IND vs NZ: ಏಕದಿನ ಸರಣಿ ಗೆದ್ದು ಕಿವೀಸ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ ಭಾರತ? ಪಂದ್ಯ ಎಷ್ಟು ಗಂಟೆಗೆ ಆರಂಭ?

|

Updated on: Oct 28, 2024 | 9:40 PM

IND vs NZ Women's ODI: ಭಾರತ ಮತ್ತು ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡಗಳ ನಡುವಿನ ನಿರ್ಣಾಯಕ ಮೂರನೇ ಏಕದಿನ ಪಂದ್ಯ ಅಕ್ಟೋಬರ್ 29 ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ. ಪಂದ್ಯವು ಮಧ್ಯಾಹ್ನ 1:30 ಕ್ಕೆ ಆರಂಭವಾಗಲಿದೆ ಮತ್ತು ಸ್ಪೋರ್ಟ್ಸ್ 18 ರಲ್ಲಿ ಪ್ರಸಾರವಾಗಲಿದೆ. ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಉಚಿತ ಲೈವ್ ಸ್ಟ್ರೀಮಿಂಗ್ ಲಭ್ಯವಿದೆ. ಈ ಪಂದ್ಯದ ಫಲಿತಾಂಶ 3-ಪಂದ್ಯಗಳ ಸರಣಿಯ ಗೆಲುವನ್ನು ನಿರ್ಧರಿಸುತ್ತದೆ.

IND vs NZ: ಏಕದಿನ ಸರಣಿ ಗೆದ್ದು ಕಿವೀಸ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ ಭಾರತ? ಪಂದ್ಯ ಎಷ್ಟು ಗಂಟೆಗೆ ಆರಂಭ?
ಭಾರತ- ನ್ಯೂಜಿಲೆಂಡ್
Follow us on

ಒಂದೆಡೆ ಭಾರತ ಹಾಗೂ ನ್ಯೂಜಿಲೆಂಡ್ ಪುರುಷ ತಂಡಗಳ ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಸರಣಿಯಲ್ಲಿ 2-0 ಅಂತರದ ಮುನ್ನಡೆ ಪಡೆದುಕೊಂಡಿರುವ ನ್ಯೂಜಿಲೆಂಡ್ ತಂಡ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಟೆಸ್ಟ್ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಉಳಿದಂತೆ ಉಭಯ ತಂಡಗಳ ನಡುವಿನ ಕೊನೆಯ ಪಂದ್ಯ ನವೆಂಬರ್ 1 ರಿಂದ ಆರಂಭವಾಗಲಿದೆ. ಇದು ಪುರುಷ ತಂಡಗಳ ಕಥೆಯಾದರೆ. ಇತ್ತ ಇದೇ ಭಾರತ ಹಾಗೂ ನ್ಯೂಜಿಲೆಂಡ್ ಮಹಿಳಾ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿರುವುದರಿಂದ ಸರಣಿ 1-1 ರಿಂದ ಸಮಬಲಗೊಂಡಿದೆ. ಇದೀಗ ಈ ಎರಡೂ ತಂಡಗಳ ನಡುವಿನ ನಿರ್ಣಾಯಕ ಪಂದ್ಯ ಅಕ್ಟೋಬರ್ 29 ರಂದು ನಡೆಯಲ್ಲಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಉಭಯ ತಂಡಗಳ ನಡುವೆ ನಡೆದ ಮೊದಲ ಪಂದ್ಯವನ್ನು ಆತಿಥೇಯ ಭಾರತ ತಂಡ 59 ರನ್‌ಗಳಿಂದ ಗೆದ್ದುಕೊಂಡಿತ್ತು. ಆ ಬಳಿಕ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 76 ರನ್‌ಗಳಿಂದ ಭರ್ಜರಿ ಜಯ ಸಾಧಿಸಿತ್ತು. ಇಂತಹ ಪರಿಸ್ಥಿತಿಯಲ್ಲಿ ಸರಣಿಯ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯ ನಿರ್ಣಾಯಕವಾಗಿದೆ. ಈ ಪಂದ್ಯವನ್ನು ಗೆದ್ದ ತಂಡ ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ. ಹೀಗಾಗಿ ಸರಣಿ ಮೇಲೆ ಕಣ್ಣಿಟ್ಟಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲುವುದರೊಂದಿಗೆ ಟಿ20 ವಿಶ್ವಕಪ್ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡದ ನಡುವಿನ ಮೂರನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡದ ನಡುವಿನ ಸರಣಿಯ ಮೂರನೇ ಏಕದಿನ ಪಂದ್ಯವು ಮಂಗಳವಾರ ಅಕ್ಟೋಬರ್ 29 ರಂದು ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡದ ನಡುವಿನ ಮೂರನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡದ ನಡುವಿನ ಸರಣಿಯ ಮೂರನೇ ಏಕದಿನ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡದ ನಡುವಿನ ಸರಣಿಯ ಸರಣಿಯ ಮೂರನೇ ಏಕದಿನ ಪಂದ್ಯ ಯಾವ ಸಮಯದಲ್ಲಿ ಪ್ರಾರಂಭವಾಗಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡದ ನಡುವಿನ ಸರಣಿಯ ಸರಣಿಯ ಮೂರನೇ ಏಕದಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1:30 ಕ್ಕೆ ಆರಂಭವಾಗಲಿದೆ. ಅಲ್ಲದೆ ಟಾಸ್ ಅರ್ಧ ಗಂಟೆ ಮುಂಚಿತವಾಗಿ ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡದ ನಡುವಿನ ಸರಣಿಯ ಮೂರನೇ ಏಕದಿನ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?

ಭಾರತ ಮತ್ತು ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡದ ನಡುವಿನ ಸರಣಿಯ ಮೂರನೇ ಏಕದಿನ ಪಂದ್ಯವನ್ನು ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಲಭ್ಯವಿರುತ್ತದೆ.

ಉಭಯ ತಂಡಗಳು

ಭಾರತ ಮಹಿಳಾ ತಂಡ: ಭಾರತ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಡಿ. ಹೇಮಲತಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ಯಾಸ್ತಿಕಾ ಭಾಟಿಯಾ, ಉಮಾ ಚೆಟ್ರಿ, ಸಯಾಲಿ ಸತ್ಗರೆ, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್, ತೇಜಲ್ ಹಸಬ್ನಿಸ್, ಸೈಮಾ ಠಾಕೋರ್, ಪ್ರಿಯಾ ಮಿಶ್ರಾ, ರಾಧಾ ಯಾದವ್ ಮತ್ತು ಶ್ರೇಯಾಂಕಾ ಪಾಟೀಲ್.

ನ್ಯೂಜಿಲೆಂಡ್ ಮಹಿಳಾ ತಂಡ: ಸೋಫಿ ಡಿವೈನ್ (ನಾಯಕಿ), ಸುಜಿ ಬೇಟ್ಸ್, ಈಡನ್ ಕಾರ್ಸನ್, ಲಾರೆನ್ ಡೌನ್, ಇಜ್ಜಿ ಗೇಜ್, ಮ್ಯಾಡಿ ಗ್ರೀನ್, ಬ್ರೂಕ್ ಹ್ಯಾಲಿಡೇ, ಪೊಲ್ಲಿ ಇಂಗ್ಲಿಸ್, ಫ್ರಾನ್ ಜೋನಾಸ್, ಜೆಸ್ ಕೆರ್, ಅಮೆಲಿಯಾ ಕೆರ್, ಮೊಲ್ಲಿ ಪೆನ್‌ಫೋಲ್ಡ್, ಜಾರ್ಜಿಯಾ ಪ್ಲಿಮ್ಮರ್, ಹನ್ನಾ ರೋವ್ ಮತ್ತು ಲಿಯಾ ತಾಹು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 pm, Mon, 28 October 24