ಭಾರತ vs ಪಾಕಿಸ್ತಾನ್ ಫೈನಲ್ ಪಂದ್ಯ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

ಏಷ್ಯನ್ ಗೇಮ್ಸ್​ ಟಿ20 ಟೂರ್ನಿಯ ಸೆಮಿಫೈನಲ್ ಪಂದ್ಯಗಳು ಮುಗಿದಿವೆ. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿ ಪಾಕಿಸ್ತಾನ್ ತಂಡ ಫೈನಲ್​ಗೇರಿದರೆ, ದ್ವಿತೀಯ ಸೆಮಿಫೈನಲ್ ಮ್ಯಾಚ್​ನಲ್ಲಿ ಶ್ರೀಲಂಕಾ ವಿರುದ್ಧ 124 ರನ್​ಗಳ ಅಮೋಘ ಜಯ ಸಾಧಿಸಿ ಟೀಮ್ ಇಂಡಿಯಾ ಫೈನಲ್​ಗೆ ಲಗ್ಗೆಯಿಟ್ಟಿದೆ.

ಭಾರತ vs ಪಾಕಿಸ್ತಾನ್ ಫೈನಲ್ ಪಂದ್ಯ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ
Ind Vs Pak
Image Credit source: x.com

Updated on: Oct 01, 2026 | 12:56 PM

ಕ್ರಿಕೆಟ್​ ಲೋಕದ ಅತ್ಯಂತ ರೋಮಾಂಚಕ ಮುಖಾಮುಖಿಗೆ ಜಪಾನ್​ನಲ್ಲಿ ವೇದಿಕೆ ಸಿದ್ಧವಾಗಿದೆ. 2026ರ ಏಷ್ಯನ್ ಗೇಮ್ಸ್‌ನ ಪುರುಷರ ಟಿ20 ಟೂರ್ನಿಯ ಫೈನಲ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿವೆ. ನಿಶ್ಶಿನ್‌ನಲ್ಲಿರುವ ಕೊರೋಗಿ ಸ್ಪೋರ್ಟ್ಸ್ ಪಾರ್ಕ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

ಭಾರತ vs ಪಾಕಿಸ್ತಾನ್ ಫೈನಲ್ ಪಂದ್ಯ ಯಾವಾಗ?

ಭಾರತ ಮತ್ತು ಪಾಕಿಸ್ತಾನ್ ನಡುವಣ ಏಷ್ಯನ್ ಗೇಮ್ಸ್​ ಫೈನಲ್ ಪಂದ್ಯವು ಅಕ್ಟೋಬರ್ 3 ರಂದು ನಡೆಯಲಿದೆ.

ಪಾಕಿಸ್ತಾನ್ vs ಭಾರತ ಫೈನಲ್ ಮ್ಯಾಚ್ ಎಷ್ಟು ಗಂಟೆಗೆ ಶುರು?

ಸಾಂಪ್ರದಾಯಿಕ ಎದುರಾಳಿಗಳ ನಡುವಣ ಈ ಪಂದ್ಯವು ಭಾರತೀಯ ಕಾಲಮಾನ (IST) ಬೆಳಗ್ಗೆ 10 ಗಂಟೆಗೆ ಶುರುವಾಗಲಿದೆ. ಇನ್ನು  ಟಾಸ್ ಪ್ರಕ್ರಿಯೆ ಬೆಳಗ್ಗೆ 9:30 ಕ್ಕೆ ನಡೆಯಲಿದೆ.

ಇಂಡೊ-ಪಾಕ್ ಫೈನಲ್ ಪಂದ್ಯ ನಡೆಯುವುದು ಎಲ್ಲಿ?

ಭಾರತ ಮತ್ತು ಪಾಕಿಸ್ತಾನ್ ನಡುವಣ ಫೈನಲ್ ಪಂದ್ಯಕ್ಕೆ ಜಪಾನ್​ನ ಕೊರೊಗಿ ಸ್ಪೋರ್ಟ್ಸ್ ಪಾರ್ಕ್ ಕ್ರಿಕೆಟ್ ಮೈದಾನ ಆತಿಥ್ಯವಹಿಸಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಇಂಡೊ-ಪಾಕ್ ನಡುವಣ ಫೈನಲ್ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ನ ಚಾನೆಲ್​ಗಳಲ್ಲಿ ವೀಕ್ಷಿಸಬಹುದು.
  • ಕನ್ನಡ, ತಮಿಳು ಮತ್ತು ತೆಲುಗು: ಸೋನಿ ಸ್ಪೋರ್ಟ್ಸ್ 4
  • ಇಂಗ್ಲಿಷ್: ಸೋನಿ ಸ್ಪೋರ್ಟ್ಸ್ 1 ಮತ್ತು ಸೋನಿ ಸ್ಪೋರ್ಟ್ಸ್ 5
  • ಹಿಂದಿ: ಸೋನಿ ಸ್ಪೋರ್ಟ್ಸ್ 3

ಇನ್ನು ಮೊಬೈಲ್, ಲ್ಯಾಪ್‌ಟಾಪ್ ಅಥವಾ ಸ್ಮಾರ್ಟ್ ಟಿವಿಗಳಲ್ಲಿ ಈ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಲು ಬಯಸುವವರು, ಸೋನಿ ಲಿವ್ (Sony LIV) ಆ್ಯಪ್ ಅಥವಾ ವೆಬ್‌ಸೈಟ್‌ ಮೂಲಕ ಲೈವ್ ಸ್ಟ್ರೀಮಿಂಗ್ ಆನಂದಿಸಬಹುದು.

ಯಾರಿಗೆ ಯಾವ ಪದಕ?

ಭಾರತ ಮತ್ತು ಪಾಕಿಸ್ತಾನ್ ತಂಡಗಳಿಗೆ ಪದಕ ಸಿಗುವುದು ಖಚಿತ. ಅಂದರೆ ಫೈನಲ್ ಮ್ಯಾಚ್​ನಲ್ಲಿ ಗೆಲ್ಲುವ ತಂಡಕ್ಕೆ ಚಿನ್ನದ ಪದಕ ಲಭಿಸಿದರೆ, ಸೋಲುವ ತಂಡಕ್ಕೆ ಬೆಳ್ಳಿ ಪದಕ ದೊರೆಯಲಿದೆ.

ಉಭಯ ತಂಡಗಳು:

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪಾನಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್​ಪ್ರೀತ್ ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಯಶ್ ಠಾಕೂರ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವಿಪ್ರಾಜ್ ನಿಗಮ್, ವೈಭವ್ ಸೂರ್ಯವಂಶಿ.

ಇದನ್ನೂ ಓದಿ: ರೋಹಿತ್ ಶರ್ಮಾಗೆ ಅಣಕಿಸಿದ ಜೇಡನ್ ಸೀಲ್ಸ್‌ ಬೆಂಡೆತ್ತಿದ ಕೊಹ್ಲಿ- ಗಿಲ್ ಜೋಡಿ!

ಪಾಕಿಸ್ತಾನ್ ಟಿ20 ತಂಡ: ಸಾಹಿಬ್‌ಝಾದ ಫರ್ಹಾನ್ (ನಾಯಕ), ಅಬ್ದುಲ್ ಸಮದ್ (ಉಪನಾಯಕ), ಸೈಮ್ ಅಯೂಬ್, ಹೈದರ್ ಅಲಿ, ಹಸನ್ ನವಾಝ್, ಸಾದ್ ಮಸೂದ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್), ಅರಾಫತ್ ಮಿನ್ಹಾಸ್, ಮಾಝ್ ಸದಾಕತ್, ಅಬ್ರಾರ್ ಅಹ್ಮದ್, ಸುಫ್ಯಾನ್ ಮುಖೀಮ್, ಅಹ್ಮದ್ ದಾನಿಯಾಲ್, ಆಕಿಫ್ ಜಾವೇದ್, ಅಲಿ ರಾಝ, ಮೊಹಮ್ಮದ್ ಸಲ್ಮಾನ್ ಮಿರ್ಝ.

 

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us