IND vs NZ: ಟೆಸ್ಟ್ ಸರಣಿಗೆ ಭಾರತ- ನ್ಯೂಜಿಲೆಂಡ್ ತಂಡಗಳು ಪ್ರಕಟ; ಮೊದಲ ಪಂದ್ಯ ಎಲ್ಲಿ ಮತ್ತು ಯಾವಾಗ?

|

Updated on: Oct 12, 2024 | 3:47 PM

IND vs NZ: ಮುಂದಿನ ವಾರದಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಇನ್ನು ಟೀಂ ಇಂಡಿಯಾಕ್ಕೂ ಮುನ್ನವೇ ನ್ಯೂಜಿಲೆಂಡ್ ಕೂಡ ತನ್ನ ತಂಡವನ್ನು ಪ್ರಕಟಿಸಿತ್ತು. ಅದರಂತೆ 17 ಸದಸ್ಯರ ಕಿವೀಸ್ ತಂಡ ಭಾರತಕ್ಕೆ ಬರುತ್ತಿದೆ.

IND vs NZ: ಟೆಸ್ಟ್ ಸರಣಿಗೆ ಭಾರತ- ನ್ಯೂಜಿಲೆಂಡ್ ತಂಡಗಳು ಪ್ರಕಟ; ಮೊದಲ ಪಂದ್ಯ ಎಲ್ಲಿ ಮತ್ತು ಯಾವಾಗ?
ಭಾರತ- ನ್ಯೂಜಿಲೆಂಡ್
Follow us on

ಮುಂದಿನ ವಾರದಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಉಭಯ ತಂಡಗಳ ನಡುವಿನ 3 ಪಂದ್ಯಗಳ ಟೆಸ್ಟ್ ಸರಣಿಯು ಅಕ್ಟೋಬರ್ 16 ರಿಂದ ಪ್ರಾರಂಭವಾಗಲಿದ್ದು, ಈ ಸರಣಿಗಾಗಿ 15 ಸದಸ್ಯರ ಭಾರತ ತಂಡ ಪ್ರಕಟವಾಗಿದೆ. ಬಾಂಗ್ಲಾದೇಶದ ವಿರುದ್ಧ ಟೆಸ್ಟ್ ಸರಣಿ ಆಡಿದ್ದ ಆಟಗಾರರೇ ಈ ಸರಣಿಗೂ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಇನ್ನು ಟೀಂ ಇಂಡಿಯಾಕ್ಕೂ ಮುನ್ನವೇ ನ್ಯೂಜಿಲೆಂಡ್ ಕೂಡ ತನ್ನ ತಂಡವನ್ನು ಪ್ರಕಟಿಸಿತ್ತು. ಅದರಂತೆ 17 ಸದಸ್ಯರ ಕಿವೀಸ್ ತಂಡ ಭಾರತಕ್ಕೆ ಬರುತ್ತಿದೆ.

ಟೆಸ್ಟ್ ಸರಣಿಯ ಸಂಪೂರ್ಣ ವೇಳಾಪಟ್ಟಿ

  1. ಮೊದಲ ಟೆಸ್ಟ್ ಪಂದ್ಯ: ಅಕ್ಟೋಬರ್ 16, ಬೆಂಗಳೂರು
  2. ಎರಡನೇ ಟೆಸ್ಟ್ ಪಂದ್ಯ: ಅಕ್ಟೋಬರ್ 24, ಪುಣೆ
  3. ಮೂರನೇ ಟೆಸ್ಟ್ ಪಂದ್ಯ: 1 ನವೆಂಬರ್, ಮುಂಬೈ

ಬೆಂಗಳೂರಿನಲ್ಲಿ ಮೊದಲ ಪಂದ್ಯ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಪಂದ್ಯ ಅಕ್ಟೋಬರ್ 16 ರಂದು ಬೆಂಗಳೂರಿನಲ್ಲಿ ನಡೆಯಲ್ಲಿದ್ದು, ಆ ಬಳಿಕ ಎರಡನೇ ಪಂದ್ಯ ಅಕ್ಟೋಬರ್ 24 ರಂದು ಪುಣೆಯಲ್ಲಿ ನಡೆಯಲಿದೆ. ಮೂರನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ನವೆಂಬರ್ 1 ರಂದು ಮುಂಬೈನ ಐತಿಹಾಸಿಕ ಮೈದಾನದಲ್ಲಿ ನಡೆಯಲಿದೆ. ಎಲ್ಲಾ ಟೆಸ್ಟ್ ಪಂದ್ಯಗಳು ಭಾರತೀಯ ಕಾಲಮಾನ ಬೆಳಗ್ಗೆ 9.30ಕ್ಕೆ ಆರಂಭವಾಗಲಿವೆ. ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇದುವರೆಗೆ ಒಟ್ಟು 62 ಟೆಸ್ಟ್ ಪಂದ್ಯಗಳು ನಡೆದಿದ್ದು, ಅದರಲ್ಲಿ ಭಾರತ 22 ಪಂದ್ಯಗಳನ್ನು ಗೆದ್ದಿದ್ದರೆ, ನ್ಯೂಜಿಲೆಂಡ್ 12 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ.

ಯಾವ ಚಾನೆಲ್‌ನಲ್ಲಿ ನೇರಪ್ರಸಾರ?

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯನ್ನು ಸ್ಪೋರ್ಟ್ಸ್ 18 ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್

ಮೀಸಲು ಆಟಗಾರರು: ಮಯಾಂಕ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ ಮತ್ತು ಪ್ರಸಿದ್ಧ್ ಕೃಷ್ಣ

ನ್ಯೂಜಿಲೆಂಡ್ ಟೆಸ್ಟ್ ತಂಡ: ಟಾಮ್ ಲೇಥಮ್ (ನಾಯಕ), ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಮೈಕೆಲ್ ಬ್ರೇಸ್‌ವೆಲ್ (ಮೊದಲನೇ ಟೆಸ್ಟ್​ಗೆ ಮಾತ್ರ), ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಮ್ಯಾಟ್ ಹೆನ್ರಿ, ಡೇರಿಲ್ ಮಿಚೆಲ್, ವಿಲ್ ಓ’ರೂರ್ಕ್, ಅಜಾಜ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಬೆನ್ ಸಿಯರ್ಸ್ , ಇಶ್ ಸೋಧಿ (ಎರಡನೇ ಮತ್ತು ಮೂರನೇ ಟೆಸ್ಟ್‌ಗಳಿಗೆ ಮಾತ್ರ), ಟಿಮ್ ಸೌಥಿ, ಕೇನ್ ವಿಲಿಯಮ್ಸನ್, ವಿಲ್ ಯಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:46 pm, Sat, 12 October 24