ಗಳಿಂದ ರೋಚಕ ಜಯ ಸಾಧಿಸಿತು. ಇದೀಗ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಅಭ್ಯಾಸವನ್ನು ಎದುರು ನೋಡಿದ್ದ ಟೀಮ್ ಇಂಡಿಯಾಗೆ ನಿರಾಸೆ ಎದುರುರಾಗಿದೆ. ಏಕೆಂದರೆ ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಈ ಅಭ್ಯಾಸ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಹೀಗಾಗಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ನೊಂದಿಗೆ ಕಣಕ್ಕಿಳಿಯುವ ಟೀಮ್ ಇಂಡಿಯಾದ ಯೋಜನೆಗಳು ತಲೆಕೆಳಗಾಗಿದೆ.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಇದಾಗ್ಯೂ 5 ಓವರ್​ಗಳ ಪಂದ್ಯದಲ್ಲಿ ಗೆಲ್ಲುವ ಮೂಲಕ ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ. ಏಕೆಂದರೆ ನ್ಯೂಜಿಲೆಂಡ್ ಟಿ20 ವಿಶ್ವಕಪ್​ನಲ್ಲಿ ಗ್ರೂಪ್-1 ನಲ್ಲಿರುವ ತಂಡ. ಅಂದರೆ ಟೀಮ್ ಇಂಡಿಯಾ ಗ್ರೂಪ್​-2 ನಲ್ಲಿದ್ದು, ಈ ತಂಡವನ್ನು ಸೂಪರ್-12 ಸುತ್ತಿನಲ್ಲಿ ಎದುರಿಸುವುದಿಲ್ಲ. ಆದರೆ ಈ ಕಿವೀಸ್​ ತಂಡ ಸೆಮಿಫೈನಲ್ ಹಂತದಲ್ಲಿ ಟೀಮ್ ಇಂಡಿಯಾಗೆ ಎದುರಾಗಬಹುದು. ಹೀಗಾಗಿ ಅಭ್ಯಾಸ ಪಂದ್ಯಗಳಲ್ಲೇ ಮೇಲುಗೈ ಸಾಧಿಸಲು ಟೀಮ್ ಇಂಡಿಯಾ ಪಣತೊಟ್ಟಿದೆ.

ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ನ್ಯೂಜಿಲೆಂಡ್ ತಂಡ ಹೀಗಿದೆ:

ಕೇನ್ ವಿಲಿಯಮ್ಸನ್ (ನಾಯಕ), ಟಿಮ್ ಸೌಥಿ, ಇಶ್ ಸೋಧಿ, ಮಿಚೆಲ್ ಸ್ಯಾಂಟ್ನರ್, ಗ್ಲೆನ್ ಫಿಲಿಪ್ಸ್, ಜಿಮ್ಮಿ ನೀಶಮ್, ಡೇರಿಲ್ ಮಿಚೆಲ್, ಆಡಮ್ ಮಿಲ್ನ್, ಮಾರ್ಟಿನ್ ಗಪ್ಟಿಲ್, ಲಾಕಿ ಫರ್ಗುಸನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಮೈಕಲ್ ಬ್ರೇಸ್ವೆಲ್, ಟ್ರೆಂಟ್ ಬೌಲ್ಟ್, ಟ್ರೆಂಟ್ ಬೌಲ್ಟ್, ಫಿನ್ ಅಲೆನ್.

ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್