IND vs NZ: ಭಾರತ vs ನ್ಯೂಝಿಲೆಂಡ್: ಮುಂಬೈ ಪಿಚ್​ ಯಾರಿಗೆ ಸಹಕಾರಿ? ಇಲ್ಲಿದೆ ವರದಿ

| Updated By: ಝಾಹಿರ್ ಯೂಸುಫ್

Updated on: Nov 14, 2023 | 2:56 PM

India vs New Zealand: ಭಾರತ vs ನ್ಯೂಝಿಲೆಂಡ್ ಏಕದಿನ ಕ್ರಿಕೆಟ್​ನಲ್ಲಿ ಇದುವರೆಗೆ 117 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ 59 ಬಾರಿ ವಿಜಯಶಾಲಿಯಾಗಿದೆ. ಮತ್ತೊಂದೆಡೆ ಕಿವೀಸ್ 50 ಏಕದಿನ ಪಂದ್ಯಗಳಲ್ಲಿ ಭಾರತವನ್ನು ಸೋಲಿಸಿದೆ. ಇನ್ನು ಲೀಗ್​ ಹಂತದ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಟೀಮ್ ಇಂಡಿಯಾ 4 ವಿಕೆಟ್​ಗಳಿಂದ ಜಯ ಸಾಧಿಸಿತ್ತು.

IND vs NZ: ಭಾರತ vs ನ್ಯೂಝಿಲೆಂಡ್: ಮುಂಬೈ ಪಿಚ್​ ಯಾರಿಗೆ ಸಹಕಾರಿ? ಇಲ್ಲಿದೆ ವರದಿ
India vs New Zealand
Follow us on

ಏಕದಿನ ವಿಶ್ವಕಪ್​ 2023ರ ನಾಕೌಟ್ ಪಂದ್ಯಗಳಿಗಾಗಿ ಕ್ಷಣಗಣನೆ ಶುರುವಾಗಿದೆ. ನಾಳೆ (ನ.15) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ವಿಶೇಷ ಎಂದರೆ 2019ರ ವಿಶ್ವಕಪ್​ನ ಸೆಮಿಫೈನಲ್​ನಲ್ಲೂ ಉಭಯ ತಂಡಗಳು ಸೆಣಸಿದ್ದವು. ಅಂದು ಭಾರತ ತಂಡವನ್ನು ಸೋಲಿಸಿ ನ್ಯೂಝಿಲೆಂಡ್ ಫೈನಲ್​ಗೇರಿತ್ತು. ಇದೀಗ ನಾಲ್ಕು ವರ್ಷಗಳ ಬಳಿಕ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಹೀಗಾಗಿ ವಾಂಖೆಡೆ ಸ್ಟೇಡಿಯಂನಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಈ ಹೈವೋಲ್ಟೇಜ್ ಪಂದ್ಯದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಮೊದಲ ಸೆಮಿಫೈನಲ್ ಪಂದ್ಯ ಯಾವಾಗ?

ಭಾರತ vs ನ್ಯೂಝಿಲೆಂಡ್ ನಡುವಣ ಮೊದಲ ಸೆಮಿಫೈನಲ್ ಪಂದ್ಯವು ನವೆಂಬರ್ 15 ರ ಬುಧವಾರದಂದು ನಡೆಯಲಿದೆ.

ಭಾರತ-ನ್ಯೂಝಿಲೆಂಡ್ ಪಂದ್ಯ ಎಷ್ಟು ಗಂಟೆಗೆ ಶುರುವಾಗಲಿದೆ?

ಮೊದಲ ಸೆಮಿಫೈನಲ್ ಪಂದ್ಯವು ಮಧ್ಯಾಹ್ನ 2:00 ಗಂಟೆಗೆ ಪ್ರಾರಂಭವಾಗುತ್ತದೆ.

ಪಂದ್ಯ ನಡೆಯುವ ಸ್ಥಳ?

ಭಾರತ vs ನ್ಯೂಝಿಲೆಂಡ್ ನಡುವಣ ಈ ಕದನವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

ಹೇಗಿದೆ ಮುಂಬೈ ಹವಾಮಾನ?

ಅಕ್ಯುವೆದರ್ ಪ್ರಕಾರ , ಬುಧವಾರ ಮುಂಬೈನಲ್ಲಿ ಬಿಸಿಲಿನ ವಾತಾವರಣ ಇರಲಿದೆ. ಅಲ್ಲದೆ ಈ ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ ಕೇವಲ 1% ಮಾತ್ರ. ಹೀಗಾಗಿ ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ವಿಶ್ವಕಪ್ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡುವ ಸಾಧ್ಯತೆಯಿಲ್ಲ. ಇನ್ನು 36 ಡಿಗ್ರಿ ಸೆಲ್ಸಿಯಸ್ ಮತ್ತು 25 ಡಿಗ್ರಿ ಸೆಲ್ಸಿಯಸ್ ನಡುವೆ ತಾಪಮಾನದಲ್ಲಿ ಏರಿಳಿತವನ್ನು ನಿರೀಕ್ಷಿಸಲಾಗಿದೆ.

ವಾಂಖೆಡೆ ಸ್ಟೇಡಿಯಂ ಪಿಚ್ ಯಾರಿಗೆ ಸಹಕಾರಿ?

ಮುಂಬೈನ ವಾಂಖೆಡೆ ಸ್ಟೇಡಿಯಂನ ಪಿಚ್ ದೇಶದ ಅತ್ಯಂತ ಸಮತೋಲಿತ ಪಿಚ್‌ಗಳಲ್ಲಿ ಒಂದಾಗಿದೆ. ಈ ಪಿಚ್​ ಬ್ಯಾಟರ್​ಗಳಿಗೆ ಸಹಕಾರಿ. ಹೀಗಾಗಿ ಟಾಸ್ ಗೆದ್ದ ತಂಡ ಬ್ಯಾಟಿಂಗ್ ಆಯ್ದುಕೊಂಡು ಬೃಹತ್ ಮೊತ್ತ ಪೇರಿಸುವ ಸಾಧ್ಯತೆಯಿದೆ. ಹಾಗೆಯೇ ಈ ಮೈದಾನದಲ್ಲಿ ಚೇಸಿಂಗ್ ಕೂಡ ಕಷ್ಟಕರವಲ್ಲ. ದ್ವಿತೀಯ ಇನಿಂಗ್ಸ್​ ವೇಳೆ ಇಬ್ಬನಿ ಕಂಡು ಬಂದರೆ ಅನಾಯಾಸವಾಗಿ ಚೇಸಿಂಗ್ ಮಾಡಬಹುದು. ಹೀಗಾಗಿಯೇ ಇದನ್ನು ಪರಿಗಣಿಸಿ ಟಾಸ್ ಗೆದ್ದ ಮೊದಲು ಬೌಲಿಂಗ್ ಮಾಡಿದರೂ ಅಚ್ಚರಿಪಡಬೇಕಿಲ್ಲ.

ಯಾರು ಬಲಿಷ್ಠ?

ಭಾರತ vs ನ್ಯೂಝಿಲೆಂಡ್ ಏಕದಿನ ಕ್ರಿಕೆಟ್​ನಲ್ಲಿ ಇದುವರೆಗೆ 117 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ 59 ಬಾರಿ ವಿಜಯಶಾಲಿಯಾಗಿದೆ. ಮತ್ತೊಂದೆಡೆ ಕಿವೀಸ್ 50 ಏಕದಿನ ಪಂದ್ಯಗಳಲ್ಲಿ ಭಾರತವನ್ನು ಸೋಲಿಸಿದೆ. ಇನ್ನು ಲೀಗ್​ ಹಂತದ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಟೀಮ್ ಇಂಡಿಯಾ 4 ವಿಕೆಟ್​ಗಳಿಂದ ಜಯ ಸಾಧಿಸಿತ್ತು.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಸೆಮಿಫೈನಲ್ ಸ್ಟಾರ್ ಸ್ಪೋರ್ಟ್ಸ್​ ನೆಟ್​ವರ್ಕ್​ನಲ್ಲಿ ನೇರ ಪ್ರಸಾರವಾಗಲಿದೆ. ಹಾಗೆಯೇ ಈ ಪಂದ್ಯವು ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ಉಚಿತ ಲೈವ್ ಸ್ಟ್ರೀಮ್ ಇರಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: ದಾಖಲೆಗಳ ಸರದಾರ ಕಿಂಗ್ ಕೊಹ್ಲಿ ಮುಂದಿದೆ ಮೂರು ವಿಶ್ವ ದಾಖಲೆಗಳು

ನ್ಯೂಝಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.

 

Published On - 2:55 pm, Tue, 14 November 23