IND vs NZ: ವಿಶ್ವ ಚಾಂಪಿಯನ್ ಕಿವೀಸ್​ಗೆ ತಿರುಗೇಟು ನೀಡಿ ಏಕದಿನ ಸರಣಿ ಗೆದ್ದ ಭಾರತ

New Zealand Women vs India Women: ಭಾರತ ಪುರುಷರ ಕ್ರಿಕೆಟ್ ತಂಡ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಸೋತರೂ, ಮಹಿಳಾ ತಂಡ ಏಕದಿನ ಸರಣಿಯಲ್ಲಿ ಅದ್ಭುತ ಗೆಲುವು ಸಾಧಿಸಿದೆ. ಸ್ಮೃತಿ ಮಂಧಾನ ಅವರ ಶತಕ ಮತ್ತು ಹರ್ಮನ್‌ಪ್ರೀತ್ ಕೌರ್ ಅವರ ಅರ್ಧಶತಕದ ನೆರವಿನಿಂದ ಭಾರತ ತಂಡ 2-1 ಅಂತರದಲ್ಲಿ ಸರಣಿ ಗೆದ್ದಿದೆ. ನ್ಯೂಜಿಲೆಂಡ್ ನೀಡಿದ 232 ರನ್ ಗುರಿಯನ್ನು ಭಾರತ ಸುಲಭವಾಗಿ ಬೆನ್ನಟ್ಟಿತು.

IND vs NZ: ವಿಶ್ವ ಚಾಂಪಿಯನ್ ಕಿವೀಸ್​ಗೆ ತಿರುಗೇಟು ನೀಡಿ ಏಕದಿನ ಸರಣಿ ಗೆದ್ದ ಭಾರತ
ಭಾರತ- ನ್ಯೂಜಿಲೆಂಡ್
Follow us
ಪೃಥ್ವಿಶಂಕರ
|

Updated on:Oct 29, 2024 | 9:04 PM

ಭಾರತ ಪುರುಷರ ತಂಡ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು ಕಳೆದುಕೊಂಡಿರಬಹುದು. ಆದರೆ ಭಾರತ ಮಹಿಳಾ ತಂಡ ಇದಕ್ಕೆ ಅವಕಾಶ ನೀಡಲಿಲ್ಲ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್​ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದೆ. ಇದರೊಂದಿಗೆ ಭಾರತ ತಂಡ 3 ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿದೆ. ತಂಡದ ಉಪನಾಯಕಿ ಮತ್ತು ಅನುಭವಿ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅವರ ಶತಕದ ಜೊತೆಯಾಟ ತಂಡವನ್ನು ಗೆಲುವಿನ ದಡ ಮುಟ್ಟಿಸಿತು. ಇದರಲ್ಲಿ ಸ್ಮೃತಿ ಮಂಧಾನ ತಮ್ಮ ಏಕದಿನ ವೃತ್ತಿಜೀವನದ ದಾಖಲೆಯ 8 ನೇ ಶತಕ ಸಿಡಿಸಿದರೆ, ಅದೇ ಸಮಯದಲ್ಲಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೂಡ ಅತ್ಯುತ್ತಮ ಅರ್ಧಶತಕ ಬಾರಿಸುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

ಕೈಕೊಟ್ಟ ಸೋಫಿ ಡಿವೈನ್

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಸರಣಿಯ ಕೊನೆಯ ಪಂದ್ಯದಲ್ಲಿ ನ್ಯೂಜಿಲೆಂಡ್ ಮೊದಲು ಬ್ಯಾಟ್ ಮಾಡಿ 49.5 ಓವರ್‌ಗಳಲ್ಲಿ ಕೇವಲ 232 ರನ್ ಗಳಿಸಲಷ್ಟೇ ಶಕ್ತವಾಯಿತು. ಕಿವೀಸ್​ಗೆ ಆರಂಭಿಕ ಆಘಾತ ಎದುರಾಗಿದ್ದೆ ಈ ಅಲ್ಪ ರನ್ ಕಲೆಹಾಕಲು ಕಾರಣವಾಯಿತು. ಒಂದು ಹಂತದಲ್ಲಿ ಕಿವೀಸ್ ತಂಡ 88 ರನ್‌ಗಳಿಗೆ ಪ್ರಮುಖ 5 ವಿಕೆಟ್‌ ಕಳೆದುಕೊಂಡಿದ್ದು, ಆರಂಭಿಕ ಹಿನ್ನಡೆಯನ್ನುಂಟು ಮಾಡಿತು. ಪ್ರಮುಖ ಬ್ಯಾಟರ್​ಗಳಾ್ ಸುಜಿ ಬೇಟ್ಸ್ ಮತ್ತು ನಾಯಕಿ ಸೋಫಿ ಡಿವೈನ್ ಬೇಗನೆ ಔಟಾದರೆ, ಜಾರ್ಜಿಯಾ ಪ್ಲಿಮ್ಮರ್ (39) ಅವರ ಇನ್ನಿಂಗ್ಸ್ ಕೂಡ ತುಂಬಾ ದೊಡ್ಡದಾಗಿರಲಿಲ್ಲ.

ಬೌಲಿಂಗ್​ನಲ್ಲಿ ದೀಪ್ತಿ, ಪ್ರಿಯಾ ಕಮಾಲ್

ಇಂತಹ ಪರಿಸ್ಥಿತಿಯಲ್ಲಿ ಬ್ರೂಕ್ ಹ್ಯಾಲಿಡೇ ಜವಾಬ್ದಾರಿ ವಹಿಸಿ ಭಾರತದ ಬೌಲರ್​ಗಳನ್ನು ದಿಟ್ಟತನದಿಂದ ಎದುರಿಸಿದರು. ಆದಾಗ್ಯೂ ತಮ್ಮ ಶತಕದಿಂದ ವಂಚಿತರಾದ ಹ್ಯಾಲಿಡೆ 86 ರನ್ (96 ಎಸೆತ, 9 ಬೌಂಡರಿ, 3 ಸಿಕ್ಸರ್) ಗಳಿಸಿ ಔಟಾದರು. ನಂತರ ಅಲ್ಪ ಕಾಣಿಕೆ ನೀಡುವಲ್ಲಿ ಯಶಸ್ವಿಯಾದ ತಂಡದ ಕೆಳ ಕ್ರಮಾಂಕ ತಂಡವನ್ನು 232 ರನ್​ಗಳಿಗೆ ಕೊಂಡೊಯ್ಯುವಲ್ಲಿ ಯಶಸ್ವಿಯಾಯಿತು. ಕಳೆದ ಪಂದ್ಯದಲ್ಲಿ ತನ್ನ ಕಳಪೆ ಫೀಲ್ಡಿಂಗ್‌ನಿಂದ ನ್ಯೂಜಿಲೆಂಡ್‌ನ ಗೆಲುವಿನ ಹಾದಿಯನ್ನು ಸುಲಭಗೊಳಿಸಿದ್ದ ಭಾರತ ತಂಡವು ಈ ಪಂದ್ಯದಲ್ಲಿ ತನ್ನ ತಪ್ಪನ್ನು ತಿದ್ದಿಕೊಂಡಿದಲ್ಲದೆ ಪ್ರತಿಯೊಂದು ಕ್ಯಾಚ್‌ಗಳನ್ನು ಹಿಡಿಯುವಲ್ಲಿ ಯಶಸ್ವಿಯಾಯಿತು. ಜೊತೆಗೆ 2 ರನ್ ಔಟ್‌ ಮಾಡಿದ್ದು ಸಹ ವಿಶೇಷವಾಗಿತ್ತು. ತಂಡದ ಪರ ದೀಪ್ತಿ ಶರ್ಮಾ 3 ವಿಕೆಟ್ ಹಾಗೂ ಯುವ ಸ್ಪಿನ್ನರ್ ಪ್ರಿಯಾ ಮಿಶ್ರಾ 2 ವಿಕೆಟ್ ಪಡೆದರು.

ಭಾರತಕ್ಕೆ ಮತ್ತೆ ಕಳಪೆ ಆರಂಭ

ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಮತ್ತೊಮ್ಮೆ ಕೆಟ್ಟ ಆರಂಭವನ್ನು ಪಡೆದಿಕೊಂಡತು. ಶೆಫಾಲಿ ವರ್ಮಾ ನಾಲ್ಕನೇ ಓವರ್‌ನಲ್ಲಿಯೇ ಔಟಾದರು. ಟಿ20 ವಿಶ್ವಕಪ್ ಹಾಗೂ ಕೊನೆಯ ಎರಡು ಏಕದಿನ ಪಂದ್ಯಗಳಲ್ಲಿ ವೈಫಲ್ಯ ಕಂಡಿದ್ದ ಸ್ಮೃತಿ ಈ ಬಾರಿ ಎಚ್ಚರಿಕೆಯ ಆಟವಾಡಿ ಕ್ರೀಸ್​ನಲ್ಲಿ ಗಟ್ಟಿಯಾಗಿ ನೆಲೆಯೂರಿದರು ಅವರಿಗೆ ಯಾಸ್ತಿಕಾ ಭಾಟಿಯಾ ಅವರಿಂದ ಉತ್ತಮ ಬೆಂಬಲ ಸಿಕ್ಕಿತು. ಈ ಇಬ್ಬರೂ ಎರಡನೇ ವಿಕೆಟ್‌ಗೆ 76 ರನ್‌ಗಳ ಬಲವಾದ ಜೊತೆಯಾಟವನ್ನು ಮಾಡುವ ಮೂಲಕ ಪರಿಸ್ಥಿತಿಯನ್ನು ನಿಭಾಯಿಸಿದರು. ಈ ಜೊತೆಯಾಟದಲ್ಲಿ ಸ್ಮೃತಿ ಅರ್ಧಶತಕವನ್ನೂ ಪೂರೈಸಿದರು.

ಗೆಲುವಿನ ಶತಕ ಸಿಡಿಸಿದ ಸ್ಮೃತಿ

ಇದಾದ ಬಳಿಕ ಕ್ರೀಸ್‌ಗೆ ಬಂದ ನಾಯಕಿ ಹರ್ಮನ್‌ಪ್ರೀತ್ ಕೌರ್, ಉಪನಾಯಕಿ ಮಂಧಾನ ಜತೆಗೂಡಿ ತಂಡದ ಗೆಲುವನ್ನು ಖಚಿತಪಡಿಸಿದರು. ಇವರಿಬ್ಬರ ನಡುವೆ ಮೂರನೇ ವಿಕೆಟ್‌ಗೆ 117 ರನ್‌ಗಳ ಜೊತೆಯಾಟವಿತ್ತು. ಈ ಸಮಯದಲ್ಲಿ, ಹರ್ಮನ್‌ಪ್ರೀತ್ ಬೇಗನೆ ಅರ್ಧಶತಕ ಗಳಿಸಿದರೆ, ಸ್ವಲ್ಪ ಸಮಯದ ನಂತರ, ಸ್ಮೃತಿ ಕೂಡ ದಾಖಲೆಯ ಶತಕವನ್ನು ಪೂರ್ಣಗೊಳಿಸಿದರು. ಇದು ಸ್ಮೃತಿ ಅವರ ಏಕದಿನ ವೃತ್ತಿಜೀವನದ 8 ನೇ ಶತಕವಾಗಿದ್ದು, ಇದರೊಂದಿಗೆ ಅವರು ಭಾರತದ ಪರ ಹೆಚ್ಚು ಶತಕಗಳನ್ನು ಬಾರಿಸಿದ್ದ ಮಾಜಿ ನಾಯಕಿ ಮಿಥಾಲಿ ರಾಜ್ ಅವರ ದಾಖಲೆಯನ್ನು ಮುರಿದರು. ಸ್ಮೃತಿ ಶತಕ ಗಳಿಸಿ ಔಟಾದರೂ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ಅಂತಿಮವಾಗಿ ಭಾರತ 44.2 ಓವರ್‌ಗಳಲ್ಲಿ ಗೆಲುವಿನ ದಡ ಮುಟ್ಟಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:02 pm, Tue, 29 October 24

ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ