AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2025: ಸತತ 8ನೇ ಪಂದ್ಯದಲ್ಲಿ ಟಾಸ್ ಸೋತ ಹರ್ಮನ್‌ಪ್ರೀತ್ ಕೌರ್; ತಂಡದಲ್ಲಿ 1 ಬದಲಾವಣೆ

Women's World Cup 2025 India vs New Zealand: ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತ vs ನ್ಯೂಜಿಲೆಂಡ್ ನಿರ್ಣಾಯಕ ಪಂದ್ಯ ಸೆಮಿಫೈನಲ್ ಭವಿಷ್ಯ ನಿರ್ಧರಿಸಲಿದೆ. ಭಾರತ ಗೆದ್ದರೆ ಸೆಮಿಫೈನಲ್ ಹಾದಿ ಸುಗಮ, ಸೋತರೆ ಬಾಂಗ್ಲಾದೇಶ ವಿರುದ್ಧ ಗೆಲ್ಲಬೇಕು. ಟಾಸ್ ಕಳೆದುಕೊಂಡ ಭಾರತ ಬ್ಯಾಟಿಂಗ್ ಮಾಡುತ್ತಿದ್ದು, ಜೆಮಿಮಾ ತಂಡಕ್ಕೆ ಮರಳಿದ್ದಾರೆ. ಸತತ ಟಾಸ್ ಸೋತರೂ ಭಾರತ ಈ ಪ್ರಮುಖ ಪಂದ್ಯ ಗೆಲ್ಲಲು ಶ್ರಮಿಸಲಿದೆ.

World Cup 2025: ಸತತ 8ನೇ ಪಂದ್ಯದಲ್ಲಿ ಟಾಸ್ ಸೋತ ಹರ್ಮನ್‌ಪ್ರೀತ್ ಕೌರ್; ತಂಡದಲ್ಲಿ 1 ಬದಲಾವಣೆ
Ind W Vs Nz W
ಪೃಥ್ವಿಶಂಕರ
|

Updated on:Oct 23, 2025 | 2:59 PM

Share

ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಿರ್ಣಾಯಕ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ಈ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ಎರಡಕ್ಕೂ ನಿರ್ಣಾಯಕವಾಗಿದೆ. ಭಾರತಕ್ಕೆ ಒಳ್ಳೆಯ ಸುದ್ದಿ ಏನೆಂದರೆ, ಈ ಪಂದ್ಯದಲ್ಲಿ ಹರ್ಮನ್​ ಪಡೆ (Harmanpreet Kaur) ಗೆಲುವು ಸಾಧಿಸಿದರೆ, ಸೆಮಿಫೈನಲ್ ತಲುಪುವ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ. ಇತ್ತ ನ್ಯೂಜಿಲೆಂಡ್ ಗೆದ್ದರೆ, ಭಾರತ ತಂಡ ಬಾಂಗ್ಲಾದೇಶ ವಿರುದ್ಧದ ತನ್ನ ಕೊನೆಯ ಲೀಗ್ ಪಂದ್ಯವನ್ನು ಗೆಲ್ಲಬೇಕಾಗುತ್ತದೆ. ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ಯಾವಾಗಲೂ ಭಾರತದ ಮೇಲೆ ಮೇಲುಗೈ ಸಾಧಿಸಿದೆ. ಆದ್ದರಿಂದ, ನವಿ ಮುಂಬೈನಲ್ಲಿ ಗೆಲುವು ಸಾಧಿಸಲು ಭಾರತ ತಂಡ ತುಂಬಾ ಶ್ರಮಿಸಬೇಕಾಗುತ್ತದೆ.

ಸತತ 8ನೇ ಪಂದ್ಯದಲ್ಲಿ ಟಾಸ್ ಸೋಲು

ಈ ನಿರ್ಣಾಯಕ ಪಂದ್ಯದಲ್ಲಿ ಮತ್ತೊಮ್ಮೆ ಟಾಸ್ ಸೋತಿರುವ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಬೇಕಾಗಿದೆ. ವಾಸ್ತವವಾಗಿ ಟೀಂ ಇಂಡಿಯಾ ಸತತ 8ನೇ ಪಂದ್ಯದಲ್ಲಿ ಟಾಸ್ ಸೋತಿದೆ. ನಡೆಯುತ್ತಿರುವ ವಿಶ್ವಕಪ್​ನ ಸತತ 6 ಪಂದ್ಯಗಳಲ್ಲಿ ಟಾಸ್ ಸೋತಿರುವ ಭಾರತ, ಈ 6 ಪಂದ್ಯಗಳಲ್ಲಿ 2 ರಲ್ಲಿ ಗೆದ್ದು, ಉಳಿದು ಮೂರು ಪಂದ್ಯಗಳಲ್ಲಿ ಸೋಲನುಭವಿಸಿದೆ.

ಇನ್ನು ಇಂದು ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತಿರುವ ಟೀಂ ಇಂಡಿಯಾ ಗೆಲುವು ಸಾಧಿಸುತ್ತಾ ಎಂಬುದನ್ನು ಕಾದುನೋಡಬೇಕಿದೆ. ಈ ಪಂದ್ಯಕ್ಕಾಗಿ ಭಾರತೀಯ ಮಹಿಳಾ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಒಂದು ಬದಲಾವಣೆಯನ್ನು ಮಾಡಿದ್ದು, ಅಮನ್‌ಜೋತ್ ಕೌರ್ ಬದಲಿಗೆ ಜೆಮಿಮಾ ರೊಡ್ರಿಗಸ್ ತಂಡಕ್ಕೆ ಮರಳಿದ್ದಾರೆ.

ಉಭಯ ತಂಡಗಳು

ಭಾರತ ತಂಡ: ಪ್ರತಿಕಾ ರಾವಲ್, ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರೊಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ್ ರಾಣಾ, ಕ್ರಾಂತಿ ಗೌಡ್, ಶ್ರೀ ಚರಣಿ, ರೇಣುಕಾ ಸಿಂಗ್ ಠಾಕೂರ್.

ನ್ಯೂಜಿಲೆಂಡ್ ತಂಡ: ಸುಜಿ ಬೇಟ್ಸ್, ಜಾರ್ಜಿಯಾ ಪ್ಲೈಮರ್, ಅಮೆಲಿಯಾ ಕೆರ್, ಸೋಫಿ ಡಿವೈನ್ (ನಾಯಕಿ), ಬ್ರೂಕ್ ಹ್ಯಾಲಿಡೇ, ಮ್ಯಾಡಿ ಗ್ರೀನ್, ಇಸಾಬೆಲ್ಲಾ ಗೇಜ್ (ವಿಕೆಟ್ ಕೀಪರ್), ಜೆಸ್ ಕೆರ್, ರೋಸ್ಮರಿ ಮೈರ್, ಲಿಯಾ ತಹುಹು, ಈಡನ್ ಕಾರ್ಸನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Thu, 23 October 25

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು