IND vs NZ, T20 WC: ಭಾರತ-ನ್ಯೂಜಿಲೆಂಡ್: ಇಂದಿನ ಪಂದ್ಯದಲ್ಲಿ ಸೋತ ತಂಡದ ಮುಂದಿನ ಹಾದಿ ಹೇಗಿರಲಿದೆ?: ಇಲ್ಲಿದೆ ನೋಡಿ

Who Will Win Today Match?, India vs New Zealand: ಇಂದಿನ ಭಾರತ ಹಾಗೂ ನ್ಯೂಜಿಲೆಂಡ್ ಪಂದ್ಯದಲ್ಲಿ ಸೊತ ತಂಡವು ಮುಂದಿನ ಮೂರು ಪಂದ್ಯಗಳಲ್ಲಿ ಸ್ಕಾಟ್ಲೆಂಡ್, ನಮಿಬಿಯಾ ಮತ್ತು ಆಫ್ಘಾನಿಸ್ತಾನದ ಎದುರು ಜಯಿಸಬೇಕಾದ ಒತ್ತಡಕ್ಕೆ ಸಿಲುಕಲಿದೆ. ಇದರ ನಡುವೆ ವಿರಾಟ್ ಕೊಹ್ಲಿ ಪಡೆಗೆ ಬಹುದೊಡ್ಡ ಸಮಸ್ಯೆ ಕೂಡ ಇದೆ.

IND vs NZ, T20 WC: ಭಾರತ-ನ್ಯೂಜಿಲೆಂಡ್: ಇಂದಿನ ಪಂದ್ಯದಲ್ಲಿ ಸೋತ ತಂಡದ ಮುಂದಿನ ಹಾದಿ ಹೇಗಿರಲಿದೆ?: ಇಲ್ಲಿದೆ ನೋಡಿ
Virat Kohli and Kane Wiliason IND vs NZ
Follow us
TV9 Web
| Updated By: Vinay Bhat

Updated on: Oct 31, 2021 | 12:12 PM

ಟಿ20 ವಿಶ್ವಕಪ್ ಟೂರ್ನಿಯ (T20 World Cup) ಚೊಚ್ಚಲ ಪಂದ್ಯದಲ್ಲೇ ಪಾಕಿಸ್ತಾನ (India vs Pakistan) ವಿರುದ್ಧ 10 ವಿಕೆಟ್​ಗಳಿಂದ ಸೋಲು ಕಂಡಿರುವ ಟೀಮ್ ಇಂಡಿಯಾ (Team India) ಇಂದು ತನ್ನ ಎರಡನೇ ಅಗ್ನಿ ಪರೀಕ್ಷೆಗೆ ಸಿದ್ಧವಾಗಿದೆ. ಸೋಲಿನೊಂದಿಗೆ ಅಭಿಯಾನ ಆರಂಭಸಿರುವ ವಿರಾಟ್ ಕೊಹ್ಲಿ (Virat Kohli) ಪಡೆ ಇಂದು ನ್ಯೂಜಿಲೆಂಡ್ (India vs New Zealand) ವಿರುದ್ಧ ಕಣಕ್ಕಿಳಿಯಲಿದ್ದು ಈ ಪಂದ್ಯ ಬಹುಮುಖ್ಯವಾಗಿದೆ. ಎಲ್ಲಾದರು ಸೋತರೆ ಟಿ20 ವಿಶ್ವಕಪ್​ನ ಮುಂದಿನ ಹಾದಿ ಕಬ್ಬಿಣದ ಕಡಲೆಯಂತಾಗಲಿದೆ. ಸೆಮಿ ಫೈನಲ್​ಗೆ ಕ್ವಾಲಿಫೈಯಾಗಲು ತುಂಬಾನೆ ಕಷ್ಟ ಅನುಭವಿಸಬೇಕಾಗುತ್ತದೆ. ಅಲ್ಲದೆ ಇತರೆ ತಂಡಗಳ ಫಲಿತಾಂಶದ ಮೇಲೆ ಭಾರತದ ಭವಿಷ್ಯ ನಿರ್ಧಾರವಾಗುತ್ತದೆ. ಹೀಗೆ ಮೊದಲ ಪಂದ್ಯ ಸೋತ ಭಾರತಕ್ಕೆ (India) ಮುಂದಿನ ದಿನಗಳಲ್ಲಿ ಸಾಲು ಸಾಲು ಸವಾಲೆದುರಾಗಲಿದೆ.

ಐಸಿಸಿ ನಿಯಮದ ಪ್ರಕಾರ ಸೂಪರ್ 12 ನಲ್ಲಿರುವ ಪ್ರತಿ ಗ್ರೂಪ್​ನಿಂದ ಕೇವಲ ಎರಡು ತಂಡಗಳು ಮಾತ್ರ ಮುಂದಿನ ಸುತ್ತಿಗೆ ಪ್ರವೇಶ ಪಡೆಯುತ್ತಿದೆ. ಭಾರತ ತಂಡ ನ್ಯೂಜಿಲೆಂಡ್ ವಿರುದ್ಧದ ಪಂದ್ಯ ಸೋತರೆ ಇದು ಕೊಂಚ ಕಷ್ಟ ಎಂದು ಹೇಳಬಹುದು. ಒಂದೊಮ್ಮೆ ಈ ಪಂದ್ಯದಲ್ಲಿ ಸೊತ ತಂಡವು ಮುಂದಿನ ಮೂರು ಪಂದ್ಯಗಳಲ್ಲಿ ಸ್ಕಾಟ್ಲೆಂಡ್, ನಮಿಬಿಯಾ ಮತ್ತು ಆಫ್ಘಾನಿಸ್ತಾನದ ಎದುರು ಜಯಿಸಬೇಕಾದ ಒತ್ತಡಕ್ಕೆ ಸಿಲುಕಲಿದೆ. ಅದೇ ರೀತಿ ಈ ಪಂದ್ಯದಲ್ಲಿ ಗೆದ್ದ ತಂಡವು ಮುಂದಿನ ಮೂರು ಹಣಾಹಣಿಗಳಲ್ಲಿ ಒಂದರಲ್ಲಿ ಸೋಲಬೇಕು.

ಇಲ್ಲಿ ಕೊಹ್ಲಿ ಪಡೆಗೆ ಎದುರಾಗಿರುವ ದೊಡ್ಡ ಸಮಸ್ಯೆ ಎಂದರೆ ಐಸಿಸಿಯ ವಿಶ್ವಕಪ್ ಟೂರ್ನಿಗಳಲ್ಲಿ ಭಾರತ ತಂಡವು ಮೇಲುಗೈ ಸಾಧಿಸಿಲ್ಲ. 2016ರಲ್ಲಿ ಮಹೇಂದ್ರಸಿಂಗ್ ಧೋನಿ ಬಳಗದೆದುರೂ ಕಿವೀಸ್ ಜಯಿಸಿತ್ತು. 2019ರ ಏಕದಿನ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಕೇನ್ ವಿಲಿಯಮ್ಸನ್ ಬಳಗವು ಕೊಹ್ಲಿ ಪಡೆಯನ್ನು ಸೋಲಿಸಿತ್ತು. ಕೆಲವು ತಿಂಗಳುಗಳ ಹಿಂದೆ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್‌ನಲ್ಲಿಯೂ ಕಿವೀಸ್ ಗೆದ್ದಿತ್ತು. ಅದರಿಂದಾಗಿ ಕೊಹ್ಲಿ ಎದುರು ಈ ಸೋಲಿನ ಸರಪಣಿ ತುಂಡರಿಸುವ ಸವಾಲು ಕೂಡ ಇದೆ.

ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಾಹರ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ.

ಮೀಸಲು ಆಟಗಾರರು: ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್.

ನ್ಯೂಜಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟಾಡ್ ಆಸ್ಟಲ್, ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮಾರ್ಟಿನ್ ಗಪ್ಟಿಲ್, ಕೈಲ್ ಜೇಮೀಸನ್, ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಟಿಫರ್ಟ್ (ವಿಕೆಟ್ ಕೀಪರ್).

ಮೀಸಲು ಆಟಗಾರ: ಆಯಡಮ್ ಮಿಲ್ನೆ.

Afghanistan vs Namibia: ಇಂಡೋ-ಕಿವೀಸ್ ಪಂದ್ಯದ ನಡುವೆ ಮರೆಯದಿರಿ ಅಫ್ಘಾನಿಸ್ತಾನ vs ನಮೀಬಿಯಾ ಕದನ

India vs New Zealand: ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಭಾರತದಲ್ಲಿ ಬರೋಬ್ಬರಿ 4 ಬದಲಾವಣೆಯಂತೆ!

(India vs New Zealand What happens if Virat Kohli lead IND or Kanes NZ looses Todays Match in T20 World Cup)

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್