ಟೀಮ್ ಇಂಡಿಯಾದ ಮುಂದಿನ ಪಂದ್ಯ ಮುಂದಿನ ವರ್ಷ: ಇಲ್ಲಿದೆ ವೇಳಾಪಟ್ಟಿ

Team India: ಸೌತ್ ಆಫ್ರಿಕಾ ವಿರುದ್ಧದ ಸರಣಿ ಮುಗಿಸಿರುವ ಟೀಮ್ ಇಂಡಿಯಾ ಮುಂಬರುವ ಟಿ20 ವಿಶ್ವಕಪ್​ಗೂ ಮುನ್ನ 8 ಪಂದ್ಯಗಳನ್ನಾಡಲಿದೆ. ತವರಿನಲ್ಲಿ ನಡೆಯಲಿರುವ ಈ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಇದಾದ ಬಳಿಕ ಟಿ20 ಪಂದ್ಯಗಳು ಜರುಗಲಿದೆ.

ಟೀಮ್ ಇಂಡಿಯಾದ ಮುಂದಿನ ಪಂದ್ಯ ಮುಂದಿನ ವರ್ಷ: ಇಲ್ಲಿದೆ ವೇಳಾಪಟ್ಟಿ
Team India

Updated on: Dec 20, 2025 | 10:54 AM

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಸರಣಿ ಮುಗಿದಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಸೌತ್ ಆಫ್ರಿಕಾ ತಂಡ ಗೆದ್ದುಕೊಂಡರೆ, ಮೂರು ಮ್ಯಾಚ್​ಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಟೀಮ್ ಇಂಡಿಯಾ ಗೆದ್ದುಕೊಂಡಿದೆ. ಇನ್ನು ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 3-1 ಅಂತರದಿಂದ ವಶಪಡಿಸಿಕೊಂಡಿದೆ. ಹೀಗೆ ಮೂರು ಸರಣಿಗಳಲ್ಲಿ 2 ಸಿರೀಸ್ ಗೆದ್ದಿರುವ ಟೀಮ್ ಇಂಡಿಯಾ ಇನ್ನು ಕಣಕ್ಕಿಳಿಯುವುದು ಮುಂದಿನ ವರ್ಷ. ಅಂದರೆ ಜನವರಿ ತಿಂಗಳಲ್ಲಿ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 8 ಪಂದ್ಯಗಳ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಮೊದಲಿಗೆ ಮೂರು ಮ್ಯಾಚ್​ಗಳ ಏಕದಿನ ಸರಣಿ ನಡೆಯಲಿದ್ದು, ಇದಾದ ಬಳಿಕ ಐದು ಪಂದ್ಯಗಳ ಟಿ20 ಸರಣಿ ನಡೆಯಲಿದೆ.

ಭಾರತದಲ್ಲಿ ನಡೆಯಲಿರುವ ಈ ಸರಣಿಯು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಸರಣಿಯ ಬೆನ್ನಲ್ಲೇ ಭಾರತ ತಂಡ ಟಿ20 ವಿಶ್ವಕಪ್ ಆಡಲಿದೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ತನ್ನ ನೂನ್ಯತೆಗಳನ್ನು ಸರಿಪಡಿಸಿಕೊಳ್ಳಬೇಕಿದೆ.

ಅದರಲ್ಲೂ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ನ್ಯೂಝಿಲೆಂಡ್ ವಿರುದ್ಧದ ಸರಣಿ ಮೂಲಕ ಲಯಕ್ಕೆ ಮರಳಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾಗಿದೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದಾಗಿ ಪರಿಣಮಿಸಿದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…

ಭಾರತ vs ನ್ಯೂಝಿಲೆಂಡ್ ಏಕದಿನ ಸರಣಿ ವೇಳಾಪಟ್ಟಿ

  • ಮೊದಲ ಏಕದಿನ ಪಂದ್ಯ – ಜನವರಿ 11 – ವಡೋದರಾ – ಮಧ್ಯಾಹ್ನ 1:30
  • ಎರಡನೇ ಏಕದಿನ ಪಂದ್ಯ – ಜನವರಿ 14 – ರಾಜ್‌ಕೋಟ್ – ಮಧ್ಯಾಹ್ನ 1:30
  • ಮೂರನೇ ಏಕದಿನ ಪಂದ್ಯ – ಜನವರಿ 18 – ಇಂದೋರ್ – ಮಧ್ಯಾಹ್ನ 1:30

ಇದನ್ನೂ ಓದಿ: ಆಸ್ಟ್ರೇಲಿಯಾ ದಾಂಡಿಗರ ಸಿಡಿಲಬ್ಬರ… ಟಿ20 ದಾಖಲೆಗಳು ಧೂಳೀಪಟ

ಭಾರತ vs ನ್ಯೂಝಿಲೆಂಡ್ ಟಿ20 ಸರಣಿ ವೇಳಾಪಟ್ಟಿ

  • ಮೊದಲ ಟಿ20 ಪಂದ್ಯ – ಜನವರಿ 21 – ನಾಗ್ಪುರ – ರಾತ್ರಿ 7:00
  • ಎರಡನೇ ಟಿ20 ಪಂದ್ಯ – ಜನವರಿ 23 – ರಾಯ್ಪುರ – ರಾತ್ರಿ 7:00
  • ಮೂರನೇ ಟಿ20 ಪಂದ್ಯ – ಜನವರಿ 25 – ಗುವಾಹಟಿ – ರಾತ್ರಿ 7:00
  • ನಾಲ್ಕನೇ ಟಿ20 ಪಂದ್ಯ – ಜನವರಿ 28 – ವಿಶಾಖಪಟ್ಟಣ – ರಾತ್ರಿ 7:00
  • ಐದನೇ ಟಿ20 ಪಂದ್ಯ – ಜನವರಿ 31 – ತಿರುವನಂತಪುರಂ – ರಾತ್ರಿ 7:00