ಟೀಮ್ ಇಂಡಿಯಾದ ಮುಂದಿನ ಪಂದ್ಯ ಮುಂದಿನ ವರ್ಷ: ಇಲ್ಲಿದೆ ವೇಳಾಪಟ್ಟಿ
Team India: ಸೌತ್ ಆಫ್ರಿಕಾ ವಿರುದ್ಧದ ಸರಣಿ ಮುಗಿಸಿರುವ ಟೀಮ್ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗೂ ಮುನ್ನ 8 ಪಂದ್ಯಗಳನ್ನಾಡಲಿದೆ. ತವರಿನಲ್ಲಿ ನಡೆಯಲಿರುವ ಈ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಇದಾದ ಬಳಿಕ ಟಿ20 ಪಂದ್ಯಗಳು ಜರುಗಲಿದೆ.

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಸರಣಿ ಮುಗಿದಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಸೌತ್ ಆಫ್ರಿಕಾ ತಂಡ ಗೆದ್ದುಕೊಂಡರೆ, ಮೂರು ಮ್ಯಾಚ್ಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಟೀಮ್ ಇಂಡಿಯಾ ಗೆದ್ದುಕೊಂಡಿದೆ. ಇನ್ನು ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 3-1 ಅಂತರದಿಂದ ವಶಪಡಿಸಿಕೊಂಡಿದೆ. ಹೀಗೆ ಮೂರು ಸರಣಿಗಳಲ್ಲಿ 2 ಸಿರೀಸ್ ಗೆದ್ದಿರುವ ಟೀಮ್ ಇಂಡಿಯಾ ಇನ್ನು ಕಣಕ್ಕಿಳಿಯುವುದು ಮುಂದಿನ ವರ್ಷ. ಅಂದರೆ ಜನವರಿ ತಿಂಗಳಲ್ಲಿ.
ಭಾರತ ಮತ್ತು ನ್ಯೂಝಿಲೆಂಡ್ ನಡುವಣ 8 ಪಂದ್ಯಗಳ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಮೊದಲಿಗೆ ಮೂರು ಮ್ಯಾಚ್ಗಳ ಏಕದಿನ ಸರಣಿ ನಡೆಯಲಿದ್ದು, ಇದಾದ ಬಳಿಕ ಐದು ಪಂದ್ಯಗಳ ಟಿ20 ಸರಣಿ ನಡೆಯಲಿದೆ.
ಭಾರತದಲ್ಲಿ ನಡೆಯಲಿರುವ ಈ ಸರಣಿಯು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಸರಣಿಯ ಬೆನ್ನಲ್ಲೇ ಭಾರತ ತಂಡ ಟಿ20 ವಿಶ್ವಕಪ್ ಆಡಲಿದೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ತನ್ನ ನೂನ್ಯತೆಗಳನ್ನು ಸರಿಪಡಿಸಿಕೊಳ್ಳಬೇಕಿದೆ.
ಅದರಲ್ಲೂ ಕಳಪೆ ಫಾರ್ಮ್ನಿಂದ ಬಳಲುತ್ತಿರುವ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ನ್ಯೂಝಿಲೆಂಡ್ ವಿರುದ್ಧದ ಸರಣಿ ಮೂಲಕ ಲಯಕ್ಕೆ ಮರಳಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾಗಿದೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದಾಗಿ ಪರಿಣಮಿಸಿದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…
ಭಾರತ vs ನ್ಯೂಝಿಲೆಂಡ್ ಏಕದಿನ ಸರಣಿ ವೇಳಾಪಟ್ಟಿ
- ಮೊದಲ ಏಕದಿನ ಪಂದ್ಯ – ಜನವರಿ 11 – ವಡೋದರಾ – ಮಧ್ಯಾಹ್ನ 1:30
- ಎರಡನೇ ಏಕದಿನ ಪಂದ್ಯ – ಜನವರಿ 14 – ರಾಜ್‌ಕೋಟ್ – ಮಧ್ಯಾಹ್ನ 1:30
- ಮೂರನೇ ಏಕದಿನ ಪಂದ್ಯ – ಜನವರಿ 18 – ಇಂದೋರ್ – ಮಧ್ಯಾಹ್ನ 1:30
ಇದನ್ನೂ ಓದಿ: ಆಸ್ಟ್ರೇಲಿಯಾ ದಾಂಡಿಗರ ಸಿಡಿಲಬ್ಬರ… ಟಿ20 ದಾಖಲೆಗಳು ಧೂಳೀಪಟ
ಭಾರತ vs ನ್ಯೂಝಿಲೆಂಡ್ ಟಿ20 ಸರಣಿ ವೇಳಾಪಟ್ಟಿ
- ಮೊದಲ ಟಿ20 ಪಂದ್ಯ – ಜನವರಿ 21 – ನಾಗ್ಪುರ – ರಾತ್ರಿ 7:00
- ಎರಡನೇ ಟಿ20 ಪಂದ್ಯ – ಜನವರಿ 23 – ರಾಯ್ಪುರ – ರಾತ್ರಿ 7:00
- ಮೂರನೇ ಟಿ20 ಪಂದ್ಯ – ಜನವರಿ 25 – ಗುವಾಹಟಿ – ರಾತ್ರಿ 7:00
- ನಾಲ್ಕನೇ ಟಿ20 ಪಂದ್ಯ – ಜನವರಿ 28 – ವಿಶಾಖಪಟ್ಟಣ – ರಾತ್ರಿ 7:00
- ಐದನೇ ಟಿ20 ಪಂದ್ಯ – ಜನವರಿ 31 – ತಿರುವನಂತಪುರಂ – ರಾತ್ರಿ 7:00
