AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಆಯ್ಕೆ ಯಾವಾಗ?

IND vs NZ ODI: ಭಾರತ 2026ರಲ್ಲಿ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸಲಿದೆ. ತಂಡದ ಆಯ್ಕೆ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಜನವರಿ 3 ಅಥವಾ 4 ರಂದು ಪ್ರಕಟಗೊಳ್ಳುವ ನಿರೀಕ್ಷೆಯಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಅವರ ಆಯ್ಕೆ ಕುತೂಹಲ ಮೂಡಿಸಿದೆ. ಇದು ಮುಂಬರುವ ಟಿ20 ವಿಶ್ವಕಪ್‌ಗೆ ಮುನ್ನ ತಂಡಕ್ಕೆ ಮಹತ್ವದ ಸರಣಿಯಾಗಲಿದೆ.

IND vs NZ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಆಯ್ಕೆ ಯಾವಾಗ?
Team India
ಪೃಥ್ವಿಶಂಕರ
|

Updated on:Dec 28, 2025 | 7:40 PM

Share

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು ಗೆಲುವಿನೊಂದಿಗೆ ಅಂತ್ಯಗೊಳಿಸಿದ್ದ ಟೀಂ ಇಂಡಿಯಾ (Team India) ಪ್ರಸ್ತುತ ವಿಶ್ರಾಂತಿ ಮೂಡ್​ನಲ್ಲಿದೆ. ಇನ್ನೇನಿದ್ದರೂ ತಂಡ ಕಣಕ್ಕಿಳಿಯುವುದು ಮುಂದಿನ ವರ್ಷವೇ. ಆದಾಗ್ಯೂ 2026 ರಲ್ಲಿ ಟೀಂ ಇಂಡಿಯಾ ಮೊದಲಿಗೆ ಯಾವ ತಂಡವನ್ನು ಯಾವಾಗ ಎದುರಿಸಲಿದೆ ಎಂಬುದು ಖಚಿತವಾಗಿದೆ. ಅದರಂತೆ ಭಾರತ ಏಕದಿನ ತಂಡ ನ್ಯೂಜಿಲೆಂಡ್ (India vs New Zealand) ವಿರುದ್ಧ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿ ಜನವರಿ 11 ರಿಂದ ಆರಂಭವಾಗಲಿದೆ. ಈ ಸರಣಿಯೊಂದಿಗೆ ಟೀಂ ಇಂಡಿಯಾದ ಹೊಸ ವರ್ಷವೂ ಆರಂಭವಾಗಲಿದೆ. ಆದರೆ ಈ ಸರಣಿಗೆ ಇನ್ನು ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿಲ್ಲ. ಈ ಏಕದಿನ ಸರಣಿ ಆರಂಭವಾಗಲು ಕೇವಲ 14 ದಿನಗಳು ಮಾತ್ರ ಉಳಿದಿದ್ದು, ಆಯ್ಕೆ ಪ್ರಕ್ರಿಯೆಯನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಆದಾಗ್ಯೂ, ಇದು ಹೊಸ ವರ್ಷದ ಮೊದಲ ವಾರದಲ್ಲಿ ಪೂರ್ಣಗೊಳ್ಳಲಿದೆ ಎಂದು ವರದಿಯಾಗಿದೆ.

ಟೀಂ ಇಂಡಿಯಾ ಯಾವಾಗ ಪ್ರಕಟ?

ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಮುನ್ನ ಇದು ಟೀಂ ಇಂಡಿಯಾದ ಕೊನೆಯ ಸರಣಿಯಾಗಲಿದೆ. ಏಕದಿನ ಸರಣಿ ಅಷ್ಟೇನೂ ಮುಖ್ಯವಾಗದಿದ್ದರೂ, ಹಲವಾರು ಕಾರಣಗಳಿಂದ ಈ ಸರಣಿ ಕೂಡ ವಿಶೇಷವಾಗಿರುತ್ತದೆ. ವಾಸ್ತವವಾಗಿ, ಟೀಂ ಇಂಡಿಯಾ ಕಳೆದ ಎರಡು ತಿಂಗಳುಗಳಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಗಳನ್ನು ಆಡಿದೆ, ಅಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಇಬ್ಬರು ಅನುಭವಿಗಳು ಟಿ20 ತಂಡದ ಭಾಗವಾಗಿಲ್ಲದ ಕಾರಣ ಅಭಿಮಾನಿಗಳು ಸಾಧ್ಯವಾದಷ್ಟು ಬೇಗ ಅವರನ್ನು ಮತ್ತೆ ನೋಡಲು ಉತ್ಸುಕರಾಗಿದ್ದಾರೆ.

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಬಿಸಿಸಿಐನ ಹಿರಿಯ ಆಯ್ಕೆ ಸಮಿತಿಯು ಜನವರಿ 3 ರ ಶನಿವಾರ ಅಥವಾ ಜನವರಿ 4 ರ ಭಾನುವಾರ ಏಕದಿನ ಸರಣಿಗೆ ತಂಡಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ವರದಿಯ ಪ್ರಕಾರ, ಅಜಿತ್ ಅಗರ್ಕರ್ ಅಧ್ಯಕ್ಷತೆಯ ಆಯ್ಕೆ ಸಮಿತಿಯು ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಸಭೆ ಸೇರುವ ಬದಲು ಆನ್‌ಲೈನ್‌ನಲ್ಲಿ ಸಭೆ ಸೇರಲಿದೆ. ಇದು ಟಿ20 ವಿಶ್ವಕಪ್ ತಂಡ ಪ್ರಕಟಣೆಗಳಿಗಿಂತ ಭಿನ್ನವಾಗಿ, ತಂಡವನ್ನು ಪತ್ರಿಕಾಗೋಷ್ಠಿಯಲ್ಲಿ ಅಲ್ಲ, ಬಿಸಿಸಿಐನ ಸೋಶಿಯಲ್ ಮೀಡಿಯಾ ಖಾತೆ ಮತ್ತು ವೆಬ್‌ಸೈಟ್‌ನಲ್ಲಿ ಪ್ರಕಟಿಸುವ ಸಾಧ್ಯತೆಗಳಿವೆ.

ಈ ಸರಣಿಗೆ ತಂಡದ ಆಯ್ಕೆ ಏಕೆ ವಿಶೇಷವಾಗಿದೆ?

ಈ ಬಾರಿಯೂ ವಿರಾಟ್ ಮತ್ತು ರೋಹಿತ್ ಆಯ್ಕೆ ಖಚಿತವಾಗಿದ್ದರೂ, ಆಯ್ಕೆದಾರರು ಯಾವುದಾದರೂ ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆಯೇ ಎಂಬ ಕುತೂಹಲವಿದೆ. ಹೆಚ್ಚಿನ ಕಣ್ಣುಗಳು ಸ್ಟಾರ್ ಬ್ಯಾಟ್ಸ್‌ಮನ್ ಮತ್ತು ಇತ್ತೀಚೆಗೆ ನೇಮಕಗೊಂಡ ಉಪನಾಯಕ ಶ್ರೇಯಸ್ ಅಯ್ಯರ್ ಅವರ ಆಯ್ಕೆಯ ಮೇಲಿರುತ್ತವೆ. ಆಸ್ಟ್ರೇಲಿಯಾ ಪ್ರವಾಸದ ಸಮಯದಲ್ಲಿ ಫೀಲ್ಡಿಂಗ್ ಮಾಡುವಾಗ ಅಯ್ಯರ್ ಗಾಯಗೊಂಡು ಅಂದಿನಿಂದ ಕ್ರಿಕೆಟ್ ಚಟುವಟಿಕೆಯಿಂದ ದೂರವಿದ್ದಾರೆ. ಅವರು ಇತ್ತೀಚೆಗೆ ಎರಡು ತಿಂಗಳ ನಂತರ ಮೊದಲ ಬಾರಿಗೆ ಬ್ಯಾಟಿಂಗ್ ಅಭ್ಯಾಸ ಮಾಡಿದ್ದರು. ಪ್ರಸ್ತುತ ಬೆಂಗಳೂರಿನಲ್ಲಿರುವ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್​ನಲ್ಲಿರುವ ಅಯ್ಯರ್ ತಂಡಕ್ಕೆ ಮರಳುವುದು ಖಚಿತವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:38 pm, Sun, 28 December 25

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ