IND vs NZ ಟಿ20 ಸರಣಿ: ಎಷ್ಟು ಗಂಟೆಗೆ ಶುರು? ಯಾವ ಚಾನೆಲ್​ನಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

ಭಾರತ ಮತ್ತು ನ್ಯೂಝಿಲೆಂಡ್​ ನಡುವಣ ಒಟ್ಟು 12 ಪಂದ್ಯಗಳ ಬಹುಸ್ವರೂಪದ ಸರಣಿಯು ಅಕ್ಟೋಬರ್ 22 ರಿಂದ ಅಧಿಕೃತವಾಗಿ ಆರಂಭವಾಗಲಿದೆ. ಈ ಸುದೀರ್ಘ ಪ್ರವಾಸದಲ್ಲಿ ಉಭಯ ತಂಡಗಳು ಮೊದಲಿಗೆ 5 ಪಂದ್ಯಗಳ ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿವೆ. ಇದಾದ ಬಳಿಕ 5 ಪಂದ್ಯಗಳ ಏಕದಿನ ಸರಣಿ ಜರುಗಲಿದ್ದು, ಅಂತಿಮವಾಗಿ 2 ಪಂದ್ಯಗಳ ಟೆಸ್ಟ್ ಸರಣಿಯೊಂದಿಗೆ ಭಾರತದ ಈ ಕಿವೀಸ್ ಪ್ರವಾಸ ಮುಕ್ತಾಯಗೊಳ್ಳಲಿದೆ.

IND vs NZ ಟಿ20 ಸರಣಿ: ಎಷ್ಟು ಗಂಟೆಗೆ ಶುರು? ಯಾವ ಚಾನೆಲ್​ನಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ
Ind Vs Nz
Image Credit source: BLACKCAPS

Updated on: Oct 21, 2026 | 8:32 AM

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ20 ಸರಣಿಯು ನಾಳೆಯಿಂದ (ಅಕ್ಟೋಬರ್ 22) ಶುರುವಾಗಲಿದೆ. ಕಿವೀಸ್​ ನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು ಐದು ಪಂದ್ಯಗಳನ್ನಾಡಲಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಿಗೆ ಕ್ರೈಸ್ಟ್​ಚರ್ಚ್​ನ ಹ್ಯಾಗ್ಲಿ ಓವಲ್ ಮೈದಾನ ಮೊದಲ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಇನ್ನು ಮೂರನೇ ಮತ್ತು ನಾಲ್ಕನೇ ಪಂದ್ಯಗಳು ಕ್ರಮವಾಗಿ ವೆಲ್ಲಿಂಗ್ಟನ್​ನ ಹೆನ್ರಿ ಸ್ಟೇಡಿಯಂ ಹಾಗೂ ಆಕ್ಲೆಂಡ್​ನ ಈಡನ್ ಪಾರ್ಕ್​ ಮೈದಾನದಲ್ಲಿ ನಡೆಯಲಿದೆ. ಹಾಗೆಯೇ ಐದನೇ ಮ್ಯಾಚ್ ಹ್ಯಾಮಿಲ್ಟನ್​ನ ಸೆಡನ್ ಪಾರ್ಕ್ ಮೈದಾನದಲ್ಲಿ ಜರುಗಲಿದೆ. ಈ ಸರಣಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ…

ಪಂದ್ಯ ಶುರುವಾಗುವುದು ಎಷ್ಟು ಗಂಟೆಗೆ?

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ20  ಸರಣಿಯ ಎಲ್ಲಾ 5 ಟಿ20 ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 12:30 ಕ್ಕೆ (ನ್ಯೂಝಿಲ್ಯಾಂಡ್‌ನ ಸ್ಥಳೀಯ ಸಮಯ ರಾತ್ರಿ 8:00 ಗಂಟೆಗೆ) ಆರಂಭವಾಗಲಿವೆ. ಉಭಯ ದೇಶಗಳ ನಡುವಿನ ಸಮಯದ ವ್ಯತ್ಯಾಸದಿಂದಾಗಿ ಭಾರತದ ಅಭಿಮಾನಿಗಳಿಗೆ ಮಧ್ಯಾಹ್ನದ ವೇಳೆಗೆ ಪಂದ್ಯ ವೀಕ್ಷಿಸುವ ಸುವರ್ಣಾವಕಾಶ ಸಿಕ್ಕಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಪಂದ್ಯಗಳನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್​ನ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಅದರಂತೆ Sony Sports Ten 1, Ten 1 HD, Ten 5 ಮತ್ತು Ten 5 HD, Sony Sports Ten 3, Ten 3 HD, Sony Sports Ten 4 ಮತ್ತು Ten 4 HD ಚಾನೆಲ್‌ಗಳಲ್ಲಿ ಪಂದ್ಯಗಳ ಲೈವ್ ಪ್ರಸಾರ ಇರಲಿದೆ. ಇನ್ನುಸೋನಿ ಲಿವ್ (Sony LIV) ಆ್ಯಪ್ ಮತ್ತು ಅದರ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಇರಲಿದೆ.

ಉಭಯ ತಂಡಗಳು:

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವೈಭವ್ ಸೂರ್ಯವಂಶಿ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಅಕ್ಷರ್ ಪಟೇಲ್, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಪ್ರಿನ್ಸ್ ಯಾದವ್, ಮಾಯಾಂಕ್ ಯಾದವ್, ಅರ್ಷದೀಪ್ ಸಿಂಗ್ ಸಿಂಗ್, ಭುವನೇಶ್ವರ್ ಕುಮಾರ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್.

ಇದನ್ನೂ ಓದಿ: 150 ವರ್ಷಗಳಲ್ಲೇ ಮೊದಲು: ಸೌತ್ ಆಫ್ರಿಕಾದ ವಿಶ್ವ ದಾಖಲೆಯ ‘ಡಿಕ್ಲರೇಷನ್’

ನ್ಯೂಝಿಲೆಂಡ್ ಟಿ20 ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಜೇಕಬ್ ಡಫಿ, ಲಾಕಿ ಫರ್ಗುಸನ್, ಜ್ಯಾಕ್ ಫೌಲ್ಕ್ಸ್, ಮ್ಯಾಟ್ ಹೆನ್ರಿ, ಬೆವನ್ ಜೇಕಬ್ಸ್, ಕೈಲ್ ಜೇಮಿಸನ್, ಆಡಮ್ ಮಿಲ್ನ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಟಿಮ್ ಸೈಫರ್ಟ್​ ಮತ್ತು ನಾಥನ್ ಸ್ಮಿತ್.

ಭಾರತ vs ನ್ಯೂಝಿಲೆಂಡ್ ಟಿ20 ಸರಣಿ ವೇಳಾಪಟ್ಟಿ:

ಪಂದ್ಯ ದಿನಾಂಕ (2026) ಕ್ರೀಡಾಂಗಣ ಮತ್ತು ಸ್ಥಳ ಸಮಯ (IST)
1ನೇ ಟಿ20 ಅಕ್ಟೋಬರ್ 22 ಹಾಗ್ಲಿ ಓವಲ್, ಕ್ರೈಸ್ಟ್‌ಚರ್ಚ್ ಮಧ್ಯಾಹ್ನ 1:30
2ನೇ ಟಿ20 ಅಕ್ಟೋಬರ್ 24 ಹಾಗ್ಲಿ ಓವಲ್, ಕ್ರೈಸ್ಟ್‌ಚರ್ಚ್ ಮಧ್ಯಾಹ್ನ 1:30
3ನೇ ಟಿ20 ಅಕ್ಟೋಬರ್ 27 ಹೆನ್ರಿ ಸ್ಟೇಡಿಯಂ, ವೆಲ್ಲಿಂಗ್ಟನ್ ಮಧ್ಯಾಹ್ನ 1:30
4ನೇ ಟಿ20 ಅಕ್ಟೋಬರ್ 30 ಈಡನ್ ಪಾರ್ಕ್, ಆಕ್ಲೆಂಡ್ ಮಧ್ಯಾಹ್ನ 1:30
5ನೇ ಟಿ20 ನವೆಂಬರ್ 01 ಸೆಡನ್ ಪಾರ್ಕ್, ಹ್ಯಾಮಿಲ್ಟನ್ ಮಧ್ಯಾಹ್ನ 1:30

 

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us