IND vs NZ: ಇಂದಿನಿಂದ ಭಾರತ-ನ್ಯೂಝಿಲೆಂಡ್ ಟೆಸ್ಟ್ ಸರಣಿ ಶುರು

|

Updated on: Oct 16, 2024 | 7:25 AM

India vs New Zealand Test: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇತ್ತ ಬೆಂಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಮೊದಲ ಪಂದ್ಯದ ಟಾಸ್ ಪ್ರಕ್ರಿಯೆ ವಿಳಂಬವಾಗುವ ಸಾಧ್ಯತೆಯಿದೆ.

IND vs NZ: ಇಂದಿನಿಂದ ಭಾರತ-ನ್ಯೂಝಿಲೆಂಡ್ ಟೆಸ್ಟ್ ಸರಣಿ ಶುರು
IND vs NZ
Follow us on

ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಟೆಸ್ಟ್ ಸರಣಿಯು ಇಂದಿನಿಂದ (ಅ.16) ಪ್ರಾರಂಭವಾಗಲಿದೆ. ಈ ಸರಣಿಯ‌ ಮೊದಲ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದ್ದು, ಎರಡನೇ ಮ್ಯಾಚ್ ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿದೆ. ಹಾಗೆಯೇ ಮೂರನೇ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಜರುಗಲಿದೆ.

ಎಷ್ಟು ಗಂಟೆಗೆ ಮ್ಯಾಚ್ ಶುರು?

ಈ ಸರಣಿಯ ಎಲ್ಲಾ ಪಂದ್ಯಗಳು ಬೆಳಿಗ್ಗೆ 9.30 ರಿಂದ ಶುರುವಾಗಲಿದೆ. ಇನ್ನು ಟಾಸ್ ಪ್ರಕ್ರಿಯೆ 9 ಗಂಟೆಗೆ ನಡೆಯಲಿದೆ.

ಯಾವ ಚಾನೆಲ್‌ನಲ್ಲಿ ನೇರ ಪ್ರಸಾರ?

ಭಾರತ – ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿಯ ಎಲ್ಲಾ ಪಂದ್ಯಗಳು ಸ್ಪೋರ್ಟ್ಸ್ 18 ಚಾನೆಲ್‌ನಲ್ಲಿ ನೇರ ಪ್ರಸಾರವಾಗಲಿದೆ. ಇನ್ನು ಜಿಯೋ ಸಿನಿಮಾ ಆ್ಯಪ್ ನಲ್ಲಿ ಉಚಿತವಾಗಿ ಲೈವ್ ವೀಕ್ಷಿಸಬಹುದು.

ಉಭಯ ತಂಡಗಳ ಮುಖಾಮುಖಿ:

ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಈವರೆಗೆ 62 ಟೆಸ್ಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 22 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 13 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನುಳಿದ 27 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿತ್ತು.

ಉಭಯ ತಂಡಗಳು:

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2025: RCB ತಂಡದಿಂದ ಗ್ರೀನ್​ಗೆ ಗೇಟ್​ ಪಾಸ್..!

ನ್ಯೂಝಿಲೆಂಡ್ ಟೆಸ್ಟ್ ತಂಡ: ಟಾಮ್ ಲ್ಯಾಥಮ್ (ನಾಯಕ), ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಮ್ಯಾಟ್ ಹೆನ್ರಿ, ಡೇರಿಲ್ ಮಿಚೆಲ್, ವಿಲ್ ಓ’ರೂರ್ಕ್, ಅಜಾಝ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಕೇನ್ ವಿಲಿಯಮ್ಸನ್ (ಮೊದಲ ಪಂದ್ಯಕ್ಕೆ ಅಲಭ್ಯ), ಜೇಕೊಬ್ ಡಫಿ, ವಿಲ್ ಯಂಗ್, ಮೈಕೆಲ್ ಬ್ರೇಸ್‌ವೆಲ್ (ಮೊದಲನೇ ಟೆಸ್ಟ್​ಗೆ ಮಾತ್ರ), ಇಶ್ ಸೋಧಿ (ಮೊದಲ ಪಂದ್ಯಕ್ಕೆ ಅಲಭ್ಯ).

ಭಾರತ vs ನ್ಯೂಝಿಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:

  • ಮೊದಲ ಟೆಸ್ಟ್ – ಅಕ್ಟೋಬರ್ 16 ರಿಂದ 20 (ಚಿನ್ನಸ್ವಾಮಿ ಸ್ಟೇಡಿಯಂ, ಬೆಂಗಳೂರು)
  • ಎರಡನೇ ಟೆಸ್ಟ್ – 24 ರಿಂದ 28 ಅಕ್ಟೋಬರ್ (ಎಂಸಿಎ ಸ್ಟೇಡಿಯಂ, ಪುಣೆ)
  • ಮೂರನೇ ಟೆಸ್ಟ್ – ನವೆಂಬರ್ 1 ರಿಂದ 5 (ವಾಂಖೆಡೆ ಸ್ಟೇಡಿಯಂ, ಮುಂಬೈ)