AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಎಲ್ಲಾ ದಾಖಲೆ ಉಡೀಸ್; ಭಾರತ- ಪಾಕ್ ಪಂದ್ಯವನ್ನು ವೀಕ್ಷಿಸಿದ್ದು ಎಷ್ಟು ಕೋಟಿ ಜನ ಗೊತ್ತಾ?

Champions Trophy 2025: ಭಾರತ ಮತ್ತು ಪಾಕಿಸ್ತಾನದ ನಡುವಿನ ಚಾಂಪಿಯನ್ಸ್ ಟ್ರೋಫಿ ಪಂದ್ಯವನ್ನು 60 ಕೋಟಿಗೂ ಹೆಚ್ಚು ಜನರು ವೀಕ್ಷಿಸಿರುವುದು ನೂತನ ದಾಖಲೆಯಾಗಿದೆ.ಇದಕ್ಕೂ ಮೊದಲು, ಭಾರತ-ಪಾಕಿಸ್ತಾನ 2023 ರ ಏಕದಿನ ವಿಶ್ವಕಪ್ ಪಂದ್ಯವನ್ನು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ 22.5 ಕೋಟಿ ವೀಕ್ಷಕರು ವೀಕ್ಷಿಸಿದ್ದರು.

IND vs PAK: ಎಲ್ಲಾ ದಾಖಲೆ ಉಡೀಸ್; ಭಾರತ- ಪಾಕ್ ಪಂದ್ಯವನ್ನು ವೀಕ್ಷಿಸಿದ್ದು ಎಷ್ಟು ಕೋಟಿ ಜನ ಗೊತ್ತಾ?
ಭಾರತ- ಪಾಕಿಸ್ತಾನ
ಪೃಥ್ವಿಶಂಕರ
|

Updated on: Feb 24, 2025 | 6:23 PM

Share

ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಅದ್ಭುತ ಗೆಲುವು ಸಾಧಿಸಿದೆ. ಅನೇಕ ದಾಖಲೆಗಳಿಗೆ ಸಾಕ್ಷಿಯಾದ ಈ ಪಂದ್ಯದಲ್ಲಿ ಟೀಂ ಇಂಡಿಯಾದ ಅನೇಕ ಆಟಗಾರರು ಹಲವು ದಾಖಲೆಗಳನ್ನು ನಿರ್ಮಿಸಿದರು. ಕೊಹ್ಲಿ, ರೋಹಿತ್, ಶ್ರೇಯಸ್ ತಮ್ಮ ಬ್ಯಾಟಿಂಗ್‌ನಲ್ಲಿ ಹಲವಾರು ದಾಖಲೆಗಳನ್ನು ಸೃಷ್ಟಿಸಿದರೆ, ಹಾರ್ದಿಕ್ ಪಾಂಡ್ಯ ಮತ್ತು ಕುಲ್ದೀಪ್ ಯಾದವ್ ಬೌಲಿಂಗ್‌ನಲ್ಲಿ ದಾಖಲೆಗಳನ್ನು ನಿರ್ಮಿಸಿದರು. ಇದೀಗ ಇದರ ಜೊತೆಗೆ ಈ ಉಭಯ ತಂಡಗಳ ನಡುವಿನ ಪಂದ್ಯದ ವೀಕ್ಷಣೆಯೂ ದೊಡ್ಡ ದಾಖಲೆಯನ್ನು ಮಾಡಿದೆ. ಈ ಪಂದ್ಯವನ್ನು ಬರೋಬ್ಬರಿ 60 ಕೋಟಿ ಜನರು ವೀಕ್ಷಿಸಿದ್ದು, ನೂತನ ದಾಖಲೆಯಾಗಿದೆ.

60 ಕೋಟಿಗೂ ಹೆಚ್ಚು ಜನರ ವೀಕ್ಷಣೆ

ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾದಾಗಲೆಲ್ಲಾ ಒಂದಿಲ್ಲೊಂದು ದಾಖಲೆ ಸೃಷ್ಟಿಯಾಗುತ್ತಲೇ ಇರುತ್ತದೆ. ಇದೀಗ ಈ ಉಭಯ ತಂಡಗಳ ಹೈವೋಲ್ಟೇಜ್ ಕದನವು ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಪಂದ್ಯವಾಗಿದೆ. ಜಿಯೋ ಹಾಟ್‌ಸ್ಟಾರ್​ನಲ್ಲಿ ನೇರ ಪ್ರಸಾರವಾದ ಈ ಪಂದ್ಯವನ್ನು ಬರೋಬ್ಬರಿ 60.2 ಕೋಟಿ ಜನರು ವೀಕ್ಷಿಸಿದ್ದಾರೆ.

22 ಕೋಟಿ ಜನರು ವೀಕ್ಷಿಸಿದ್ದು ದಾಖಲೆಯಾಗಿತ್ತು

ಇದಕ್ಕೂ ಮೊದಲು, ಭಾರತ-ಪಾಕಿಸ್ತಾನ 2023 ರ ಏಕದಿನ ವಿಶ್ವಕಪ್ ಪಂದ್ಯವನ್ನು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ 22.5 ಕೋಟಿ ವೀಕ್ಷಕರು ವೀಕ್ಷಿಸಿದ್ದರು. ಈ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿತ್ತು. ಕ್ರೀಡಾಂಗಣದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಸೇರಿದ್ದರು. ಏತನ್ಮಧ್ಯೆ, ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಕೋಟ್ಯಂತರ ಜನರು ಪಂದ್ಯವನ್ನು ವೀಕ್ಷಿಸಿದ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 191 ರನ್‌ಗಳಿಗೆ ಆಲೌಟ್ ಆದರೆ ಭಾರತ 31ನೇ ಓವರ್‌ನಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ ಗುರಿಯನ್ನು ಬೆನ್ನಟ್ಟಿತು.

ಚಾಂಪಿಯನ್ಸ್ ಟ್ರೋಫಿ ಪಂದ್ಯ ಹೀಗಿತ್ತು

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 241 ರನ್ ಗಳಿಸಿತ್ತು. ಪಾಕಿಸ್ತಾನ ಪರ ಸೌದ್ ಶಕೀಲ್ ಅತಿ ಹೆಚ್ಚು ರನ್ ಗಳಿಸಿ 62 ರನ್‌ಗಳ ಇನ್ನಿಂಗ್ಸ್ ಆಡಿದರು. ಗುರಿಯನ್ನು ಬೆನ್ನಟ್ಟಿದ ಭಾರತ ಕೇವಲ 42.3 ಓವರ್‌ಗಳಲ್ಲಿ ಪಂದ್ಯವನ್ನು ಗೆದ್ದುಕೊಂಡಿತು. ಭಾರತದ ಪರ ಕಿಂಗ್ ಕೊಹ್ಲಿ 111 ಎಸೆತಗಳಲ್ಲಿ ಅಜೇಯ 100 ರನ್ ಗಳಿಸಿದರು. ಕೊಹ್ಲಿಯನ್ನು ಹೊರತುಪಡಿಸಿ, ಶ್ರೇಯಸ್ ಅಯ್ಯರ್ ಕೂಡ 56 ರನ್​ಗಳ ಕಾಣಿಕೆ ನೀಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ