India vs New Zealand ODI: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯನ್ನು 1-0 ಅಂತರದಿಂದ ಗೆದ್ದು ಬೀಗಿರುವ ಟೀಮ್ ಇಂಡಿಯಾ (Team India) ಇದೀಗ ಏಕದಿನ ಸರಣಿಗೆ ಸಜ್ಜಾಗಿದೆ. ಈ ಸರಣಿಯಲ್ಲಿ ಭಾರತ ತಂಡವು ಒಟ್ಟು ಮೂರು ಪಂದ್ಯಗಳನ್ನು ಆಡಲಿದೆ. ವಿಶೇಷ ಎಂದರೆ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹಾಗೆಯೇ ತಂಡದ ನಾಯಕನಾಗಿ ಶಿಖರ್ ಧವನ್ ಕಾಣಿಸಿಕೊಳ್ಳಲಿದ್ದಾರೆ. ಈ ಸರಣಿಯು ಶುಕ್ರವಾರದಿಂದ ಶುರುವಾಗಲಿದ್ದು, ನವೆಂಬರ್ 30 ರಂದು ಮುಗಿಯಲಿದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.
ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಬೆಳಿಗ್ಗೆ 7 ಗಂಟೆಯಿಂದ ಶುರುವಾಗಲಿದೆ.
ಇನ್ನು ಈ ಸರಣಿಯಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್ ಸೇರಿದಂತೆ ಪ್ರಮುಖರು ಹೊರಗುಳಿದಿದ್ದಾರೆ. ಹೀಗಾಗಿ ತಂಡದಲ್ಲಿ ಯುವ ಆಟಗಾರರು ಸ್ಥಾನ ಪಡೆದಿದ್ದಾರೆ. ಈ ಸರಣಿಗಾಗಿ ಟೀಮ್ ಇಂಡಿಯಾ ಈ ಕೆಳಗಿನಂತಿದೆ.
ಟೀಮ್ ಇಂಡಿಯಾ ಏಕದಿನ ತಂಡ:
ಶಿಖರ್ ಧವನ್ (ನಾಯಕ), ರಿಷಭ್ ಪಂತ್ (ಉಪನಾಯಕ), ಶುಭಮನ್ ಗಿಲ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಶಹಬಾಜ್ ಅಹ್ಮದ್, ವಾಷಿಂಗ್ಟನ್ ಸುಂದರ್, ಉಮ್ರಾನ್ ಮಲಿಕ್ , ಅರ್ಷದೀಪ್ ಸಿಂಗ್, ಶಾರ್ದೂಲ್ ಠಾಕೂರ್, ದೀಪಕ್ ಚಹಾರ್.
ನ್ಯೂಜಿಲೆಂಡ್ ಏಕದಿನ ತಂಡ ಹೀಗಿದೆ:
ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಆಡಮ್ ಮಿಲ್ನ್, ಡ್ಯಾರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ.