India vs New Zealand Schedule: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ (Team India) ನ್ಯೂಜಿಲೆಂಡ್ ಕಣಕ್ಕಿಳಿಯಲಿದೆ. ಜನವರಿ 18 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಭಾರತ ತಂಡವು 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ. ಮೊದಲಿಗೆ ಏಕದಿನ ಸರಣಿ ನಡೆಯಲಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ. ಏಕದಿನ ಸರಣಿಗಳಲ್ಲಿ ಕಾಣಿಸಿಕೊಳ್ಳಲಿರುವ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಸರಣಿಗೆ ಆಯ್ಕೆಯಾಗಿಲ್ಲ ಎಂಬುದೇ ಅಚ್ಚರಿ. ಅಂದರೆ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾದ ಟೀಮ್ ಇಂಡಿಯಾದಲ್ಲಿ ಹಿಟ್ಮ್ಯಾನ್ ಹಾಗೂ ಕಿಂಗ್ ಕೊಹ್ಲಿಗೆ ಸ್ಥಾನ ಕಲ್ಪಿಸಿಲ್ಲ.
ಇನ್ನು ಅಕ್ಷರ್ ಪಟೇಲ್ ಹಾಗೂ ಕೆಎಲ್ ರಾಹುಲ್ ವೈಯುಕ್ತಿಕ ಕಾರಣಗಳಿಗಾಗಿ ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಟಿ20 ಬಳಗದಲ್ಲಿ ಜಿತೇಶ್ ಶರ್ಮಾ ಹಾಗೂ ಪೃಥ್ವಿ ಶಾ ಗೆ ಅವಕಾಶ ಲಭಿಸಿದೆ. ಹಿಟ್ಮ್ಯಾನ್ ಅನುಪಸ್ಥಿತಿಯ ನಡುವೆ ಟಿ20 ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದು, ಉಪನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಟೀಮ್ ಇಂಡಿಯಾ ಆಟಗಾರರು
ಮತ್ತೊಂದೆಡೆ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ತಂಡ ಸಾರಥ್ಯವಹಿಸಲಿದ್ದಾರೆ. ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಮುಂದುವರೆಯಲಿದ್ದಾರೆ. ಹಾಗೆಯೇ ಏಕದಿನ ತಂಡಕ್ಕೆ ಶಹಬಾಝ್ ಅಹ್ಮದ್ ಹಾಗೂ ಶಾರ್ದೂಲ್ ಠಾಕೂರ್ ಮರಳಿದ್ದಾರೆ. ಇವರ ಜೊತೆಗೆ ವಿಕೆಟ್ ಕೀಪರ್ ಬ್ಯಾಟರ್ ಕೆಎಸ್ ಭರತ್ ಚೊಚ್ಚಲ ಬಾರಿಗೆ ಅವಕಾಶ ಪಡೆದಿದ್ದಾರೆ. ಅದರಂತೆ ಭಾರತ-ನ್ಯೂಜಿಲೆಂಡ್ ನಡುವಣ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.
ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ ವೇಳಾಪಟ್ಟಿ:
ಭಾರತ-ನ್ಯೂಜಿಲೆಂಡ್ ಟಿ20 ಸರಣಿ ವೇಳಾಪಟ್ಟಿ:
ಟೀಮ್ ಇಂಡಿಯಾ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.
ಟೀಮ್ ಇಂಡಿಯಾ ಟಿ20 ತಂಡ:
ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.
Published On - 7:55 pm, Sat, 14 January 23