India vs New Zealand: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಬೆನ್ನಲ್ಲೇ ಭಾರತದ ನ್ಯೂಜಿಲೆಂಡ್ ಪ್ರವಾಸವನ್ನೂ ರದ್ದುಗೊಳಿಸಿದ ಬಿಸಿಸಿಐ

ಬಿಡುವಿಲ್ಲದ ಕ್ರಿಕೆಟ್‌ ಮತ್ತು ಕೋವಿಡ್‌-19 (COVID 19) ನಿರ್ಬಂಧಗಳ ಕಾರಣ ಈ ವರ್ಷದ ಟೀಮ್ ಇಂಡಿಯಾದ ನ್ಯೂಜಿಲೆಂಡ್ ಪ್ರವಾಸವನ್ನು ಬಿಸಿಸಿಐ ಮುಂದೂಡಲ್ಪಟ್ಟಿದೆ.

India vs New Zealand: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಬೆನ್ನಲ್ಲೇ ಭಾರತದ ನ್ಯೂಜಿಲೆಂಡ್ ಪ್ರವಾಸವನ್ನೂ ರದ್ದುಗೊಳಿಸಿದ ಬಿಸಿಸಿಐ
IND vs NZ
Follow us
TV9 Web
| Updated By: Vinay Bhat

Updated on: Sep 17, 2021 | 7:57 AM

ಟೀಮ್ ಇಂಡಿಯಾ (Team India) ಇದೇ ವರ್ಷ ಏಕದಿನ ಕ್ರಿಕೆಟ್‌ ಸರಣಿ ಸಲುವಾಗಿ ನ್ಯೂಜಿಲೆಂಡ್‌ (New Zealand) ಪ್ರವಾಸ ಕೈಗೊಳ್ಳುವುದಿತ್ತು. ವಿಶ್ವಕಪ್‌ (World Cup) ಸೂಪರ್ ಲೀಗ್‌ ಭಾಗವಾಗಿ ನ್ಯೂಜಿಲೆಂಡ್‌ಗೆ ಪ್ರವಾಸ ಹೋಗಲಿದ್ದ ಭಾರತ ಅಲ್ಲಿ ಮೂರು ಏಕದಿನ ಪಂದ್ಯಗಳನ್ನು ಆಡಬೇಕಾಗಿತ್ತು. ಆದರೆ, ಬಿಡುವಿಲ್ಲದ ಕ್ರಿಕೆಟ್‌ ಮತ್ತು ಕೋವಿಡ್‌-19 (COVID 19) ನಿರ್ಬಂಧಗಳ ಕಾರಣ ಈ ವರ್ಷ ಕಿವೀಸ್‌ ಪ್ರವಾಸವನ್ನು ರದ್ದು ಮಾಡಲು ಬಿಸಿಸಿಐ ನಿರ್ಧರಿಸಿದೆ. ಹೀಗಾಗಿ ಈ ವರ್ಷ ನಡೆಯಬೇಕಾಗಿದ್ದ ಈ ಪ್ರವಾಸ ಪಂದ್ಯಗಳು ಮುಂದಿನ ವರ್ಷಕ್ಕೆ ಮುಂದೂಡಲ್ಪಟ್ಟಿದೆ.

ನ್ಯೂಜಿಲೆಂಡ್ ಕ್ರಿಕೆಟ್ ಕೂಡ ವೇಳಾಪಟ್ಟಿಯ ಒತ್ತಡದಲ್ಲಿದೆ. ಹಲವು ಸರಣಿಗಳು ನಡೆಯಬೇಕಿದೆ. ಹೀಗಾಗಿ, ಭಾರತ ತನ್ನ ಕ್ರಿಕೆಟ್ ಪ್ರವಾಸ ರದ್ದು ಮಾಡಿರುವುದಕ್ಕೆ ನ್ಯೂಜಿಲೆಂಡ್ ಚಕಾರ ಎತ್ತಿಲ್ಲ. 2023ರ ಏಕದಿನ ಕ್ರಿಕೆಟ್ ಸೂಪರ್ ಲೀಗ್ ಚಾಂಪಿಯನ್​ಶಿಪ್​ನ ಅಡಿಯಲ್ಲಿ ಭಾರತ ತಂಡ ಮುಂದಿನ ವರ್ಷ ನ್ಯೂಜಿಲೆಂಡ್​ನಲ್ಲಿ ಮೂರು ಏಕದಿನ ಪಂದ್ಯಗಳನ್ನ ಆಡಲಿದೆ. ಇದು ಮುಂದಿನ ವರ್ಷಾಂತ್ಯದಲ್ಲಿ ನಿಗದಿಯಾಗಿರುವ ಪಂದ್ಯಗಳಾಗಿವೆ.

ಮುಂದಿನ ವರ್ಷ ಬೇಸಿಗೆ ವೇಳೆ ನ್ಯೂಜಿಲೆಂಡ್ ತಂಡ ಬಾಂಗ್ಲಾದೇಶ, ನೆದರ್​ಲ್ಯಾಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳಿಗೆ ಆತಿಥ್ಯ ವಹಿಸಲಿದೆ. ಇದಲ್ಲದೆ ಮಾರ್ಚ್-ಏಪ್ರಿಲ್‌ನಲ್ಲಿ ಮಹಿಳಾ ವಿಶ್ವಕಪ್‌ನ ಏಳು ತಂಡಗಳಿಗೆ ನ್ಯೂಜಿಲೆಂಡ್ ಆತಿಥ್ಯ ವಹಿಸಲಿದೆ. ಬಾಂಗ್ಲಾದೇಶ, ನೆದರ್​ಲ್ಯಾಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳಿಗೆ ಆತಿಥ್ಯ ವಹಿಸುವಾಗ ಬಾಂಗ್ಲಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳಿಗೆ ಟೆಸ್ಟ್ ಪಂದ್ಯಗಳನ್ನು ನಡೆಸಲಿದೆ. ಇದು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಭಾಗವಾಗಿರಲಿದೆ.

“ಚಳಿಗಾಲದಿಂದಲೂ ಸುದೀರ್ಘ ಪ್ರವಾಸಕ್ಕಾಗಿ ಬಹಳಷ್ಟು ಆಟಗಾರರು ಇಲ್ಲಿಗೆ ಬರುವುದಲ್ಲಿದ್ದಾರೆ. ಅವರಿಗೂ ನಾವು ತವರಿನಲ್ಲಿ ಸಮಯ ಕೊಡಬೇಕಾಗುತ್ತದೆ,” ಎಂದು ನ್ಯೂಜಿಲೆಂಡ್ ಕ್ರಿಕೆಟ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡೇವಿಡ್ ವೈಟ್ ಹೇಳಿದ್ದಾರೆ.

ಇನ್ನೂ ಟಿ-20 ಕ್ರಿಕೆಟ್ ವಿಶ್ವಕಪ್‌ ಟೂರ್ನಿಯ ಸೂಪರ್‌ 12 ಹಂತಕ್ಕೆ ನೇರ ಅರ್ಹತೆ ಪಡೆದಿರುವ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳು 2ನೇ ಗುಂಪಿನಲ್ಲಿ ಪರಸ್ಪರ ಎದುರಾಗಲಿವೆ. 2019ರ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ಎದುರು ನಿರಾಶೆ ಅನುಭವಿಸಿತ್ತು. ಹೀಗಾಗಿ ಟಿ-20 ವಿಶ್ವಕಪ್‌ನಲ್ಲಿ ಭಾರತ-ನ್ಯೂಜಿಲೆಂಡ್ ನಡುವಣ ಕಾದಾಟ ಬಹಳಾ ಕುತೂಹಲ ಹಿಡಿದಿಟ್ಟಿದೆ.

ಅಲ್ಲದೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಕಡೇಯ ಸಾರಿ ಮುಖಾಮುಖಿಯಾಗಿದ್ದು ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯದಲ್ಲಿ. ಈ ಪಂದ್ಯ ಇಂಗ್ಲೆಂಡ್‌ನಲ್ಲಿ ನಡೆದಿತ್ತು. ಆದರೆ ಈ ಪಂದ್ಯದಲ್ಲಿ ಭಾರತ ಸೋತು ಮುಖಭಂಗ ಅನುಭವಿಸಿತ್ತು. ಫೈನಲ್‌ನಲ್ಲಿ ಸೋತಿರುವ ಭಾರತ ತಂಡ ಮುಯ್ಯಿ ತೀರಿಸಿಕೊಳ್ಳುವುದಕ್ಕಾಗಿ ಕಾಯುತ್ತಿದೆ.

Virat Kohli: ವಿರಾಟ್ ಕೊಹ್ಲಿ ಟಿ-20 ನಾಯಕತ್ವಕ್ಕೆ ವಿದಾಯ ಹೇಳಿದ ಬೆನ್ನಲ್ಲೇ ಸೌರವ್ ಗಂಗೂಲಿ ಏನಂದ್ರು?

Virat Kohli: ಟಿ20 ನಾಯಕತ್ವಕ್ಕೆ ವಿರಾಟ್ ವಿದಾಯ; ಚುಟುಕು ಕ್ರಿಕೆಟ್‌ ನಾಯಕತ್ವದಲ್ಲಿ ಕೊಹ್ಲಿ ಸೃಷ್ಟಿಸಿದ ದಾಖಲೆಗಳಿವು!

(India vs New Zealand Team India will not be touring New Zealand this year due to a packed calendar and COVID-19 restrictions)

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ