India vs New Zealand: ಭಾರತ-ನ್ಯೂಜಿಲೆಂಡ್ ಸರಣಿಯ ಸಂಪೂರ್ಣ ವೇಳಾಪಟ್ಟಿ

India vs New Zealand T20I: ರೋಹಿತ್‌ ಶರ್ಮಾ (ನಾಯಕ), ಕೆಎಲ್‌ ರಾಹುಲ್ (ಉಪನಾಯಕ), ಋತುರಾಜ್‌ ಗಾಯಕ್ವಾಡ್‌, ಶ್ರೇಯಸ್‌ ಅಯ್ಯರ್‌, ಸೂರ್ಯಕುಮಾರ್‌ ಯಾದವ್‌, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ಇಶಾನ್‌ ಕಿಶನ್‌.

India vs New Zealand: ಭಾರತ-ನ್ಯೂಜಿಲೆಂಡ್ ಸರಣಿಯ ಸಂಪೂರ್ಣ ವೇಳಾಪಟ್ಟಿ
India vs New Zealand
Follow us
TV9 Web
| Updated By: ಝಾಹಿರ್ ಯೂಸುಫ್

Updated on:Nov 17, 2021 | 2:44 PM

ಭಾರತ-ನ್ಯೂಜಿಲೆಂಡ್ ನಡುವಣ ಟಿ20 ಸರಣಿ ಬುಧವಾರದಿಂದ (ನ.17) ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 3 ಪಂದ್ಯಗಳು ನಡೆಯಲಿದೆ. ಈ ಸರಣಿಯೊಂದಿಗೆ ರಾಹುಲ್ ದ್ರಾವಿಡ್ ಕೋಚ್ ಆಗಿ ಹೊಸ ಇನಿಂಗ್ಸ್ ಶುರು ಮಾಡಲಿದ್ದು, ಜೊತೆಗೆ ಟೀಮ್ ಇಂಡಿಯಾ ಟಿ20 ನಾಯಕನಾಗಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸುತ್ತಿರುವುದು ವಿಶೇಷ. ಅಷ್ಟೇ ಅಲ್ಲದೆ ವಿಶ್ರಾಂತಿಯ ಕಾರಣ ಈ ಸರಣಿಯಿಂದ ವಿರಾಟ್ ಕೊಹ್ಲಿ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ರವೀಂದ್ರ ಜಡೇಜಾ ಹೊರಗುಳಿದಿದ್ದಾರೆ. ಹೀಗಾಗಿ ಒಂದಷ್ಟು ಯುವ ಆಟಗಾರರಿಗೆ ಈ ಸರಣಿಯಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ.

ಇನ್ನು ಈ ಸರಣಿಯ ಬೆನ್ನಲ್ಲೇ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನೂ ಕೂಡ ಭಾರತ-ನ್ಯೂಜಿಲೆಂಡ್ ಆಡಲಿದೆ. ಟೆಸ್ಟ್ ಸರಣಿಯು ನವೆಂಬರ್ 25 ರಿಂದ ಶುರುವಾಗಲಿದೆ. ಈ ಪಂದ್ಯಕ್ಕೂ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದು, ಹೀಗಾಗಿ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ಹಾಗೆಯೇ 2ನೇ ಟೆಸ್ಟ್ ಪಂದ್ಯದ ವೇಳೆಗೆ ವಿರಾಟ್ ಕೊಹ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇನ್ನು ಟೆಸ್ಟ್ ಸರಣಿಯ ವೇಳೆ ರೋಹಿತ್ ಶರ್ಮಾ ವಿಶ್ರಾಂತಿ ಪಡೆದಿದ್ದಾರೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ನವೆಂಬರ್ 17 ರಿಂದ ಆರಂಭವಾಗಲಿದೆ. ಮೊದಲ ಟಿ20 ಜೈಪುರದಲ್ಲಿ ನಡೆಯಲಿದ್ದು, ಎರಡನೇ ಟಿ20 ನವೆಂಬರ್ 19 ರಂದು ರಾಂಚಿಯಲ್ಲಿ ಜರುಗಲಿದೆ. ಇನ್ನು ಮೂರನೇ ಟಿ20 ನವೆಂಬರ್ 21 ರಂದು ಕೋಲ್ಕತ್ತಾದಲ್ಲಿ ನಡೆಯಲಿದೆ. ಈ ಎಲ್ಲಾ ಪಂದ್ಯಗಳು ಸಂಜೆ 7 ರಿಂದ ಶುರುವಾಗಲಿದೆ.

ಇನ್ನು 2 ಪಂದ್ಯಗಳ ಟೆಸ್ಟ್‌ ಸರಣಿಯ ಮೊದಲ ಪಂದ್ಯ ನವೆಂಬರ್​ 25 ರಿಂದ ಕಾನ್ಪುರದಲ್ಲಿ ಆರಂಭವಾಗಲಿದೆ. ಇನ್ನು 2ನೇ ಪಂದ್ಯವು ಡಿಸೆಂಬರ್. 3 ರಿಂದ ಮುಂಬೈನಲ್ಲಿ ಶರುವಾಗಲಿದೆ. ಟಿ20 ಹಾಗೂ ಟೆಸ್ಟ್ ಪಂದ್ಯಗಳು ಸ್ಟಾರ್​ ಸ್ಪೋರ್ಟ್ಸ್​ ಚಾನೆಲ್​ನಲ್ಲಿ ನೇರ ಪ್ರಸಾರ ಇರಲಿದ್ದು, ಹಾಗೆಯೇ ಡಿಸ್ನಿ ಹಾಟ್​ಸ್ಟಾರ್​ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ: ಅಜಿಂಕ್ಯಾ ರಹಾನೆ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ (ಉಪ – ನಾಯಕ), ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ದಿಮಾನ್ ಸಾಹ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ.

ಭಾರತ ಟಿ20 ತಂಡ ಹೀಗಿದೆ: ರೋಹಿತ್‌ ಶರ್ಮಾ (ನಾಯಕ), ಕೆಎಲ್‌ ರಾಹುಲ್ (ಉಪನಾಯಕ), ಋತುರಾಜ್‌ ಗಾಯಕ್ವಾಡ್‌, ಶ್ರೇಯಸ್‌ ಅಯ್ಯರ್‌, ಸೂರ್ಯಕುಮಾರ್‌ ಯಾದವ್‌, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ಇಶಾನ್‌ ಕಿಶನ್‌ (ವಿಕೆಟ್‌ಕೀಪರ್‌), ವೆಂಕಟೇಶ್‌ ಅಯ್ಯರ್‌, ಯುಜ್ವೇಂದ್ರ ಚಹಲ್‌, ಆರ್‌ ಅಶ್ವಿನ್‌, ಅಕ್ಷರ್‌ ಪಟೇಲ್‌, ಅವೇಶ್ ಖಾನ್‌, ಭುವನೇಶ್ವರ್‌ ಕುಮಾರ್‌, ದೀಪಕ್ ಚಹರ್‌, ಹರ್ಷಲ್‌ ಪಟೇಲ್‌, ಮೊಹಮ್ಮದ್‌ ಸಿರಾಜ್‌.

ಇದನ್ನೂ ಓದಿ: T20 World Cup 2021: ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾಗೆ ಸಿಕ್ಕ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: T20 World Cup Winners: 7 ಟಿ20 ವಿಶ್ವಕಪ್​: ಚಾಂಪಿಯನ್​ ಪಟ್ಟಕ್ಕೇರಿದ 6 ತಂಡಗಳು

ಇದನ್ನೂ ಓದಿ:  Sourav Ganguly: ದ್ರಾವಿಡ್ ಅವರ ಮಗ ಕರೆ ಮಾಡಿ ಅಪ್ಪ ತುಂಬಾ ಕಟ್ಟುನಿಟ್ಟು, ನೀವು ಅವರನ್ನು ಕರ್ಕೊಂಡು ಹೋಗಿ ಎಂದರು..!

(India vs New Zealand T20I, Test Series: Schedule, Squads)

Published On - 10:30 pm, Tue, 16 November 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್