AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲಿನಿಂದ ವಿಕೆಟ್ ಪಡೆದ ಅರ್ಷದೀಪ್ ಸಿಂಗ್; ಕಿವೀಸ್ ಬ್ಯಾಟರ್​ಗೆ ಶಾಕ್! ವಿಡಿಯೋ

ನ್ಯೂಜಿಲೆಂಡ್ ವಿರುದ್ಧದ ಮೊದಲ T20 ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳಿಂದ ರೋಚಕ ಗೆಲುವು ಸಾಧಿಸಿತು. 226 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಭಾರತ, ಅರ್ಷದೀಪ್ ಸಿಂಗ್ ಅವರ ಅನಿರೀಕ್ಷಿತ ರನೌಟ್‌ನಿಂದ ಮಹತ್ವದ ತಿರುವು ಪಡೆಯಿತು. ಅಪಾಯಕಾರಿ ಬೆವನ್ ಜೇಕಬ್ಸ್ ವಿಕೆಟ್ ಪತನ ತಂಡಕ್ಕೆ ಬಲ ನೀಡಿತು. ನಾಯಕ ಶ್ರೇಯಸ್ ಅಯ್ಯರ್ ಮತ್ತು ನಮನ್ ಧೀರ್ ಅವರ ಸ್ಪೋಟಕ ಬ್ಯಾಟಿಂಗ್‌ನಿಂದ ಭಾರತ ಕೊನೆಯ ಓವರ್‌ನಲ್ಲಿ ಜಯಭೇರಿ ಬಾರಿಸಿತು.

ಕಾಲಿನಿಂದ ವಿಕೆಟ್ ಪಡೆದ ಅರ್ಷದೀಪ್ ಸಿಂಗ್; ಕಿವೀಸ್ ಬ್ಯಾಟರ್​ಗೆ ಶಾಕ್! ವಿಡಿಯೋ
ಅರ್ಷದೀಪ್ ಸಿಂಗ್
ಪೃಥ್ವಿಶಂಕರ
|

Updated on: Oct 22, 2026 | 7:44 PM

Share

ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 4 ವಿಕೆಟ್‌ಗಳ ಗೆಲುವು ಸಾಧಿಸಿತು. ನ್ಯೂಜಿಲೆಂಡ್ ನೀಡಿದ 226 ರನ್​ಗಳ ಬೃಹತ್ ಗುರಿಯನ್ನು ಭಾರತ ಕೊನೆಯ ಓವರ್​ನಲ್ಲಿ ಬೆನ್ನಟ್ಟಿತು. ಇನ್ನು ಇದೇ ಪಂದ್ಯದಲ್ಲಿ ಭಾರತದ ವೇಗದ ಬೌಲರ್ ಅರ್ಷದೀಪ್ ಸಿಂಗ್ ತಮ್ಮ ಚಾಣಾಕ್ಷತನದಿಂದ ಎಲ್ಲರ ಗಮನ ಸೆಳೆದರು. ನ್ಯೂಜಿಲೆಂಡ್‌ನ ಸ್ಫೋಟಕ ಬ್ಯಾಟ್ಸ್‌ಮನ್ ಬೆವನ್ ಜೇಕಬ್ಸ್ ಅವರನ್ನು ಅಪರೂಪದ ರೀತಿಯಲ್ಲಿ ರನೌಟ್ ಮಾಡುವ ಮೂಲಕ ಅರ್ಷದೀಪ್ ಅಚ್ಚರಿ ಮೂಡಿಸಿದರು. ಇದೀಗ ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅರ್ಷದೀಪ್ ಅವರ ಸಮಯಪ್ರಜ್ಞೆಗೆ ಅಭಿಮಾನಿಗಳು ಸಲಾಂ ಹೊಡೆದಿದ್ದಾರೆ.

ಕಾಲಿನಿಂದ ರನೌಟ್ ಮಾಡಿದ ಅರ್ಷದೀಪ್

18ನೇ ಓವರ್​ನಲ್ಲಿ ಬೌಲಿಂಗ್ ಮಾಡಲು ಬಂದ ಅರ್ಷದೀಪ್ ಸಿಂಗ್ ಈ ಓವರ್​ನ 3ನೇ ಎಸೆತದಲ್ಲಿ ಈ ರನೌಟ್ ಮಾಡಿದರು. ನಡೆದಿದ್ದೇನೆಂದರೆ, ಗ್ಲೆನ್ ಫಿಲಿಪ್ಸ್ ಮತ್ತು ಬೆವನ್ ಜೇಕಬ್ಸ್ ಒಂದು ರನ್ ಕದಿಯಲು ಪ್ರಯತ್ನಿಸಿದರು. ಈ ವೇಳೆ ಚೆಂಡನ್ನು ಕೈಯಲ್ಲಿ ತೆಗೆದುಕೊಂಡು ವಿಕೆಟ್‌ಗೆ ಎಸೆಯುವ ಬದಲು, ಅರ್ಷದೀಪ್ ತಮ್ಮ ಕಾಲಿನಿಂದಲೇ ಚೆಂಡನ್ನು ವಿಕೆಟ್‌ನತ್ತ ತಳ್ಳಿದರು. ಅವರ ಈ ಫುಟ್‌ಬಾಲ್ ಶೈಲಿಯ ಚಾಣಾಕ್ಷ ನಡೆಗೆ ಜೇಕಬ್ಸ್ ರನೌಟ್ ಆದರು. ಬ್ಯಾಟ್ಸ್‌ಮನ್ ಕ್ರೀಸ್ ತಲುಪಿದ್ದರೂ, ಬ್ಯಾಟ್ ನೆಲಕ್ಕೆ ತಾಗುವ ಮೊದಲು ಗಾಳಿಯಲ್ಲಿತ್ತು. ಹೀಗಾಗಿ ಅಂಪೈರ್ ಅವರನ್ನು ರನೌಟ್ ಎಂದು ತೀರ್ಪು ನೀಡಿದರು.

ನಿರ್ಣಾಯಕ ಹಂತದಲ್ಲಿ ಅರ್ಷದೀಪ್‌ ವಿಕೆಟ್

ಪಂದ್ಯದ 18ನೇ ಓವರ್‌ನಲ್ಲಿ ಈ ರನೌಟ್ ಸಂಭವಿಸಿತು. ಆ ಸಮಯದಲ್ಲಿ ಗ್ಲೆನ್ ಫಿಲಿಪ್ಸ್ ಮತ್ತು ಜೇಕಬ್ಸ್ ಕೇವಲ ಐದು ಓವರ್‌ಗಳ ಆಸುಪಾಸಿನಲ್ಲಿ 73 ರನ್‌ಗಳ ಜೊತೆಯಾಟವಾಡಿದ್ದರು. ಜೇಕಬ್ಸ್ ಕೇವಲ 16 ಎಸೆತಗಳಲ್ಲಿ 31 ರನ್ ಸಿಡಿಸಿ ಅಪಾಯಕಾರಿಯಾಗಿ ಕಾಣುತ್ತಿದ್ದರು. ಅವರ ವಿಕೆಟ್ ಪತನದ ಬಳಿಕ ಕ್ರೀಸ್‌ಗೆ ಬಂದ ಮೈಕೆಲ್ ಬ್ರೇಸ್‌ವೆಲ್ ಕೂಡ ನಿರೀಕ್ಷಿತ ವೇಗದಲ್ಲಿ ರನ್ ಗಳಿಸಲು ಸಾಧ್ಯವಾಗಲಿಲ್ಲ. ಅವರು ಆರು ಎಸೆತಗಳಲ್ಲಿ ಕೇವಲ 7 ರನ್ ಗಳಿಸಿ ಔಟಾದರು. ಈ ವಿಕೆಟ್ ಪಂದ್ಯದ ಫಲಿತಾಂಶದ ಮೇಲೆ ಮಹತ್ವದ ಪರಿಣಾಮ ಬೀರಿತು. ಏಕೆಂದರೆ ಭಾರತ ತಂಡ 226 ರನ್‌ಗಳ ಗುರಿಯನ್ನು ಕೇವಲ ಎರಡು ಎಸೆತಗಳು ಬಾಕಿ ಇರುವಾಗ ಬೆನ್ನಟ್ಟಿತು.

ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಗೆಲುವು! 226 ರನ್‌ಗಳ ಗುರಿ ಬೆನ್ನಟ್ಟಿ ದಾಖಲೆ ಬರೆದ ಶ್ರೇಯಸ್ ಪಡೆ

ಪಂದ್ಯ ಹೀಗಿತ್ತು

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡಕ್ಕೆ ಫಿನ್ ಅಲೆನ್ ಮತ್ತು ಟಿಮ್ ಸೀಫರ್ಟ್ ಉತ್ತಮ ಆರಂಭ ನೀಡಿದರು. ಅಲೆನ್ 24 ಎಸೆತಗಳಲ್ಲಿ 45 ರನ್ ಗಳಿಸಿದರೆ, ಸೀಫರ್ಟ್ 17 ಎಸೆತಗಳಲ್ಲಿ 24 ರನ್ ಬಾರಿಸಿದರು. ನಂತರ ಗ್ಲೆನ್ ಫಿಲಿಪ್ಸ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 40 ಎಸೆತಗಳಲ್ಲಿ ಅಜೇಯ 82 ರನ್ ಗಳಿಸಿದರು. ಬೆವನ್ ಜೇಕಬ್ಸ್ 16 ಎಸೆತಗಳಲ್ಲಿ 31 ರನ್ ಮತ್ತು ಡ್ಯಾರಿಲ್ ಮಿಚೆಲ್ 19 ಎಸೆತಗಳಲ್ಲಿ 28 ರನ್ ಗಳಿಸಿ ತಂಡದ ಮೊತ್ತ ಹೆಚ್ಚಿಸಿದರು. ಇದರ ನೆರವಿನಿಂದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 225 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

226 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಸ್ಫೋಟಕ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 93 ರನ್‌ಗಳ ಜೊತೆಯಾಟವಾಡಿತು. ಆದರೆ ನಂತರ ಭಾರತ ತಂಡದ ಬ್ಯಾಟಿಂಗ್‌ನಲ್ಲಿ ಕುಸಿತ ಕಂಡುಬಂದಿತು. ಕೇವಲ 29 ರನ್‌ಗಳ ಅಂತರದಲ್ಲಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಭಾರತ ಸಂಕಷ್ಟಕ್ಕೆ ಸಿಲುಕಿತು. ನಿರ್ಣಾಯಕ ಹಂತದಲ್ಲಿ ನಾಯಕ ಶ್ರೇಯಸ್ ಅಯ್ಯರ್ 24 ಎಸೆತಗಳಲ್ಲಿ 42 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಮತ್ತೊಂದು ತುದಿಯಲ್ಲಿ ನಮನ್ ಧೀರ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 15 ಎಸೆತಗಳಲ್ಲಿ ಅಜೇಯ 42 ರನ್ ಸಿಡಿಸಿದರು. ಅಂತಿಮವಾಗಿ ಭಾರತ ತಂಡ 6 ವಿಕೆಟ್ ಕಳೆದುಕೊಂಡು ಗುರಿ ತಲುಪಿ, ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?