IND vs NZ: ಕಿವೀಸ್ ವಿರುದ್ಧದ T20 ಸರಣಿಯ ನಂತರ ಈ 4 ಟೀಂ ಇಂಡಿಯಾ ಆಟಗಾರರಿಗೆ ಟೆಸ್ಟ್‌ ಸರಣಿಯಿಂದ ಕೋಕ್

IND vs NZ: ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಶಾರ್ದೂಲ್ ಠಾಕೂರ್ ಟಿ20 ನಂತರ ಟೆಸ್ಟ್ ಸರಣಿಯಲ್ಲಿ ಆಡುವುದಿಲ್ಲ. ಅದೇ ಸಮಯದಲ್ಲಿ ಟಿ20 ಸರಣಿಗೆ ತಂಡದಲ್ಲಿ ಆಯ್ಕೆಯಾಗಿರುವ ರಿಷಬ್ ಪಂತ್ ಕೂಡ ಟೆಸ್ಟ್ ಸರಣಿಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

IND vs NZ: ಕಿವೀಸ್ ವಿರುದ್ಧದ T20 ಸರಣಿಯ ನಂತರ ಈ 4 ಟೀಂ ಇಂಡಿಯಾ ಆಟಗಾರರಿಗೆ ಟೆಸ್ಟ್‌ ಸರಣಿಯಿಂದ ಕೋಕ್
ಟೀಂ ಇಂಡಿಯಾ
Follow us
TV9 Web
| Updated By: ಪೃಥ್ವಿಶಂಕರ

Updated on: Nov 11, 2021 | 4:27 PM

2021 ರ ಟಿ 20 ವಿಶ್ವಕಪ್‌ನಲ್ಲಿ ಭಾರತೀಯ ಕ್ರಿಕೆಟ್ ತಂಡದ ಪ್ರದರ್ಶನವು ತುಂಬಾ ಕಳಪೆಯಾಗಿತ್ತು. ಇದರ ಫಲವಾಗಿ ಟೀಂ ಇಂಡಿಯಾ ಸೂಪರ್-12 ರೌಂಡ್‌ನಿಂದಲೇ ಹೊರಬಿತ್ತು. ಆದರೆ ಇದೀಗ ಟೀಂ ಇಂಡಿಯಾ ಮುಂದೆ ಹೊಸ ಸವಾಲು ಎದುರಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ T20 ಸರಣಿಯನ್ನು (ಭಾರತ vs ನ್ಯೂಜಿಲೆಂಡ್) ಆಡಲಿದೆ, ನಂತರ ಉಭಯ ತಂಡಗಳ ನಡುವೆ 2-ಟೆಸ್ಟ್ ಸರಣಿಯನ್ನು ಆಡಲಿದೆ. ಟಿ20 ಸರಣಿಗೆ ತಂಡವನ್ನು ಪ್ರಕಟಿಸಲಾಗಿದ್ದು, ಹಲವು ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಇದೀಗ ಟೆಸ್ಟ್ ಸರಣಿಯಲ್ಲೂ ಭಾರತದ 4 ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಬಹುದು ಎಂಬ ಸುದ್ದಿ ಬಂದಿದೆ.

ಟೈಮ್ಸ್ ಆಫ್ ಇಂಡಿಯಾದಲ್ಲಿ ಪ್ರಕಟವಾದ ವರದಿಯ ಪ್ರಕಾರ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಶಾರ್ದೂಲ್ ಠಾಕೂರ್ ಟಿ20 ನಂತರ ಟೆಸ್ಟ್ ಸರಣಿಯಲ್ಲಿ ಆಡುವುದಿಲ್ಲ. ಅದೇ ಸಮಯದಲ್ಲಿ ಟಿ20 ಸರಣಿಗೆ ತಂಡದಲ್ಲಿ ಆಯ್ಕೆಯಾಗಿರುವ ರಿಷಬ್ ಪಂತ್ ಕೂಡ ಟೆಸ್ಟ್ ಸರಣಿಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ವಿರಾಟ್ ಕೊಹ್ಲಿ ಟೆಸ್ಟ್ ಸರಣಿಯ ಎರಡೂ ಪಂದ್ಯಗಳನ್ನು ಆಡುವುದಿಲ್ಲ. ವಿರಾಟ್ ಕೊಹ್ಲಿ ಮುಂಬೈ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಸೇರುತ್ತಾರೆ, ಕಾನ್ಪುರ ಅಲ್ಲ ಎಂದು ನಂಬಲಾಗಿದೆ. ಇದಾದ ಬಳಿಕ ಟೀಂ ಇಂಡಿಯಾ ಡಿಸೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಲಿದೆ.

ಪಂತ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಯಾರು? ರಿಷಬ್ ಪಂತ್ ಅವರಿಗೆ ವಿಶ್ರಾಂತಿ ನೀಡಿದರೆ, ವೃದ್ಧಿಮಾನ್ ಸಹಾ ಭಾರತದ ಪ್ಲೇಯಿಂಗ್ XI ನಲ್ಲಿ ಕಾಣಿಸಿಕೊಳ್ಳಬಹುದು ಮತ್ತು ಕೆಎಸ್ ಭರತ್ ಎರಡನೇ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಬಹುದು. ಅಂದಹಾಗೆ, ನ್ಯೂಜಿಲೆಂಡ್ ವಿರುದ್ಧದ ಟಿ 20 ಸರಣಿಯ ಮೊದಲು, ಬಿಸಿಸಿಐ ಬಯೋ ಬಬಲ್‌ನಿಂದ ಆಟಗಾರರಿಗೆ 2 ದಿನಗಳ ರಜೆ ನೀಡಿದೆ. ಎಲ್ಲಾ ಆಟಗಾರರು ಸರಣಿಯ ಮೊದಲು ತಮ್ಮ ಕುಟುಂಬಗಳನ್ನು ಭೇಟಿ ಮಾಡಬಹುದು.

ಭಾರತ-ನ್ಯೂಜಿಲೆಂಡ್ ಟಿ20-ಟೆಸ್ಟ್ ಸರಣಿ ವೇಳಾಪಟ್ಟಿ ನವೆಂಬರ್ 17ರಿಂದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿ ಆರಂಭವಾಗಲಿದ್ದು, ಮೊದಲ ಟಿ20 ಜೈಪುರದಲ್ಲಿ ನಡೆಯಲಿದೆ. ಎರಡನೇ ಟಿ20 ನವೆಂಬರ್ 19 ರಂದು ರಾಂಚಿಯಲ್ಲಿ ಮತ್ತು ಮೂರನೇ ಟಿ20 ನವೆಂಬರ್ 21 ರಂದು ಕೋಲ್ಕತ್ತಾದಲ್ಲಿ ನಡೆಯಲಿದೆ. ಮೊದಲ ಟೆಸ್ಟ್ ಪಂದ್ಯ ನವೆಂಬರ್ 25 ರಿಂದ ಕೋಲ್ಕತ್ತಾದಲ್ಲಿ ಆರಂಭವಾಗಲಿದ್ದು, ಎರಡನೇ ಟೆಸ್ಟ್ ಡಿಸೆಂಬರ್ 3 ರಿಂದ ಮುಂಬೈನಲ್ಲಿ ನಡೆಯಲಿದೆ.

ನ್ಯೂಜಿಲೆಂಡ್ ಟಿ20 ಸರಣಿಗಾಗಿ ಟೀಂ ಇಂಡಿಯಾ – ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರಿತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಇಶಾನ್ ಕಿಶನ್, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಆರ್ ಅಶ್ವಿನ್, ಅಕ್ಸರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್