ಟೀಮ್ ಇಂಡಿಯಾದ ಮುಂದಿನ ಸರಣಿ ಯಾರ ವಿರುದ್ಧ? ಇಲ್ಲಿದೆ ವೇಳಾಪಟ್ಟಿ
India vs New zealand t20 series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ20 ಸರಣಿಯು ಜನವರಿ 21 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು 5 ಪಂದ್ಯಗಳನ್ನಾಡಲಿದೆ. ಈ ಸರಣಿಯ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯಲಿದೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಸರಣಿಯನ್ನು ನ್ಯೂಝಿಲೆಂಡ್ ತಂಡವು 2-1 ಅಂತರದಿಂದ ಗೆದ್ದುಕೊಂಡಿದೆ. ಇನ್ನು ಉಭಯ ತಂಡಗಳು ಟಿ20 ಸರಣಿಗಾಗಿ ಸಜ್ಜಾಗಲಿದೆ. ಅಂದರೆ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಜನವರಿ 21 ರಿಂದ ಟಿ20 ಸರಣಿ ಶುರುವಾಗಲಿದೆ.
ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು 5 ಪಂದ್ಯಗಳಲ್ಲಿ ಮುಖಾಮುಖಿಯಾಗಲಿದೆ. ಮೊದಲ ಪಂದ್ಯವು ನಾಗ್ಪುರದಲ್ಲಿ ನಡೆದರೆ, ಎರಡನೇ ಪಂದ್ಯಕ್ಕೆ ರಾಯ್ಪುರದ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಗುವಾಹಟಿಯಲ್ಲಿ ಮೂರನೇ ಪಂದ್ಯ ನಡೆಯಲಿದೆ. ಹಾಗೆಯೇ ನಾಲ್ಕನೇ ಮತ್ತು ಐದನೇ ಪಂದ್ಯಗಳು ಕ್ರಮವಾಗಿ ವಿಶಾಖಪಟ್ಟಣ ಮತ್ತು ತಿರುವನಂತಪುರದಲ್ಲಿ ಜರುಗಲಿದೆ.
ಈ ಐದು ಪಂದ್ಯಗಳ ಬಳಿಕ ಟೀಮ್ ಇಂಡಿಯಾ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯಲಿದೆ. ಅಂದರೆ ಜನವರಿ 31 ರಂದು ಐದು ಮ್ಯಾಚ್ಗಳ ಸರಣಿ ಮುಗಿಯಲಿದ್ದು, ಇದಾದ ಬಳಿಕ ಟೀಮ್ ಇಂಡಿಯಾ ಆಟಗಾರರಿಗೆ ಕೆಲ ದಿನಗಳ ವಿಶ್ರಾಂತಿ ಸಿಗಲಿದೆ. ಆ ಬಳಿಕ ಟೀಮ್ ಇಂಡಿಯಾ ಫೆಬ್ರವರಿ 7 ರಿಂದ ಟಿ20 ವಿಶ್ವಕಪ್ ಅಭಿಯಾನ ಶುರು ಮಾಡಲಿದೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯು ಭಾರತ ತಂಡದ ಪಾಲಿಗೆ ಮಹತ್ವದ್ದಾಗಿ ಪರಿಣಮಿಸಿದೆ.
ಭಾರತ vs ನ್ಯೂಝಿಲೆಂಡ್ ಟಿ20 ಸರಣಿ ವೇಳಾಪಟ್ಟಿ
- ಮೊದಲ ಟಿ20 ಪಂದ್ಯ – ಜನವರಿ 21 – ನಾಗ್ಪುರ – ರಾತ್ರಿ 7:00 ಗಂಟೆಗೆ ಶುರು
- ಎರಡನೇ ಟಿ20 ಪಂದ್ಯ – ಜನವರಿ 23 – ರಾಯ್ಪುರ – ರಾತ್ರಿ 7:00 ಗಂಟೆಗೆ ಶುರು
- ಮೂರನೇ ಟಿ20 ಪಂದ್ಯ – ಜನವರಿ 25 – ಗುವಾಹಟಿ – ರಾತ್ರಿ 7:00 ಗಂಟೆಗೆ ಶುರು
- ನಾಲ್ಕನೇ ಟಿ20 ಪಂದ್ಯ – ಜನವರಿ 28 – ವಿಶಾಖಪಟ್ಟಣ – ರಾತ್ರಿ 7:00 ಗಂಟೆಗೆ ಶುರು
- ಐದನೇ ಟಿ20 ಪಂದ್ಯ – ಜನವರಿ 31 – ತಿರುವನಂತಪುರಂ – ರಾತ್ರಿ 7:00 ಗಂಟೆಗೆ ಶುರು
Published On - 9:55 am, Mon, 19 January 26
