IND vs NZ: ಮೊದಲ ಟಿ20 ಪಂದ್ಯವನ್ನು 48 ರನ್ಗಳಿಂದ ಗೆದ್ದ ಟೀಂ ಇಂಡಿಯಾ
India vs New Zealand T20: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ನಾಗ್ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಿ 239 ರನ್ ಗಳಿಸಿತು. ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 190 ರನ್ ಗಳಿಸಿ 48 ರನ್ಗಳಿಂದ ಸೋಲಪ್ಪಿತು. ಈ ಗೆಲುವಿನೊಂದಿಗೆ ಭಾರತ ಸರಣಿಯಲ್ಲಿ ಶುಭಾರಂಭ ಮಾಡಿದೆ.

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ 48 ರನ್ಗಳಿಂದ ಗೆದ್ದುಕೊಳ್ಳುವ ಮೂಲಕ ಸರಣಿಯನ್ನು ಗೆಲುವಿನೊಂದಿಗೆ ಶುರು ಮಾಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ದಾಖಲೆಯ 239 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 190 ರನ್ ಕಲೆಹಾಕವಾಯಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ.
ಅಭಿಷೇಕ್, ರಿಂಕು ಸಿಂಗ್ ಬಿರುಗಾಳಿ ಇನ್ನಿಂಗ್ಸ್
ಈ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿತು. ಆದರೆ ಈ ನಿರ್ಧಾರವು ಭಾರತದ ಬ್ಯಾಟಿಂಗ್ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ಟೀಂ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 238 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ತಂಡಕ್ಕೆ ಬಿರುಗಾಳಿಯ ಆರಂಭ ನೀಡಿದ ಅಭಿಷೇಕ್ ಶರ್ಮಾ 35 ಎಸೆತಗಳಲ್ಲಿ 5 ಬೌಂಡರಿ ಮತ್ತು 8 ಸಿಕ್ಸರ್‌ಗಳನ್ನು ಒಳಗೊಂಡಂತೆ 84 ರನ್ ಗಳಿಸಿದರು. ನಾಯಕ ಸೂರ್ಯಕುಮಾರ್ ಯಾದವ್ ಕೂಡ 32 ರನ್ ಬಾರಿಸಿದರೆ, ಹಾರ್ದಿಕ್ ಪಾಂಡ್ಯ 25 ರನ್ ಗಳಿಸಿದರು.
ಇನ್ನಿಂಗ್ಸ್‌ನ ಕೊನೆಯ ಓವರ್‌ಗಳಲ್ಲಿ ಅಜೇಯ 44 ರನ್ ಗಳಿಸುವಲ್ಲಿ ಯಶಸ್ವಿಯಾದ ರಿಂಕು ಸಿಂಗ್ 20 ಎಸೆತಗಳಲ್ಲಿ ಅಜೇಯ 44 ರನ್ ಬಾರಿಸಿದರು. ಅವರ ಈ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್‌ಗಳು ಸೇರಿದ್ದವು. ಇತ್ತ ನ್ಯೂಜಿಲೆಂಡ್ ಪರ ಜಾಕೋಬ್ ಡಫಿ ಮತ್ತು ಕೈಲ್ ಜೇಮಿಸನ್ ತಲಾ 2 ವಿಕೆಟ್‌ಗಳನ್ನು ಪಡೆದರೆ ಕ್ರಿಶ್ಚಿಯನ್ ಕ್ಲಾರ್ಕ್, ಮಿಚೆಲ್ ಸ್ಯಾಂಟ್ನರ್ ಮತ್ತು ಇಶ್ ಸೋಧಿ ಕೂಡ ತಲಾ 1 ವಿಕೆಟ್ ಪಡೆದರು.
ಕಿವೀಸ್ಗೆ ಆರಂಭದಲ್ಲೇ ಆಘಾತ
239 ರನ್‌ಗಳ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ಗೆ ಭಾರತದ ಬೌಲರ್‌ಗಳು ಆರಂಭದಲ್ಲೇ ಆಘಾತ ನೀಡಿದರು. ಅರ್ಷದೀಪ್ ಸಿಂಗ್ ಇನ್ನಿಂಗ್ಸ್‌ನ ಎರಡನೇ ಎಸೆತದಲ್ಲಿ ತಂಡಕ್ಕೆ ಮೊದಲ ಬ್ರೇಕ್‌ಥ್ರೂ ನೀಡಿದರು. ನಂತರ ಹಾರ್ದಿಕ್ ಪಾಂಡ್ಯ ಎರಡನೇ ಓವರ್‌ನಲ್ಲಿ ರಚಿನ್ ರವೀಂದ್ರ ಅವರನ್ನು ಔಟ್ ಮಾಡಿ ತಂಡಕ್ಕೆ ಮುನ್ನಡೆ ಒದಗಿಸಿದರು. ಆದಾಗ್ಯೂ, ಗ್ಲೆನ್ ಫಿಲಿಪ್ಸ್ ಸ್ಫೋಟಕ ಇನ್ನಿಂಗ್ಸ್ ಆಡಿ 40 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಆರು ಸಿಕ್ಸರ್‌ಗಳೊಂದಿಗೆ 78 ರನ್ ಗಳಿಸಿದರು. ಮಾರ್ಕ್ ಚಾಪ್‌ಮನ್ ಕೂಡ 39 ರನ್‌ಗಳ ಹೋರಾಟದ ಬ್ಯಾಟಿಂಗ್ ಪ್ರದರ್ಶಿಸಿದರಾದರೂ ಅದು ತಂಡಕ್ಕೆ ಸಾಕಾಗಲಿಲ್ಲ. ಅಂತಿಮವಾಗಿ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ ಆರು ವಿಕೆಟ್‌ಗಳ ನಷ್ಟಕ್ಕೆ 190 ರನ್‌ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.
IND vs NZ: 6,6,4,4.. ಕೊನೆಯ ಓವರ್‌ನಲ್ಲಿ ಅಬ್ಬರಿಸಿದ ರಿಂಕು ಸಿಂಗ್; ವಿಡಿಯೋ
ವರುಣ್ ಚಕ್ರವರ್ತಿ ಮತ್ತು ಶಿವಂ ದುಬೆ ಭಾರತದ ಪರ ಅತ್ಯಂತ ಯಶಸ್ವಿ ಬೌಲರ್‌ಗಳಾಗಿದ್ದು, ತಲಾ ಎರಡು ವಿಕೆಟ್‌ಗಳನ್ನು ಪಡೆದರು. ಅರ್ಷದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದರು. ಇದಲ್ಲದೆ, ಈ ಪಂದ್ಯದಲ್ಲಿ ಎರಡೂ ತಂಡಗಳು ಒಟ್ಟಾಗಿ 428 ರನ್ ಗಳಿಸಿದವು, ಇದು ಒಂದು ದಾಖಲೆ. ಎರಡೂ ತಂಡಗಳ ನಡುವಿನ ಯಾವುದೇ ಟಿ20 ಪಂದ್ಯದಲ್ಲಿ ಇಷ್ಟು ಬೃಹತ್ ಮೊತ್ತ ದಾಖಲಾಗಿರುವುದು ಇದೇ ಮೊದಲು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:51 pm, Wed, 21 January 26
