
ಏಷ್ಯಾಕಪ್ 2025 (Asia Cup 2025) ರಲ್ಲಿ ಭಾರತ ಮತ್ತು ಪಾಕಿಸ್ತಾನ (India vs Pakistan) ಮತ್ತೊಮ್ಮೆ ಪರಸ್ಪರ ಮುಖಾಮುಖಿಯಾಗಲಿವೆ. ಈ ಬಾರಿ, ಎರಡೂ ತಂಡಗಳು ಸೂಪರ್-4 ಹಂತದಲ್ಲಿ ಪೈಪೋಟಿ ನಡೆಸುತ್ತಿವೆ. ಫೈನಲ್ ತಲುಪಲು ಈ ಪಂದ್ಯ ನಿರ್ಣಾಯಕವಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ? ಈ ಬಾರಿ ಪಾಕಿಸ್ತಾನದ ವಿರುದ್ಧ ಸೂರ್ಯಕುಮಾರ್ ಯಾದವ್ ಯಾವ ಹನ್ನೊಂದರ ಬಳಗವನ್ನು ಕಟ್ಟಿಕೊಂಡು ಕಣಕ್ಕಿಳಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ?. ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಂಡವನ್ನು ನೋಡಿದರೆ, ಸೂಪರ್ 4 ಸುತ್ತಿನ ಪಂದ್ಯಕ್ಕೆ ತಂಡದಲ್ಲಿ ಎರಡು ಬದಲಾವಣೆಗಳಾಗುವುದು ಖಚಿತವಾಗಿದೆ.
ಪಾಕಿಸ್ತಾನ ವಿರುದ್ಧದ ಸೂಪರ್ ಫೋರ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆಗಳಾಗಲಿದ್ದು, ಅರ್ಷದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ ತಂಡದಿಂದ ಹೊರಬೀಳಲಿದ್ದಾರೆ. ವಾಸ್ತವವಾಗಿ ಒಮಾನ್ ವಿರುದ್ಧದ ಲೀಗ್ ಸುತ್ತಿನ ಕೊನೆಯ ಪಂದ್ಯದಲ್ಲಿ ಇಬ್ಬರೂ ಆಟಗಾರರಿಗೆ ಅವಕಾಶ ಸಿಕ್ಕಿತ್ತು. ಇವರ ಬದಲಿಯಾಗಿ ಜಸ್ಪ್ರೀತ್ ಬುಮ್ರಾ ಮತ್ತು ವರುಣ್ ಚಕ್ರವರ್ತಿಗೆ ವಿಶ್ರಾಂತಿ ನೀಡಲಾಗಿತ್ತು. ಇದೀಗ ಪಾಕಿಸ್ತಾನ ವಿರುದ್ಧದ ಸೂಪರ್ ಫೋರ್ ಪಂದ್ಯಕ್ಕೆ ಬುಮ್ರಾ ಮತ್ತು ವರುಣ್ ಟೀಂ ಇಂಡಿಯಾಕ್ಕೆ ಮರಳಲಿದ್ದಾರೆ.
ಪಾಕಿಸ್ತಾನ ವಿರುದ್ಧದ ಸೂಪರ್ 4 ಪಂದ್ಯಕ್ಕೆ ಬುಮ್ರಾ ಮತ್ತು ವರುಣ್ ತಂಡದಲ್ಲಿ ಆಯ್ಕೆಯಾಗುವುದರಿಂದ ಅರ್ಷದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ ತಂಡದಿಂದ ಹೊರಬೀಳಲಿದ್ದಾರೆ. ಉಳಿದಂತೆ ಅಭಿಷೇಕ್ ಶರ್ಮಾ ಮತ್ತು ಶುಭ್ಮನ್ ಗಿಲ್ ಇನ್ನಿಂಗ್ಸ್ ಆರಂಭಿಸುವ ಜವಾಬ್ದಾರಿಯನ್ನು ಹೊರಲಿದ್ದಾರೆ. ಸೂರ್ಯಕುಮಾರ್ ಯಾದವ್ 3ನೇ ಕ್ರಮಾಂಕದಲ್ಲಿ ಆಡಿದರೆ, ನಂತರ ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ ಮತ್ತು ಅಕ್ಷರ್ ಪಟೇಲ್ ಆಡಲಿದ್ದಾರೆ. ಸ್ಪಿನ್ ಬೌಲರ್ಗಳಾಗಿ ವರುಣ್ ಚಕ್ರವರ್ತಿ ಮತ್ತು ಕುಲ್ದೀಪ್ ಯಾದವ್ ಆಡಲಿದ್ದು, ಜಸ್ಪ್ರೀತ್ ಬುಮ್ರಾ ವೇಗದ ಬೌಲಿಂಗ್ ದಾಳಿಯನ್ನು ಮುನ್ನಡೆಸಲಿದ್ದಾರೆ. ಬುಮ್ರಾಗೆ ಆಲ್‌ರೌಂಡರ್‌ಗಳಾದ ಪಾಂಡ್ಯ ಮತ್ತು ದುಬೆ ಬೆಂಬಲ ನೀಡಲಿದ್ದಾರೆ.
Asia cup 2025: ಭಾರತ- ಪಾಕ್ ಸೂಪರ್ 4 ಸುತ್ತಿನ ಪಂದ್ಯಕ್ಕೆ ಮ್ಯಾಚ್ ರೆಫರಿ ನೇಮಕ
ಭಾರತದ ಸಂಭಾವ್ಯ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ