IND vs NZ T20 Live Streaming: 2ನೇ ಟಿ20 ಪಂದ್ಯಕ್ಕೆ ಭಾರತ- ಕಿವೀಸ್ ಸಜ್ಜು; ಪಂದ್ಯ ಆರಂಭ ಎಷ್ಟು ಗಂಟೆಗೆ?

IND Vs NZ, 2nd T2OI, Live Streaming: ಸ್ಟಾರ್ ಆಟಗಾರರ ಅನುಪಸ್ಥಿತಿಯಲ್ಲಿ ಯುವ ತಂಡಕ್ಕೆ ತಮ್ಮ ಸಾಮರ್ಥ್ಯ ತೋರಲು ಸಾಕಷ್ಟು ಅವಕಾಶವಿದೆ. ಏಕೆಂದರೆ ವಿಶ್ವಕಪ್‌ನ ಮುಜುಗರದ ಸೋಲಿನ ನಂತರ ಟಿ20 ತಂಡದಲ್ಲಿ ಪ್ರಮುಖ ಬದಲಾವಣೆಗಳನ್ನು ಬಿಸಿಸಿಐ ಪರಿಗಣಿಸುತ್ತಿದೆ.

IND vs NZ T20 Live Streaming: 2ನೇ ಟಿ20 ಪಂದ್ಯಕ್ಕೆ ಭಾರತ- ಕಿವೀಸ್ ಸಜ್ಜು; ಪಂದ್ಯ ಆರಂಭ ಎಷ್ಟು ಗಂಟೆಗೆ?
ಟೀಂ ಇಂಡಿಯಾ
Follow us
TV9 Web
| Updated By: ಪೃಥ್ವಿಶಂಕರ

Updated on:Nov 19, 2022 | 2:35 PM

ಭಾರತ ತಂಡ ಪ್ರಸ್ತುತ ನ್ಯೂಜಿಲೆಂಡ್ (India and New Zealand) ಪ್ರವಾಸದಲ್ಲಿದ್ದು, ಆತಿಥೇಯರೊಂದಿಗೆ 3 ಟಿ20 ಪಂದ್ಯಗಳ ಸರಣಿಯನ್ನು ಆಡಬೇಕಿದೆ. ಆದರೂ ಮೊದಲ ಪಂದ್ಯ ಮಳೆಯಿಂದಾಗಿ ಕೊಚ್ಚಿ ಹೋಗಿತ್ತು. ಭಾರೀ ಮಳೆಯಿಂದಾಗಿ ಮೊದಲ ಪಂದ್ಯದಲ್ಲಿ ಟಾಸ್ ಕೂಡ ಆಗಲಿಲ್ಲ. ಇದೀಗ ಎಲ್ಲರ ಕಣ್ಣು ಎರಡನೇ ಪಂದ್ಯದತ್ತ ನೆಟ್ಟಿದೆ. ಎರಡೂ ತಂಡಗಳು ಟಿ20 ವಿಶ್ವಕಪ್‌ನ (T20 World Cup 2022) ಸೆಮಿಫೈನಲ್​ನಿಂದ ಹೊರಬಿದ್ದಿದ್ದವು. ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್‌ ಎದುರು 10 ವಿಕೆಟ್‌ಗಳ ಸೋಲನ್ನು ಎದುರಿಸಿದರೆ, ನ್ಯೂಜಿಲೆಂಡ್‌ ತಂಡವನ್ನು ಪಾಕಿಸ್ತಾನ ಸೋಲಿಸಿತ್ತು. ಈ ಸೋಲಿನ ನಂತರ ಇದೀಗ ಯುವ ಭಾರತ ತಂಡ ನ್ಯೂಜಿಲೆಂಡ್‌ಗೆ ಸವಾಲೊಡ್ಡಲು ಹೊರಡಲಿದ್ದರೆ, ಕಿವೀಸ್ ತಂಡವು ತಮ್ಮ ಅನುಭವಿ ಬಳಗದೊಂದಿಗೆ ಮೈದಾನಕ್ಕಿಳಿಯಲಿದೆ.

ಈ ಪ್ರವಾಸದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಅನೇಕ ಯುವ ಆಟಗಾರರು ತಮ್ಮ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನಾಡಲು ಕಾತುರರಾಗಿದ್ದಾರೆ. ಅದರಲ್ಲೂ ಶುಭಮನ್ ಗಿಲ್ ಅವರ ಚೊಚ್ಚಲ ಟಿ20 ಪ್ರವೇಶಕ್ಕಾಗಿ ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ. ಕಳೆದ ಪಂದ್ಯದಲ್ಲಿಯೇ ಅವರಿಗೆ ಈ ಅವಕಾಶ ಸಿಗಬಹುದಿತ್ತು, ಆದರೆ ಮಳೆ ಅವರ ಕಾಯುವಿಕೆಯನ್ನು ವಿಸ್ತರಿಸಿತು.

ಟಿ20 ತಂಡದಲ್ಲಿ ದೊಡ್ಡ ಬದಲಾವಣೆ ಯೋಜನೆ

ಸ್ಟಾರ್ ಆಟಗಾರರ ಅನುಪಸ್ಥಿತಿಯಲ್ಲಿ ಯುವ ತಂಡಕ್ಕೆ ತಮ್ಮ ಸಾಮರ್ಥ್ಯ ತೋರಲು ಸಾಕಷ್ಟು ಅವಕಾಶವಿದೆ. ಏಕೆಂದರೆ ವಿಶ್ವಕಪ್‌ನ ಮುಜುಗರದ ಸೋಲಿನ ನಂತರ ಟಿ20 ತಂಡದಲ್ಲಿ ಪ್ರಮುಖ ಬದಲಾವಣೆಗಳನ್ನು ಬಿಸಿಸಿಐ ಪರಿಗಣಿಸುತ್ತಿದೆ. ಏತನ್ಮಧ್ಯೆ, ಮಂಡಳಿಯು ಆಯ್ಕೆ ಸಮಿತಿಯನ್ನು ಸಹ ವಜಾ ಮಾಡಿತು. ಶೀಘ್ರದಲ್ಲೇ ಹೊಸ ಆಯ್ಕೆ ಮಂಡಳಿಯ ಆಯ್ಕೆಯಾಗಲಿದ್ದು, ಭಾರತೀಯ ಕ್ರಿಕೆಟ್​ನಲ್ಲೂ ಪ್ರಮುಖ ಬದಲಾವಣೆಯಾಗುವ ಸಾಧ್ಯತೆ ಇದೆ.

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಟಿ20 ಪಂದ್ಯಗಳ ಸರಣಿಯ ಎರಡನೇ ಪಂದ್ಯವು ಭಾನುವಾರ, ನವೆಂಬರ್ 20 ರಂದು ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಟಿ20 ಪಂದ್ಯಗಳ ಸರಣಿಯ ಎರಡನೇ ಪಂದ್ಯವು ಮೌಂಟ್ ಮೌಂಗನುಯಿಯಲ್ಲಿರುವ ಬೇ ಓವಲ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಯಾವಾಗ ಆರಂಭವಾಗುತ್ತದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಟಿ20 ಪಂದ್ಯಗಳ ಸರಣಿಯ ಎರಡನೇ ಪಂದ್ಯ ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದೆ. ಬೆಳಗ್ಗೆ 11.30ಕ್ಕೆ ಟಾಸ್ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಯಾವ ಚಾನೆಲ್​ನಲ್ಲಿ ನೇರ ಪ್ರಸಾರವಾಗಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ 20 ಪಂದ್ಯದ ನೇರ ಪ್ರಸಾರವು ಡಿಡಿ ಸ್ಪೋರ್ಟ್ಸ್‌ನಲ್ಲಿ ಮಾತ್ರ ಇರುತ್ತದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯದ ಲೈವ್ ಸ್ಟ್ರೀಮಿಂಗ್ ಅಮೆಜಾನ್ ಪ್ರೈಮ್‌ನಲ್ಲಿರಲಿದೆ.

Published On - 2:25 pm, Sat, 19 November 22

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ