Shreyas Iyer: ಶ್ರೇಯಸ್ ಅಯ್ಯರ್ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಆಗಿದ್ದೇಕೆ ಗೊತ್ತಾ?: ಕಾರಣ ಬಹಿರಂಗ

| Updated By: Vinay Bhat

Updated on: Nov 13, 2021 | 12:31 PM

India squad for New Zealand Tests Series: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಬಿಸಿಸಿಐ ಭಾರತದ 16ಸದಸ್ಯರ ತಂಡವನ್ನು ಪ್ರಕಟ ಮಾಡಿದ್ದು, ಇದರಲ್ಲಿ ಶ್ರೇಯಸ್ ಅಯ್ಯರ್ ಕೂಡ ಸ್ಥಾನ ಪಡೆದುಕೊಂಡಿದ್ದಾರೆ. ಈವರೆಗೆ ಒಂದೇ ಒಂದು ಟೆಸ್ಟ್ ಪಂದ್ಯವನ್ನಾಡದ ಅಯ್ಯರ್ ಆಯ್ಕೆ ಆಗಿದ್ದು ಯಾಕೆ ಗೊತ್ತಾ?

Shreyas Iyer: ಶ್ರೇಯಸ್ ಅಯ್ಯರ್ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಆಗಿದ್ದೇಕೆ ಗೊತ್ತಾ?: ಕಾರಣ ಬಹಿರಂಗ
Shreyas Iyer India vs New Zealand Test
Follow us on

ರಾಹುಲ್ ದ್ರಾವಿಡ್ (Rahul Dravid) ಕೋಚ್ ಅಡಿಯಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ (India vs New Zealand Series) ವಿರುದ್ಧದ ಟಿ20 ಮತ್ತು ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಶುಕ್ರವಾರವಷ್ಟೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕಿವೀಸ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟ ಮಾಡಿತ್ತು. ಇದರಲ್ಲಿ ಕೆಲವೊಂದು ಅಚ್ಚರಿಯ ಆಯ್ಕೆ ಕೂಡ ಇತ್ತು. ಮೊದಲ ಟೆಸ್ಟ್​ನಿಂದ ವಿರಾಟ್ ಕೊಹ್ಲಿ (Virat Kohli) ಹೊರಗುಳಿದಿದ್ದು ಅಜಿಂಕ್ಯಾ ರಹಾನೆ (Ajinkya Rahane) ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮಾಗೆ (Rohit Sharma) ವಿಶ್ರಾಂತಿ ನೀಡಲಾಗಿದ್ದು ಚೇತೇಶ್ವರ್ ಪೂಜಾರಗೆ ಉಪ ನಾಯಕನ ಪಟ್ಟ ನೀಡಲಾಗಿದೆ. ಇದರ ನಡುವೆ ಅಚ್ಚರಿ ಎಂಬಂತೆ ಇದು ವರೆಗೆ ಟೀಮ್ ಇಂಡಿಯಾ (Team India) ಪರ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಆಡದ ಶ್ರೇಯಸ್ ಅಯ್ಯರ್ (Shreyas Iyer) 16 ಸದಸ್ಯರ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಬಿಸಿಸಿಐ ರೋಹಿತ್ ಶರ್ಮಾ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ರಿಷಭ್ ಪಂತ್, ಶಾರ್ದೂಲ್ ಠಾಕೂರ್ ಅವರಿಗೆ ವಿಶ್ರಾಂತಿ ನೀಡಿದೆ. ಇದರ ಜೊತೆಗೆ ಹನುಮಾ ವಿಹಾರಿಯನ್ನು ಕೈಬಿಟ್ಟು ಶ್ರೇಯಸ್ ಅಯ್ಯರ್, ಕೆಎಸ್ ಭರತ್ ಮತ್ತು ಜಯಂತ್ ಯಾದವ್ ಅವರನ್ನು ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿದೆ. ಇದರಲ್ಲಿ ಅಯ್ಯರ್ ಆಯ್ಕೆ ಸಾಕಷ್ಟು ಕುತೂಹಲ ಕೆರಳಿಸಿದೆ. ಯಾಕಂದ್ರೆ ಇವರು ಇದುವರೆಗೆ ಭಾರತ ಪರ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಆಡಿಲ್ಲ.

ಮೂಲಗಳ ಪ್ರಕಾರ, ಶ್ರೇಯಸ್ ಅಯ್ಯರ್ ಅವರನ್ನು ಮಧ್ಯಮ ಕ್ರಮಾಂಕದ ಬ್ಯಾಕಪ್ ಆಟಗಾರನಾಗಿ ಆಯ್ಕೆ ಮಾಡಲಾಗಿದೆಯಂತೆ. ಹನುಮಾ ವಿಹಾರಿ ಮತ್ತು ಪೃಥ್ವಿ ಶಾ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ಎ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಹೀಗಾಗಿ ಅಯ್ಯರ್ ಟೀಮ್ ಇಂಡಿಯಾ ಟೆಸ್ಟ್​ಗೆ ಸೇರಿಕೊಂಡಿದ್ದಾರೆ. ಇದರ ಜೊತೆಗೆ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಅವರನ್ನು ಪ್ರಮುಖ ಬ್ಯಾಟಿಂಗ್ ಅಸ್ತ್ರವನ್ನಾಗಿ ಉಪಯೋಗಿಸಿಕೊಳ್ಳಲಿದೆಯಂತೆ.

ಇನ್ನು ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಿರುವ ಪ್ರತಿಯೊಬ್ಬ ಆಟಗಾರನ ಜೊತೆ ಪ್ರತ್ಯೇಕವಾಗಿ ದ್ರಾವಿಡ್ ಅವರು ಚರ್ಚೆಯನ್ನು ನಡೆಸಲಿದ್ದಾರೆ. ನೂತನ ಕೋಚ್ ಆಗಿ ಆಯ್ಕೆಯಾದ ಕೂಡಲೇ ತಂಡದ ಎಲ್ಲ ಆಟಗಾರರನ್ನು ಗುಂಪು ಸೇರಿಸಿ ಮಾತನಾಡುವ ಬದಲಾಗಿ ಒಬ್ಬೊಬ್ಬರನ್ನೇ ಭೇಟಿಯಾಗುವುದರ ಮೂಲಕ ಚರ್ಚೆ ನಡೆಸಲು ರಾಹುಲ್ ದ್ರಾವಿಡ್ ಮುಂದಾಗಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ:

ಅಜಿಂಕ್ಯಾ ರಹಾನೆ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ (ಉಪ – ನಾಯಕ), ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ದಿಮಾನ್ ಸಾಹ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ.

Mohammad Rizwan: ಐಸಿಯುನಲ್ಲಿ ಚೆನ್ನಾಗಿ ನೋಡಿಕೊಂಡ ಭಾರತೀಯ ವೈದ್ಯನಿಗೆ ರಿಜ್ವಾನ್ ನೀಡಿದ ಗಿಫ್ಟ್ ಏನು ಗೊತ್ತಾ?

India vs New Zealand: ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಸದ್ದಿಲ್ಲದೆ ದ್ರಾವಿಡ್ ಮಾಡಿರುವ ಆ ಮಾಸ್ಟರ್ ಪ್ಲಾನ್ ಏನು ಗೊತ್ತಾ?

(India vs New Zealand Here is the Reason why BCCI select Shreyas Iyer for Test series against New Zealand)