ಟಿ20 ವಿಶ್ವಕಪ್ನ 28ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ದ ಸೆಣಸಲಿದೆ. ದುಬೈನಲ್ಲಿ ಭಾನುವಾರ ನಡೆಯಲಿರುವ ಈ ಪಂದ್ಯದಲ್ಲಿ ಉಭಯ ತಂಡಗಳಿಗೂ ಗೆಲುವು ಅನಿವಾರ್ಯ. ಏಕೆಂದರೆ ಎರಡೂ ತಂಡಗಳು ಮೊದಲ ಪಂದ್ಯದಲ್ಲಿ ಸೋಲನುಭವಿಸಿದ್ದು, ಸೆಮಿಫೈನಲ್ ಹಾದಿ ಸುಗಮಗೊಳಿಸಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕು. ಹೀಗಾಗಿ ಉಭಯ ತಂಡಗಳು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ. ಅದರಂತೆ ಟೀಮ್ ಇಂಡಿಯಾ ವಿರುದ್ದದ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಸ್ಪೋಟಕ ಬ್ಯಾಟರ್ ಮಾರ್ಟಿನ್ ಗಪ್ಟಿಲ್ ಕಣಕ್ಕಿಳಿಯುವುದು ಖಚಿತ. ಪಾಕ್ ವಿರುದ್ದದ ಪಂದ್ಯದ ವೇಳೆ ಬೆರಳಿಗೆ ಗಾಯ ಮಾಡಿಕೊಂಡಿದ್ದ ಗಪ್ಟಿಲ್ ಭಾರತ ವಿರುದ್ದ ಆಡುವುದು ಅನುಮಾನ ಎನ್ನಲಾಗಿತ್ತು. ಆದರೀಗ ಮಾರ್ಟಿನ್ ಗಪ್ಟಿಲ್ ಸಂಪೂರ್ಣ ಫಿಟ್ ಆಗಿದ್ದು, ಹೀಗಾಗಿ ನಿರ್ಣಾಯಕ ಪಂದ್ಯದಲ್ಲಿ ಆರಂಭಿಕರಾಗಿ ಇನಿಂಗ್ಸ್ ಆರಂಭಿಸುವುದು ಖಚಿತ.
ಕೋಚ್ ಗ್ಯಾರಿ ಸ್ಟೆಡ್ ಪ್ರಕಾರ, ಗಪ್ಟಿಲ್ ಅವರು ತರಬೇತಿ ಆರಂಭಿಸಿದ್ದಾರೆ. ಹೀಗಾಗಿ ಅವರು ಆಯ್ಕೆಗೆ ಲಭ್ಯರಿರಲಿದ್ದಾರೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ವಿರುದ್ದ ಆ್ಯಡಂ ಮಿಲ್ನ್ ಕೂಡ ಪ್ಲೇಯಿಂಗ್ ಇಲೆವೆನ್ನ ಭಾಗವಾಗಬಹುದು ಎಂದು ತಿಳಿಸಿದ್ದಾರೆ. ಒಂದೆಡೆ ಗಪ್ಟಿಲ್ ಆಗಮನದಿಂದ ನ್ಯೂಜಿಲೆಂಡ್ ತಂಡದ ಆರಂಭಿಕ ಚಿಂತೆ ದೂರವಾಗಿದೆ. ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸುವ ಗಪ್ಟಿಲ್ ಟೀಮ್ ಇಂಡಿಯಾ ಬೌಲರುಗಳ ಪಾಲಿಗೆ ದೊಡ್ಡ ಸವಾಲಾಗಲಿದೆ. ಇನ್ನೊಂದೆಡೆ ಮಿಲ್ನ್ ಅವರನ್ನೂ ಕಣಕ್ಕಿಳಿಸಲು ನ್ಯೂಜಿಲೆಂಡ್ ಪ್ಲ್ಯಾನ್ ರೂಪಿಸಿದೆ.
ಆ್ಯಡಂ ಮಿಲ್ನ್ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿದ್ದರು. ಎಡಗೈ ವೇಗಿಯಾಗಿರುವ ಮಿಲ್ನ್ ಐಪಿಎಲ್ನಲ್ಲಿ ಟೀಮ್ ಇಂಡಿಯಾದ ಪ್ರಮುಖ ಬ್ಯಾಟರ್ಗಳಿಗೆ ಬೌಲ್ ಮಾಡಿದ ಅನುಭವ ಹೊಂದಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ತಂಡವು ಮಿಲ್ನ್ ಅವರನ್ನು ಕಣಕ್ಕಿಳಿಸಿ ಟೀಮ್ ಇಂಡಿಯಾ ಬ್ಯಾಟರ್ಗಳನ್ನು ಕಟ್ಟಿಹಾಕಲು ರಣತಂತ್ರ ಹೆಣೆದಿದ್ದಾರೆ.
ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಾಹರ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ.
ನ್ಯೂಜಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟಾಡ್ ಆಸ್ಟಲ್, ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಆ್ಯಡಂ ಮಿಲ್ನ್, ಮಾರ್ಟಿನ್ ಗಪ್ಟಿಲ್, ಕೈಲ್ ಜೇಮೀಸನ್, ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಟಿಫರ್ಟ್ (ವಿಕೆಟ್ ಕೀಪರ್).
ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ
ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?
ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ
ಇದನ್ನೂ ಓದಿ: T20 World Cup 2021: ಹಿಂದೂಗಳ ಮುಂದೆ ನಮಾಜ್ ಮಾಡಿದ್ದು ಖುಷಿಯಾಯ್ತು ಎಂದ ಪಾಕ್ ಕ್ರಿಕೆಟಿಗ
(India vs New Zealand: Martin Guptill declared fit to play against India in Dubai)