
ಹಾಲಿ ಚಾಂಪಿಯನ್ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ ಟಿ20 ವಿಶ್ವಕಪ್ ಫೈನಲ್ (T20 World Cup Final) ಪಂದ್ಯ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಟಿ20 ವಿಶ್ವಕಪ್ ಫೈನಲ್‌ನಲ್ಲಿ ಈ ಎರಡೂ ತಂಡಗಳು ಪರಸ್ಪರ ಎದುರಾಗುತ್ತಿರುವುದು ಇದೇ ಮೊದಲು. ಎರಡು ಬಾರಿಯ ಚಾಂಪಿಯನ್ ಭಾರತ ನಾಲ್ಕನೇ ಫೈನಲ್ ತಲುಪಿದ್ದು, ಮೂರನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಲು ನೋಡುತ್ತಿದ್ದರೆ, ಇತ್ತ ನ್ಯೂಜಿಲೆಂಡ್ ಎರಡನೇ ಬಾರಿಗೆ ಫೈನಲ್‌ಗೆ ತಲುಪಿದ್ದು, ಮೊದಲ ಟ್ರೋಫಿಯನ್ನು ಎದುರು ನೋಡುತ್ತಿದೆ.
ಭಾರತದ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಭಾರತ ಮೊದಲು ಬ್ಯಾಟಿಂಗ್ ಮಾಡುತ್ತಿದೆ, ಕಿವೀಸ್ ತಂಡದ ಪ್ಲೇಯಿಂಗ್ 11 ನಲ್ಲಿ ಒಂದು ಬದಲಾವಣೆ ಮಾಡಿದ್ದು, ಸ್ಪಿನ್ನರ್ ಕೋಲ್ ಮೆಕ್‌ಕೊಂಚಿ ಬದಲಿಗೆ ಜಾಕೋಬ್ ಡಫಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇತ್ತ ಟಾಸ್ ಗೆದ್ದಿದ್ದರೆ, ಮೊದಲು ಬ್ಯಾಟಿಂಗ್ ಮಾಡುವುದಾಗಿ ಹೇಳಿರುವ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದಿದ್ದಾರೆ.
ಭಾರತ ಮತ್ತು ನ್ಯೂಜಿಲೆಂಡ್ ಇಲ್ಲಿಯವರೆಗೆ 30 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿವೆ. ಈ ಪಂದ್ಯಗಳಲ್ಲಿ ಭಾರತ 18 ಪಂದ್ಯಗಳನ್ನು ಗೆದ್ದಿದ್ದರೆ, ನ್ಯೂಜಿಲೆಂಡ್ 11 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಟೈ ಆಗಿದೆ. ಸೂಪರ್ ಓವರ್‌ಗಳಲ್ಲಿ ಭಾರತ ಎರಡು ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಮಳೆಯಿಂದಾಗಿ ಟೈ ಆಗಿದೆ. ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಆಡಿದ 16 ಪಂದ್ಯಗಳಲ್ಲಿ ಭಾರತ 11 ರಲ್ಲಿ ಗೆದ್ದಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಐಸಿಸಿ ಫೈನಲ್ ಇದಾಗಿದೆ. ಆರು ವರ್ಷಗಳ ಅಂತರದ ನಂತರ ಉಭಯ ತಂಡಗಳ ನಡುವೆ ನಡೆಯುತ್ತಿರುವ ಮೂರನೇ ಐಸಿಸಿ ಫೈನಲ್ ಇದು. ಇದಲ್ಲದೆ ಭಾರತ ಮತ್ತು ನ್ಯೂಜಿಲೆಂಡ್ ಮೂರು ಸ್ವರೂಪಗಳಲ್ಲಿ ಐಸಿಸಿ ಫೈನಲ್ ಆಡಿದ ಮೊದಲ ತಂಡಗಳಾಗಿವೆ. 2026 ರ ಟಿ20 ವಿಶ್ವಕಪ್ ಫೈನಲ್‌ಗೂ ಮೊದಲು, ಭಾರತ ಮತ್ತು ನ್ಯೂಜಿಲೆಂಡ್ 2021 ರ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು 2025 ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ಗಳಲ್ಲಿ ಮುಖಾಮುಖಿಯಾಗಿದ್ದವು.
IND vs NZ, T20 WC Final Live Score: ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ
ಭಾರತದ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್, ಅರ್ಶ್ದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
ನ್ಯೂಜಿಲೆಂಡ್ ತಂಡ: ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಫಿನ್ ಅಲೆನ್, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಜಾಕೋಬ್ ಡಫಿ, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:45 pm, Sun, 8 March 26