AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ತವರಿನಲ್ಲಿ ಸಂಜುಗೆ ಸಿಗುತ್ತಾ ಅವಕಾಶ? ಹೀಗಿರಲಿದೆ ಪ್ಲೇಯಿಂಗ್ 11

India vs New Zealand 5th T20: ಭಾರತ-ನ್ಯೂಜಿಲೆಂಡ್ ಐದನೇ ಟಿ20 ಪಂದ್ಯವು ತಿರುವನಂತಪುರಂನಲ್ಲಿ ನಡೆಯಲಿದೆ. 3-1 ಮುನ್ನಡೆ ಸಾಧಿಸಿರುವ ಭಾರತ ತಂಡ ವಿಶ್ವಕಪ್‌ಗೆ ಮುನ್ನ ಸರಣಿ ಗೆಲುವಿನೊಂದಿಗೆ ಆತ್ಮವಿಶ್ವಾಸ ಹೆಚ್ಚಿಸಲು ನೋಡುತ್ತಿದೆ. ಇಶಾನ್ ಕಿಶನ್, ವರುಣ್ ಚಕ್ರವರ್ತಿ ತಂಡಕ್ಕೆ ಮರಳುವ ಸಾಧ್ಯತೆಯಿದೆ. ಸಂಜು ಸ್ಯಾಮ್ಸನ್‌ಗೆ ಇದು ನಿರ್ಣಾಯಕ ಪಂದ್ಯವಾಗಿದ್ದು, ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಉತ್ತಮ ಪ್ರದರ್ಶನ ಕಡ್ಡಾಯವಾಗಿದೆ.

IND vs NZ: ತವರಿನಲ್ಲಿ ಸಂಜುಗೆ ಸಿಗುತ್ತಾ ಅವಕಾಶ? ಹೀಗಿರಲಿದೆ ಪ್ಲೇಯಿಂಗ್ 11
Team India
ಪೃಥ್ವಿಶಂಕರ
|

Updated on: Jan 30, 2026 | 8:19 PM

Share

ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿ ಅಂತಿಮ ಹಂತಕ್ಕೆ ಬಂದು ನಿಂತಿದೆ. ಸರಣಿಯಲ್ಲಿ 3-1 ಅಂತರದ ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಟಿ20 ವಿಶ್ವಕಪ್​ಗೂ (T20 World Cup) ಮುನ್ನ ಆಡುತ್ತಿರುವ ಕೊನೆಯ ಸರಣಿಯ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಮಿನಿ ವಿಶ್ವ ಸಮರಕ್ಕೆ ಕಾಲಿಡಲು ಯತ್ನಿಸಲಿದೆ. ಇತ್ತ ಸರಣಿ ಸೋತಿರುವ ನ್ಯೂಜಿಲೆಂಡ್ ಸರಣಿ ಸೋಲಿನ ಅಂತರವನ್ನು ಕಡಿಮೆ ಮಾಡಲು ನೋಡುತ್ತಿದೆ. ಉಭಯ ತಂಡಗಳ ನಡುವಿನ ಅಂತಿಮ ಪಂದ್ಯ ತಿರುವನಂತಪುರದ ಗ್ರೀನ್‌ಫೀಲ್ಡ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಕಣಕ್ಕಿಳಿಯುವ ತಂಡವೇ ಟಿ20 ವಿಶ್ವಕಪ್​ನಲ್ಲಿ ಆಡುವುದರಿಂದ ಈ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದನ್ನು ನೋಡಲು ಕುತೂಹಲಕಾರಿಯಾಗಿದೆ.

ಯಾರಿಗೆ ಸಿಗಲಿದೆ ಅವಕಾಶ?

ಐದನೇ ಟಿ20 ಪಂದ್ಯಕ್ಕೆ ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಎರಡು ಬದಲಾವಣೆಗಳನ್ನು ಮಾಡುವ ನಿರೀಕ್ಷೆಯಿದೆ. ಇಶಾನ್ ಕಿಶನ್ ತಂಡಕ್ಕೆ ಮರಳಬಹುದು ಎಂದು ವರದಿಯಾಗುತ್ತಿದ್ದು, ವರುಣ್ ಚಕ್ರವರ್ತಿ ಕೂಡ ಈ ಪಂದ್ಯದಲ್ಲಿ ಆಡಬಹುದು. ಗಾಯದ ಸಮಸ್ಯೆಯಿಂದಾಗಿ ಇಶಾನ್ ಕಿಶನ್ ಹಿಂದಿನ ಪಂದ್ಯವನ್ನು ತಪ್ಪಿಸಿಕೊಂಡಿದ್ದರೆ, ಹಿಂದಿನ ಎರಡು ಪಂದ್ಯಗಳಿಂದ ವರುಣ್ ಚಕ್ರವರ್ತಿಗೆ ವಿಶ್ರಾಂತಿ ನೀಡಲಾಗಿತ್ತು. ಇವರಿಬ್ಬರ ಆಗಮನದಿಂದಾಗಿ ಬುಮ್ರಾ ಹಾಗೂ ರವಿ ಬಿಷ್ಣೋಯ್ ಅವರನ್ನು ತಂಡದಿಂದ ಕೈಬಿಡಬಹುದು.

ಸಂಜು ಸ್ಯಾಮ್ಸನ್​ಗೆ ಕೊನೆಯ ಅವಕಾಶ?

ತಿರುವನಂತಪುರಂ ಸಂಜು ಸ್ಯಾಮ್ಸನ್ ಅವರ ತವರು ಮೈದಾನವಾಗಿದ್ದು, ಅವರಿಗೆ ಅವಕಾಶ ನೀಡಲಾಗುತ್ತದೆಯೇ ಎಂಬುದು ಪ್ರಶ್ನೆ. ಕಳೆದ ನಾಲ್ಕು ಪಂದ್ಯಗಳಲ್ಲಿ ಸಂಜು ರನ್ ಗಳಿಸಲು ವಿಫಲರಾಗಿದ್ದು, ಅವರ ಪ್ರದರ್ಶನವನ್ನು ನಿರಂತರವಾಗಿ ಪ್ರಶ್ನಿಸಲಾಗುತ್ತಿದೆ. ಕಳೆದ 15 ಟಿ20 ಇನ್ನಿಂಗ್ಸ್‌ಗಳಲ್ಲಿ ಸಂಜು ಸ್ಯಾಮ್ಸನ್ ಕೇವಲ ಒಂದು ಅರ್ಧಶತಕ ಮಾತ್ರ ಗಳಿಸಿದ್ದಾರೆ. ಆದಾಗ್ಯೂ, ಸಂಜುಗೆ ಕೊನೆಯ ಅವಕಾಶ ನೀಡುವ ಸಾಧ್ಯತೆಗಳಿವೆ. ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಉತ್ತಮ ಪ್ರದರ್ಶನ ನೀಡಿದರೆ, ಟಿ20 ವಿಶ್ವಕಪ್‌ನಲ್ಲಿ ಆಡುವುದು ಅವರಿಗೆ ಸುಲಭವಾಗಬಹುದು, ಇಲ್ಲದಿದ್ದರೆ ಅವರ ಸ್ಥಾನದಲ್ಲಿ ಇಶಾನ್ ಕಿಶನ್ ಆಡುವುದನ್ನು ಕಾಣಬಹುದು.

ಭಾರತದ ಸಂಭಾವ್ಯ XI: ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್, ಇಶನ್ ಕಿಶನ್, ಶಿವಂ ದುಬೆ, ರಿಂಕು ಸಿಂಗ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್ ಮತ್ತು ವರುಣ್ ಚಕ್ರವರ್ತಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!