ಕಿವೀಸ್ ವಿರುದ್ಧ ಭರ್ಜರಿ ಗೆಲುವು; ಟೀಂ ಇಂಡಿಯಾದ ಮುಂದೆ ವಿಶೇಷ ಬೇಡಿಕೆ ಇಟ್ಟ ನಾಯಕ ಹಾರ್ದಿಕ್..!

NZ vs IND: ಮುಂಬರುವ ದಿನಗಳಲ್ಲಿ ತಂಡದಲ್ಲಿ ಹೆಚ್ಚಿನ ಬೌಲಿಂಗ್ ಆಯ್ಕೆಗಳನ್ನು ನೋಡಲು ಬಯಸುತ್ತೇನೆ. ತಂಡದಲ್ಲಿ ಬ್ಯಾಟಿಂಗ್ ಜೊತೆಗೆ ಬೌಲಿಂಗ್ ಕೂಡ ಮಾಡುವ ಆಟಗಾರನಿದ್ದರೆ ಹೆಚ್ಚು ಅನುಕೂಲ ಎಂದು ಪಾಂಡ್ಯ ಹೇಳಿದ್ದಾರೆ.

ಕಿವೀಸ್ ವಿರುದ್ಧ ಭರ್ಜರಿ ಗೆಲುವು; ಟೀಂ ಇಂಡಿಯಾದ ಮುಂದೆ ವಿಶೇಷ ಬೇಡಿಕೆ ಇಟ್ಟ ನಾಯಕ ಹಾರ್ದಿಕ್..!
Ind Vs Nz
Follow us
TV9 Web
| Updated By: ಪೃಥ್ವಿಶಂಕರ

Updated on:Nov 20, 2022 | 7:13 PM

ಟಿ20 ಮಾದರಿಯಲ್ಲಿ ಭಾರತ ಕ್ರಿಕೆಟ್ ತಂಡದಲ್ಲಿ ಬದಲಾವಣೆಯ ಗಾಳಿ ಬೀಸಲಾರಂಭಿಸಿದೆ. ಬೇಡಿಕೆಗಳು, ಸಲಹೆಗಳು ಮತ್ತು ಪ್ರತಿಕ್ರಿಯೆಗಳ ರೂಪದಲ್ಲಿ ತಂಡದ ನಾಯಕತ್ವವನ್ನು ಬದಲಾಯಿಸುವ ಮಾತುಕತೆಗಳು ನಡೆಯುತ್ತಿವೆ. ಅಲ್ಲದೆ ಟಿ20 ವಿಶ್ವಕಪ್ (T20 World Cup 2022) ವೈಫಲ್ಯದ ನಂತರ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಮಾಡುವ ಚರ್ಚೆಯೂ ಹೆಚ್ಚುತ್ತಿದೆ. ಪ್ರಸ್ತುತ, ಪಾಂಡ್ಯ ನ್ಯೂಜಿಲೆಂಡ್‌ನಲ್ಲಿ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾವನ್ನು (Team India) ಮುನ್ನಡೆಸುತ್ತಿದ್ದಾರೆ. ಕಿವೀಸ್ ಎದುರು ಆಡಿದ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಸುಲಭವಾಗಿ ಜಯ ಸಾಧಿಸಿದೆ. ಈ ಪಂದ್ಯದ ನಂತರ ಮಾತನಾಡಿದ ಹಾರ್ದಿಕ್ ಪಾಂಡ್ಯ (Hardik Pandya) ತಂಡದ ಮುಂದೆ ವಿಶೇಷ ಬೇಡಿಕೆ ಇಟ್ಟಿದ್ದು, ಈಗ ತಮ್ಮದೇ ಆದ ರೀತಿಯಲ್ಲಿ ತಂಡವನ್ನು ನಡೆಸಲು ಸಿದ್ಧರಾಗಿದ್ದಾರೆ ಎಂಬ ಸೂಚನೆ ನೀಡಿದ್ದಾರೆ.

ನವೆಂಬರ್ 20 ರ ಭಾನುವಾರದಂದು ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಸೂಪರ್ ಬ್ಯಾಟಿಂಗ್ ಮಾಡಿದರು. ಈ ಸ್ಟಾರ್ ಬ್ಯಾಟ್ಸ್‌ಮನ್ ತಮ್ಮ ಟಿ20 ವೃತ್ತಿಜೀವನದ ಎರಡನೇ ಶತಕವನ್ನು ಗಳಿಸುವ ಮೂಲಕ ರನ್ ಲೂಟಿ ಮಾಡಿದರು. ನಂತರ ಬೌಲಿಂಗ್​ನಲ್ಲಿ ಮಿಂಚಿದ ಚಾಹಲ್ ಹಾಗೂ ಹೂಡಾ ನ್ಯೂಜಿಲೆಂಡ್ ತಂಡವನ್ನು ಕೇವಲ 126 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. ಈ ಮೂಲಕ ಭಾರತಕ್ಕೆ 65 ರನ್‌ಗಳ ಸುಲಭ ಜಯ ತಂದುಕೊಟ್ಟರು. ಟೀಂ ಇಂಡಿಯಾದ ಈ ದೊಡ್ಡ ಗೆಲುವಿನಲ್ಲಿ ಪಾರ್ಟ್ ಟೈಮ್ ಆಫ್ ಸ್ಪಿನ್ನರ್ ದೀಪಕ್ ಹೂಡಾ ಕೂಡ ಪ್ರಮುಖ ಪಾತ್ರವಹಿಸಿ 4 ವಿಕೆಟ್ ಪಡೆದರು.

ಬ್ಯಾಟ್ಸ್‌ಮನ್‌ಗಳು ಕೂಡ ಬೌಲಿಂಗ್​ನಲ್ಲಿ ಕೊಡುಗೆ ನೀಡಬೇಕು

ಟೀಂ ಇಂಡಿಯಾದ ಈ ಗೆಲುವಿನ ಬಗ್ಗೆ ಮತ್ತು ವಿಶೇಷವಾಗಿ ಅರೆಕಾಲಿಕ ಬೌಲರ್‌ಗಳ ಪ್ರಾಮುಖ್ಯತೆ ಮತ್ತು ಅಗತ್ಯತೆಯ ಬಗ್ಗೆ ಮಾತನಾಡಿದ ನಾಯಕ ಪಾಂಡ್ಯ, ತಂಡದ ಇತರ ಬ್ಯಾಟ್ಸ್‌ಮನ್‌ಗಳಿಂದಲೂ ಚೆಂಡಿನ ಮೂಲಕ ಸಹಾಯವನ್ನು ನಿರೀಕ್ಷಿಸುವುದಾಗಿ ಹೇಳಿದರು.

ಈ ಪಂದ್ಯದಲ್ಲಿ ಮಳೆ ಸುರಿದಿದ್ದರಿಂದ ಪಿಚ್ ತುಂಬಾ ತೇವವಾಗಿತ್ತು, ಆದ್ದರಿಂದ ಈ ಗೆಲುವಿನ ಕ್ರೆಡಿಟ್ ಬೌಲರ್‌ಗಳಿಗೆ ಹೋಗುತ್ತದೆ. ಅಲ್ಲದೆ ಮುಂಬರುವ ದಿನಗಳಲ್ಲಿ ತಂಡದಲ್ಲಿ ಹೆಚ್ಚಿನ ಬೌಲಿಂಗ್ ಆಯ್ಕೆಗಳನ್ನು ನೋಡಲು ಬಯಸುತ್ತೇನೆ. ತಂಡದಲ್ಲಿ ಬ್ಯಾಟಿಂಗ್ ಜೊತೆಗೆ ಬೌಲಿಂಗ್ ಕೂಡ ಮಾಡುವ ಆಟಗಾರನಿದ್ದರೆ ಹೆಚ್ಚು ಅನುಕೂಲ. ಈ ತಂತ್ರ ಯಾವಾಗಲೂ ಕೆಲಸ ಮಾಡದೆ ಇರಬಹುದು. ಆದರೆ ಹೆಚ್ಚು ಹೆಚ್ಚು ಬ್ಯಾಟ್ಸ್‌ಮನ್‌ಗಳು ಚೆಂಡಿನೊಂದಿಗೆ ಕೊಡುಗೆ ನೀಡಬೇಕೆಂದು ನಾನು ಬಯಸುತ್ತೇನೆ ಎಂದು ಹಾರ್ದಿಕ್ ಹೇಳಿದ್ದಾರೆ.

ಟಾಪ್ ಆರ್ಡರ್​ನಲ್ಲಿ ಬೌಲಿಂಗ್ ಮಾಡುವವರಿಲ್ಲ

ಭಾರತ ತಂಡವು ಇಲ್ಲಿಯವರೆಗೆ ನಾಯಕ ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಮತ್ತು ಶ್ರೇಯಸ್ ಅಯ್ಯರ್ ಅವರಂತಹ ಬ್ಯಾಟ್ಸ್‌ಮನ್‌ಗಳನ್ನು ಅಗ್ರ ಕ್ರಮಾಂಕದಲ್ಲಿ ಹೊಂದಿದೆ. ಆದರೆ ಇವರಲ್ಲಿ ಯಾರೂ ಕೂಡ ಬೌಲಿಂಗ್ ಮಾಡಿಲ್ಲ. ಹೀಗಾಗಿ ಕ್ರಿಕೆಟ್ ತಜ್ಞರು ಟೀಂ ಇಂಡಿಯಾದ ಈ ದೌರ್ಬಲ್ಯವನ್ನು ಹೆಚ್ಚಾಗಿ ದೂಷಿಸುತ್ತಿದ್ದಾರೆ. ಈ ನ್ಯೂನತೆಯನ್ನು ಸರಿಪಡಿಸದಿರುವುದರಿಂದಲೇ ಭಾರತವು ದೊಡ್ಡ ಟೂರ್ನಿಗಳಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಆದರೆ ಈಗ ದೀಪಕ್ ಹೂಡಾ ಅವರ ರೂಪದಲ್ಲಿ ಟೀಂ ಇಂಡಿಯಾಕ್ಕೆ ಉತ್ತಮ ಆಲ್​ರೌಂಡರ್ ಸಿಕ್ಕಿದ್ದಾನೆ. ಹೂಡಾ ಉತ್ತಮ ಬ್ಯಾಟ್ಸ್‌ಮನ್ ಮತ್ತು ಉಪಯುಕ್ತ ಅರೆಕಾಲಿಕ ಆಫ್-ಸ್ಪಿನ್ನರ್ ಕೂಡ ಆಗಿದ್ದಾರೆ. ಆದಾಗ್ಯೂ ಏಷ್ಯಾಕಪ್ ಮತ್ತು ನಂತರ ಟಿ20 ವಿಶ್ವಕಪ್‌ನಲ್ಲಿ ಹೂಡಾಗೆ ಬೌಲಿಂಗ್ ಮಾಡಲು ಅವಕಾಶ ನೀಡಲಿಲ್ಲ.

Published On - 7:09 pm, Sun, 20 November 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್