AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ‘ತಲೆಕೆಡಿಸಿಕೊಳ್ಳಬಾರದು’; ಪಾಕ್ ಆರೋಪಗಳಿಗೆ ಬಿಸಿಸಿಐ ತಿರುಗೇಟು

India vs Pakistan Asia Cup Handshake Controversy: ಏಷ್ಯಾಕಪ್‌ನಲ್ಲಿ ಭಾರತೀಯ ಆಟಗಾರರು ಪಾಕಿಸ್ತಾನಿ ಆಟಗಾರರೊಂದಿಗೆ ಕೈಕುಲುಕದಿರುವುದು ವಿವಾದಕ್ಕೆ ಕಾರಣವಾಗಿದೆ. ಪಿಸಿಬಿ ಐಸಿಸಿಗೆ ದೂರು ನೀಡಿದ್ದು, ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಈ ವಿವಾದಕ್ಕೆ ಪ್ರತಿಕ್ರಿಯಿಸಿದ್ದಾರೆ. ಬಿಸಿಸಿಐ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ ಎಂದಿರುವ ಅವರು ಭಾರತದ ಗೆಲುವನ್ನು ಆಚರಿಸುವಂತೆ ಹೇಳಿದ್ದಾರೆ.

Asia Cup 2025: ‘ತಲೆಕೆಡಿಸಿಕೊಳ್ಳಬಾರದು’; ಪಾಕ್ ಆರೋಪಗಳಿಗೆ ಬಿಸಿಸಿಐ ತಿರುಗೇಟು
Ind Vs Pak
ಪೃಥ್ವಿಶಂಕರ
|

Updated on: Sep 17, 2025 | 4:03 PM

Share

ಸೆಪ್ಟೆಂಬರ್ 14 ರಂದು ನಡೆದಿದ್ದ ಏಷ್ಯಾಕಪ್ (Asia Cup 2025) ಪಂದ್ಯದಲ್ಲಿ ಭಾರತ, ಪಾಕಿಸ್ತಾನವನ್ನು (India vs Pakistan) ಏಳು ವಿಕೆಟ್‌ಗಳಿಂದ ಸೋಲಿಸಿತು. ಆದರೆ ಈ ಪಂದ್ಯ ತನ್ನ ಫಲಿತಾಂಶದಿಂದ ಚರ್ಚೆಯಾದ್ದುದ್ದಕ್ಕಿಂತ ವಿವಾದಗಳಿಂದಲೇ ಹೆಚ್ಚು ಸದ್ದು ಮಾಡುತ್ತಿದೆ. ಪಂದ್ಯ ಮುಗಿದ ಬಳಿಕ ಭಾರತೀಯ ಆಟಗಾರರು ಪಾಕಿಸ್ತಾನಿ ಕ್ರಿಕೆಟಿಗರೊಂದಿಗೆ ಕೈಕುಲುಕದೆ ಡ್ರೆಸ್ಸಿಂಗ್ ಕೊಠಡಿಗೆ ತೆರಳಿದ್ದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ಕೆರಳಿಸಿತ್ತು. ಇದರಿಂದ ಅಸಮಾಧಾನಗೊಂಡಿರುವ ಪಿಸಿಬಿ, ಟೀಂ ಇಂಡಿಯಾ ಬಗ್ಗೆ ಐಸಿಸಿಗೆ ದೂರು ನೀಡಿತ್ತು. ಇದೀಗ ಬಿಸಿಸಿಐ (BCCI) ಈ ವಿಷಯದ ಬಗ್ಗೆ ಮೊದಲ ಬಾರಿಗೆ ಮೌನ ಮುರಿದಿದೆ.

ಬಿಸಿಸಿಐ ಹೇಳಿದ್ದೇನು?

ಹ್ಯಾಂಡ್‌ಶೇಕ್ ವಿವಾದಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಹತ್ವದ ಹೇಳಿಕೆ ನೀಡಿದ್ದು, ‘ಭಾರತದ ಗೆಲುವನ್ನು ಆಚರಿಸುವತ್ತ ಎಲ್ಲರೂ ಗಮನಹರಿಸಬೇಕೆ ಹೊರತು ವಿವಾದದತ್ತ ಅಲ್ಲ. ಟೀಂ ಇಂಡಿಯಾ ಅದ್ಭುತ ಗೆಲುವು ಸಾಧಿಸಿದೆ ಎಂದು ನಾನು ಹೇಳಬಲ್ಲೆ. ಭಾರತ ಪಾಕಿಸ್ತಾನದ ವಿರುದ್ಧ ಏಕಪಕ್ಷೀಯ ಗೆಲುವು ಸಾಧಿಸಿದೆ. ನಾವು ಅದನ್ನು ಆನಂದಿಸಬೇಕು. ಅದನ್ನು ಬಿಟ್ಟು ಯಾವುದೇ ದೇಶ ಸೃಷ್ಟಿಸಿದ ಗದ್ದಲಕ್ಕೆ ನಾವು ಗಮನ ಕೊಡಬಾರದು. ಅದರಿಂದ ನಾವು ತಲೆಕೆಡಿಸಿಕೊಳ್ಳಬಾರದು. ನಮ್ಮ ಆಟಗಾರರ ಉತ್ತಮ ಪ್ರದರ್ಶನಕ್ಕಾಗಿ ನಾವು ಅವರನ್ನು ಪ್ರಶಂಸಿಸಬೇಕು ಮತ್ತು ಹೆಮ್ಮೆಪಡಬೇಕು. ಈ ಗೆಲುವಿನ ಓಟವು ಈ ಪಂದ್ಯಾವಳಿಯ ಅಂತಿಮ ಪಂದ್ಯದವರೆಗೂ ಮುಂದುವರಿಯುತ್ತದೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ.

ಯಾವುದೇ ಕಡ್ಡಾಯ ನಿಯಮವಿಲ್ಲ

ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಾತ್ರವಲ್ಲದೆ, ಬಿಸಿಸಿಐನ ಅಧಿಕಾರಿಯೊಬ್ಬರು ಈ ಬಗ್ಗೆ ಪಿಟಿಐಗೆ ತಿಳಿಸಿದ್ದು, ‘ಪಂದ್ಯದ ನಂತರ ಉಭಯ ತಂಡಗಳ ಆಟಗಾರರು ಕೈಕುಲುಕಲೇಬೇಕೆಂಬ ಯಾವುದೇ ಕಡ್ಡಾಯ ನಿಯಮವಿಲ್ಲ. ನೀವು ನಿಯಮ ಪುಸ್ತಕವನ್ನು ಓದಿದರೆ, ಎದುರಾಳಿ ತಂಡದೊಂದಿಗೆ ಕೈಕುಲುಕಲು ಅದರಲ್ಲಿ ಯಾವುದೇ ನಿಯಮ ಬರೆಯಲಾಗಿಲ್ಲ. ಇದು ಸಂವಹನದ ಒಂದು ಸಾಧನ ಮಾತ್ರ. ಹೀಗಾಗಿ ಈ ವಿಷಯದಲ್ಲಿ ಭಾರತ ತಂಡ ಯಾವುದೇ ತಪ್ಪು ಮಾಡಿಲ್ಲ ಎಂದಿದ್ದಾರೆ.

IND vs PAK: ಟೀಂ ಇಂಡಿಯಾ ನಾಯಕನನ್ನು ಹಂದಿ ಎಂದು ಕರೆದು ತನ್ನದೇ ಕಾರಣ ನೀಡಿದ ಪಾಕ್ ಆಟಗಾರ

ಭಾರತ- ಪಾಕ್ ನಡುವೆ 2ನೇ ಫೈಟ್?

ಪಾಕಿಸ್ತಾನ ತಂಡವು ಇಂದು ತನ್ನ ಕೊನೆಯ ಗುಂಪು ಹಂತದ ಪಂದ್ಯವನ್ನು ಯುಎಇ ವಿರುದ್ಧ ಆಡಬೇಕಾಗಿದೆ. ಈ ಪಂದ್ಯವನ್ನು ಗೆದ್ದರೆ ಪಾಕಿಸ್ತಾನ ಸೂಪರ್ -4 ಗೆ ಅರ್ಹತೆ ಪಡೆಯಬಹುದು. ಇದು ಸಾಧ್ಯವಾದರೆ, ಸೆಪ್ಟೆಂಬರ್ 21 ರಂದು ನಡೆಯಲಿರುವ ಸೂಪರ್ -4 ಸುತ್ತಿನ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮತ್ತೆ ಮುಖಾಮುಖಿಯಾಗಲಿವೆ. ಈ ಸೂಪರ್ -4 ಸುತ್ತಿನ ಪಂದ್ಯವು ಗ್ರೂಪ್ -ಎ ಯಿಂದ ಅರ್ಹತೆ ಪಡೆಯುವ ಅಗ್ರ ಎರಡು ತಂಡಗಳ ನಡುವೆ ನಡೆಯಲಿದೆ. ಭಾರತ ಈಗಾಗಲೇ ಈ ಸುತ್ತಿಗೆ ಅರ್ಹತೆ ಪಡೆದಿದ್ದು, ಪಾಕಿಸ್ತಾನದ ಇಂದಿನ ಪ್ರದರ್ಶನದ ಮೇಲೆ ಅದರ ಸ್ಥಾನ ಖಚಿತವಾಗಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ