Asia Cup 2025: ಔಪಚಾರಿಕ ಪಂದ್ಯಕ್ಕೆ ಭಾರತ ತಂಡದಲ್ಲಿ 3 ಬದಲಾವಣೆ; ಯಾರಿಗೆ ವಿಶ್ರಾಂತಿ?
India vs Oman Asia Cup 2025: ಭಾರತ ತಂಡವು 2025 ರ ಏಷ್ಯಾ ಕಪ್‌ನ ಸೂಪರ್ 4 ಹಂತಕ್ಕೆ ಪ್ರವೇಶ ಪಡೆದಿದೆ. ಯುಎಇ ಮತ್ತು ಪಾಕಿಸ್ತಾನವನ್ನು ಸೋಲಿಸಿರುವ ಭಾರತ ಇದೀಗ ಒಮಾನ್ ವಿರುದ್ಧದ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಮತ್ತು ಜಸ್‌ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ರಿಂಕು ಸಿಂಗ್, ಹರ್ಷಿತ್ ರಾಣಾ ಮತ್ತು ಅರ್ಶ್‌ದೀಪ್ ಸಿಂಗ್ ಅವರಿಗೆ ಆಡಲು ಅವಕಾಶ ಸಿಗುವ ಸಾಧ್ಯತೆ ಇದೆ.

2025 ರ ಏಷ್ಯಾಕಪ್‌ನ (Asia Cup 2025) ಸೂಪರ್ 4 ಸುತ್ತಿನಲ್ಲಿ ಭಾರತ ಸ್ಥಾನ ಪಡೆದುಕೊಂಡಿದೆ. ಮೊದಲು ಯುಎಇ, ನಂತರ ಪಾಕಿಸ್ತಾನವನ್ನು ಸೋಲಿಸಿರುವ ಟೀಂ ಇಂಡಿಯಾ ಮುಂದಿನ ಸುತ್ತಿಗೆ ಭರ್ಜರಿಯಾಗಿ ಎಂಟ್ರಿಕೊಟ್ಟಿದೆ. ಆದಾಗ್ಯೂ, ಕೊನೆಯ ಲೀಗ್ ಪಂದ್ಯವನ್ನು ಒಮಾನ್ ವಿರುದ್ಧ ಆಡಬೇಕಾಗಿದೆ, ಇದಕ್ಕಾಗಿ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಸಧ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಒಮಾನ್ ವಿರುದ್ಧದ ಪಂದ್ಯ ಕೇವಲ ಔಪಚಾರಿಕವಾಗಿರುವುದರಿಂದ ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆಗಳಾಗುವ ಸಾಧ್ಯತೆಗಳಿವೆ. ಇದು ನಿಜವಾದರೆ ಯಾವ ಮೂವರು ಆಟಗಾರರಿಗೆ ವಿಶ್ರಾಂತಿ ಸಿಗಲಿದೆ? ಯಾರಿಗೆ ಆಡಲು ಅವಕಾಶ ಸಿಗುತ್ತದೆ ಎಂಬುದನ್ನು ನೋಡೋಣ.
ರಿಂಕು ಸಿಂಗ್ಗೆ ಅವಕಾಶ?
ಟೀಂ ಇಂಡಿಯಾದ ಮುಂದಿನ ಪಂದ್ಯ ಅಬುಧಾಬಿಯಲ್ಲಿ ನಡೆಯಲಿದ್ದು, ಎಡಗೈ ಬ್ಯಾಟ್ಸ್‌ಮನ್ ರಿಂಕು ಸಿಂಗ್ ಏಷ್ಯಾಕಪ್‌ಗೆ ಪಾದಾರ್ಪಣೆ ಮಾಡಬಹುದು. ಯುಪಿ ಪ್ರೀಮಿಯರ್ ಲೀಗ್‌ನಲ್ಲಿ ರಿಂಕು ಸಿಂಗ್ ಕೆಲವು ಅದ್ಭುತ ಇನ್ನಿಂಗ್ಸ್‌ಗಳನ್ನು ಆಡಿ ತಂಡವನ್ನು ಫೈನಲ್‌ಗೆ ಕರೆದೊಯ್ದಿದ್ದರು. ರಿಂಕು ಜೊತೆಗೆ, ಹರ್ಷಿತ್ ರಾಣಾ ಮತ್ತು ಅರ್ಶ್‌ದೀಪ್ ಸಿಂಗ್ ಕೂಡ ಆಡುವ ನಿರೀಕ್ಷೆಯಿದೆ. ಈ ಇಬ್ಬರು ಆಟಗಾರರು ಆಡಿದರೆ, ಮುಂದಿನ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಮತ್ತು ಜಸ್‌ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗುವುದು ಎಂದರ್ಥ.
ಇದಕ್ಕೆ ಪೂರಕವಾಗಿ ಹರ್ಷಿತ್ ರಾಣಾ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮತ್ತು ಬಾಲಿಂಗ್ ಎರಡನ್ನೂ ಅಭ್ಯಾಸ ಮಾಡಿದ್ದಾರೆ. ರಿಂಕು ಸಿಂಗ್ ಮತ್ತು ಅರ್ಶ್‌ದೀಪ್ ಸಿಂಗ್ ಕೂಡ ಬೆವರು ಹರಿಸಿದ್ದಾರೆ. ಸೂಪರ್ ಫೋರ್‌ಗೆ ಮೊದಲು ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡುವ ಬಗ್ಗೆ ಟೀಂ ಇಂಡಿಯಾ ಚಿಂತಿಸುತ್ತಿದ್ದು, ತಂಡದಲ್ಲಿ ಬದಲಾವಣೆಯಾಗುವುದು ಖಚಿತವಾಗಿದೆ.
ಸಂಭಾವ್ಯ ಪ್ಲೇಯಿಂಗ್ 11: ಶುಭ್ಮನ್ ಗಿಲ್, ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ/ರಿಂಕು ಸಿಂಗ್, ಶಿವಂ ದುಬೆ, ಹರ್ಷಿತ್ ರಾಣಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್ ಮತ್ತು ವರುಣ್ ಚಕ್ರವರ್ತಿ
ಅಬುಧಾಬಿಯಲ್ಲಿ ಭಾರತದ ದಾಖಲೆ ಹೇಗಿದೆ?
ಅಬುಧಾಬಿ ಕ್ರೀಡಾಂಗಣದಲ್ಲಿ ಭಾರತ ತಂಡವು 100% ದಾಖಲೆಯನ್ನು ಹೊಂದಿದೆ. ವಾಸ್ತವವಾಗಿ, ಟೀಂ ಇಂಡಿಯಾ ಈ ಮೈದಾನದಲ್ಲಿ ಕೇವಲ ಒಂದು ಟಿ20 ಪಂದ್ಯವನ್ನು ಆಡಿದೆ. 2021 ರ ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ, ಅಫ್ಘಾನಿಸ್ತಾನವನ್ನು ಎದುರಿಸಿತ್ತು . ಆ ಪಂದ್ಯವನ್ನು ಟೀಂ ಇಂಡಿಯಾ 66 ರನ್‌ಗಳಿಂದ ಗೆದ್ದುಕೊಂಡಿತ್ತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
