AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಣಿ ಗೆಲ್ಲಲು ಭಾರತ ಮಾಸ್ಟರ್ ಪ್ಲ್ಯಾನ್: ಮೂರನೇ ಪಂದ್ಯಕ್ಕೆ ಬದಲಾಗುತ್ತಾ ಪ್ಲೇಯಿಂಗ್ 11?

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ T20 ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿದ್ದು, 3ನೇ ಪಂದ್ಯದಲ್ಲಿ ಸರಣಿ ಗೆಲ್ಲಲು ಸಜ್ಜಾಗಿದೆ. ಇಶಾನ್ ಕಿಶನ್ ಗಾಯದಿಂದ ಹೊರಗುಳಿದಿದ್ದು, ವೈಭವ್ ಸೂರ್ಯವಂಶಿ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ. ಶಿವಂ ದುಬೆ ಆಡುವ ಹನ್ನೊಂದರ ಬಳಗಕ್ಕೆ ಸೇರಿಕೊಳ್ಳುವ ನಿರೀಕ್ಷೆಯಿದೆ. ಬೌಲಿಂಗ್ ವಿಭಾಗದಲ್ಲಿ ಹೆಚ್ಚು ಬದಲಾವಣೆಗಳಿಲ್ಲ, ಆದರೆ ಬ್ಯಾಟಿಂಗ್ ವಿಭಾಗದಲ್ಲಿ ಕೆಲ ಹೊಸ ಮುಖಗಳು ಕಾಣಿಸಬಹುದು.

ಸರಣಿ ಗೆಲ್ಲಲು ಭಾರತ ಮಾಸ್ಟರ್ ಪ್ಲ್ಯಾನ್: ಮೂರನೇ ಪಂದ್ಯಕ್ಕೆ ಬದಲಾಗುತ್ತಾ ಪ್ಲೇಯಿಂಗ್ 11?
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Oct 26, 2026 | 10:35 PM

Share

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ 2-0 ಮುನ್ನಡೆ ಸಾಧಿಸಿದೆ. ಇದೀಗ ಮೂರನೇ ಪಂದ್ಯ ಮಂಗಳವಾರ ವೆಲ್ಲಿಂಗ್ಟನ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲೂ ಗೆಲುವು ಸಾಧಿಸಿದರೆ ಭಾರತ ಸರಣಿಯಲ್ಲಿ 3-0 ಮುನ್ನಡೆ ಪಡೆದು ಸರಣಿ ಗೆಲುವನ್ನು ಖಚಿತಪಡಿಸಿಕೊಳ್ಳಲಿದೆ. ಹೀಗಾಗಿ, ಈ ಪಂದ್ಯವನ್ನು ಗೆಲ್ಲಲು ಟೀಂ ಇಂಡಿಯಾ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದೇ ವೇಳೆ ಮೂರನೇ ಟಿ20 ಪಂದ್ಯಕ್ಕೆ ಭಾರತದ ಆಡುವ ಹನ್ನೊಂದರ ಬಳಗದಲ್ಲಿ ಕೆಲವು ಬದಲಾವಣೆಗಳಾಗುವ ಸಾಧ್ಯತೆಯಿದೆ. ತಂಡದ ಪ್ರಮುಖ ಬ್ಯಾಟರ್‌ಗಳಲ್ಲಿ ಒಬ್ಬರಾದ ಇಶಾನ್ ಕಿಶನ್ ಇನ್ನೂ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಮೂರನೇ ಪಂದ್ಯದಿಂದಲೂ ಹೊರಗುಳಿದಿದ್ದಾರೆ.

ವೈಭವ್ ಸೂರ್ಯವಂಶಿಗೆ ಕೊಕ್?

ಎರಡನೇ ಟಿ20 ಪಂದ್ಯದಲ್ಲಿ ವೈಭವ್ ಸೂರ್ಯವಂಶಿಗೆ ತಂಡದಲ್ಲಿ ಅವಕಾಶ ನೀಡಲಾಗಿತ್ತು. ಆದರೆ, ಆರಂಭಿಕನಾಗಿ ಕಣಕ್ಕಿಳಿಯುವ ಬದಲು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದ ಅವರು ಕೇವಲ ನಾಲ್ಕು ರನ್ ಗಳಿಸಿ ನಿರಾಸೆ ಮೂಡಿಸಿದ್ದರು. ಹೀಗಾಗಿ, ಮೂರನೇ ಪಂದ್ಯದಲ್ಲಿ ವೈಭವ್ ಅವರನ್ನು ಕೈಬಿಡುವ ಸಾಧ್ಯತೆಯೂ ಇದೆ. ವೈಭವ್‌ಗೆ ಆರಂಭಿಕನಾಗಿ ಆಡುವುದು ಹೆಚ್ಚು ಸೂಕ್ತವಾಗಿದ್ದು, ಮಧ್ಯಮ ಕ್ರಮಾಂಕದಲ್ಲಿ ಆಡುವುದು ಅವರಿಗೆ ಸವಾಲಾಗಬಹುದು. ಈ ಕಾರಣದಿಂದ ಟೀಂ ಮ್ಯಾನೇಜ್‌ಮೆಂಟ್ ಬದಲಾವಣೆಗೆ ಮುಂದಾಗಬಹುದು ಎನ್ನಲಾಗಿದೆ.

ಇಶಾನ್ ಕಿಶನ್ ಅನುಪಸ್ಥಿತಿಯಲ್ಲಿ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಮರ್ಥ್ಯವಿರುವ ಆಟಗಾರನ ಅಗತ್ಯವೂ ತಂಡಕ್ಕಿದೆ. ಹೀಗಾಗಿ, ಆಲ್‌ರೌಂಡರ್ ಶಿವಂ ದುಬೆ ಅವರಿಗೆ ಅವಕಾಶ ನೀಡುವ ಸಾಧ್ಯತೆಯಿದೆ. ಕಳೆದ ಎರಡು ಪಂದ್ಯಗಳಲ್ಲಿ ಭಾರತ ತಂಡಕ್ಕೆ ಕೊನೆಯ ಓವರ್‌ಗಳಲ್ಲಿ ವೇಗವಾಗಿ ರನ್ ಗಳಿಸುವ ಫಿನಿಷರ್‌ನ ಅಗತ್ಯವಿತ್ತು. ಈ ಜವಾಬ್ದಾರಿಯನ್ನು ಶಿವಂ ದುಬೆ ಸಮರ್ಥವಾಗಿ ನಿಭಾಯಿಸಬಲ್ಲರು. ಅವರ ಉಪಸ್ಥಿತಿಯಿಂದ ಅಂತಿಮ ಓವರ್‌ಗಳಲ್ಲಿ ದೊಡ್ಡ ಹೊಡೆತಗಳನ್ನು ಬಾರಿಸುವ ಸಾಮರ್ಥ್ಯ ತಂಡಕ್ಕೆ ಹೆಚ್ಚಲಿದೆ.

ಇನ್ನು ನಮನ್ ಧೀರ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಕಳೆದ ಪಂದ್ಯಗಳಲ್ಲಿ ನಿರ್ಣಾಯಕ ಇನ್ನಿಂಗ್ಸ್‌ಗಳನ್ನು ಆಡುವ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಹೀಗಾಗಿ, ಇವರಿಬ್ಬರು ತಂಡದಲ್ಲಿ ತಮ್ಮ ಸ್ಥಾನ ಉಳಿಸಿಕೊಳ್ಳುವ ನಿರೀಕ್ಷೆಯಿದೆ.

ಭಾರತ vs ನ್ಯೂಜಿಲೆಂಡ್ 3ನೇ ಟಿ20: ಪಂದ್ಯ ಎಷ್ಟು ಗಂಟೆಗೆ? ಲೈವ್ ಎಲ್ಲಿ ನೋಡಬಹುದು?

ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಆಗುತ್ತಾ?

ಭಾರತದ ಬೌಲಿಂಗ್ ವಿಭಾಗದಲ್ಲಿ ಹೆಚ್ಚಿನ ಬದಲಾವಣೆಗಳಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಕಳೆದ ಪಂದ್ಯದಲ್ಲಿ ಮಾಯಾಂಕ್ ಯಾದವ್ ಬದಲಿಗೆ ತಂಡದಲ್ಲಿ ಅವಕಾಶ ಪಡೆದಿದ್ದ ಪ್ರಿನ್ಸ್ ಯಾದವ್ ತಮ್ಮ ಸ್ಥಾನ ಉಳಿಸಿಕೊಳ್ಳುವ ನಿರೀಕ್ಷೆಯಿದೆ. ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಅವರ ಬೌಲಿಂಗ್ ತಂಡಕ್ಕೆ ನೆರವಾಗಲಿದೆ. ಅರ್ಷದೀಪ್ ಸಿಂಗ್ ಕೂಡ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. ಸ್ಪಿನ್ ವಿಭಾಗದಲ್ಲಿ ಅಕ್ಷರ್ ಪಟೇಲ್ ಅವರ ಸ್ಥಾನ ಬಹುತೇಕ ಖಚಿತವಾಗಿದೆ. ಹೀಗಾಗಿ, ಬ್ಯಾಟಿಂಗ್ ವಿಭಾಗದಲ್ಲೇ ಹೆಚ್ಚಿನ ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ.

ಭಾರತದ ಸಂಭಾವ್ಯ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಶ್ರೇಯಸ್ ಅಯ್ಯರ್ (ನಾಯಕ), ಅಕ್ಷರ್ ಪಟೇಲ್, ನಮನ್ ಧೀರ್, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ 215 ಕೋಟಿ ರೂ: ಸಿಎಂ ಘೋಷಣೆ
ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ 215 ಕೋಟಿ ರೂ: ಸಿಎಂ ಘೋಷಣೆ
ದೆಹಲಿಯ ಯಮುನಾ ನದಿಯಲ್ಲಿ ತೇಲಿದ ವಿಷಕಾರಿ ನೊರೆ
ದೆಹಲಿಯ ಯಮುನಾ ನದಿಯಲ್ಲಿ ತೇಲಿದ ವಿಷಕಾರಿ ನೊರೆ
‘ಬರೀ ಟಾಸ್ಕ್ ಆಡಿದರೆ ಸಾಲದು’: ಧನುಷ್ ಆಟದ ಬಗ್ಗೆ ಲಕ್ಷ್ಮಿ ನೇರ ಮಾತು
‘ಬರೀ ಟಾಸ್ಕ್ ಆಡಿದರೆ ಸಾಲದು’: ಧನುಷ್ ಆಟದ ಬಗ್ಗೆ ಲಕ್ಷ್ಮಿ ನೇರ ಮಾತು
ಹಾಸನದಲ್ಲೊಂದು ಅಪರೂಪದ ಘಟನೆ: ಎರಡು ಕಾಡಾನೆಗಳ ಜಗಳ ಬಿಡಿಸಿದ ಶ್ವಾನ
ಹಾಸನದಲ್ಲೊಂದು ಅಪರೂಪದ ಘಟನೆ: ಎರಡು ಕಾಡಾನೆಗಳ ಜಗಳ ಬಿಡಿಸಿದ ಶ್ವಾನ
ಧನ್ವೀರ್ ಗೌಡ ಮನೆಗೆ ಮುತ್ತಿಗೆ ಹಾಕುತ್ತೇವೆ’: ಝೈದ್ ಖಾನ್ ಫ್ಯಾನ್ಸ್ ಗರಂ
ಧನ್ವೀರ್ ಗೌಡ ಮನೆಗೆ ಮುತ್ತಿಗೆ ಹಾಕುತ್ತೇವೆ’: ಝೈದ್ ಖಾನ್ ಫ್ಯಾನ್ಸ್ ಗರಂ
ಪಿ.ಎಸ್.ಲೇನ್ ರಸ್ತೆಯಲ್ಲಿ ಏಕಾಏಕಿ ಕುಸಿದ ಕಾಂಪೌಂಡ್​​: ಬೈಕ್​​ಗಳು ಜಖಂ
ಪಿ.ಎಸ್.ಲೇನ್ ರಸ್ತೆಯಲ್ಲಿ ಏಕಾಏಕಿ ಕುಸಿದ ಕಾಂಪೌಂಡ್​​: ಬೈಕ್​​ಗಳು ಜಖಂ
ಶೂನಲ್ಲಿ ಹೈಡ್ರೋಪೋನಿಕ್ ಗಾಂಜಾ ಇಟ್ಟುಕೊಂಡು ಬಂದು ಬೆಂಗಳೂರಿನಲ್ಲಿ ಲಾಕ್
ಶೂನಲ್ಲಿ ಹೈಡ್ರೋಪೋನಿಕ್ ಗಾಂಜಾ ಇಟ್ಟುಕೊಂಡು ಬಂದು ಬೆಂಗಳೂರಿನಲ್ಲಿ ಲಾಕ್
ಸೀಗೆಗುಡ್ಡದಲ್ಲಿ ಜನವೋ ಜನ,ಜಿಲ್ಲಾಡಳಿತಕ್ಕೆ ಟೆನ್ಷನ್ ತಂದಿಟ್ಟ ಪ್ರೇಮದ ಊರಲಿ
ಸೀಗೆಗುಡ್ಡದಲ್ಲಿ ಜನವೋ ಜನ,ಜಿಲ್ಲಾಡಳಿತಕ್ಕೆ ಟೆನ್ಷನ್ ತಂದಿಟ್ಟ ಪ್ರೇಮದ ಊರಲಿ
ಧನ್ವೀರ್ ಫೋಟೋಗೆ ಮಸಿ ಬಳಿದು ಝೈದ್ ಖಾನ್ ಅಭಿಮಾನಿಗಳ ಆಕ್ರೋಶ
ಧನ್ವೀರ್ ಫೋಟೋಗೆ ಮಸಿ ಬಳಿದು ಝೈದ್ ಖಾನ್ ಅಭಿಮಾನಿಗಳ ಆಕ್ರೋಶ
ಅವಾಂಟ್ ಬಿಕೆಜಿ ಆಸ್ಪತ್ರೆಯಲ್ಲಿ AI ತಂತ್ರಜ್ಞಾನ ಪರಿಚಯ
ಅವಾಂಟ್ ಬಿಕೆಜಿ ಆಸ್ಪತ್ರೆಯಲ್ಲಿ AI ತಂತ್ರಜ್ಞಾನ ಪರಿಚಯ