
ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಅದ್ಭುತ ಗೆಲುವು ಸಾಧಿಸಿದೆ. ಅನೇಕ ದಾಖಲೆಗಳಿಗೆ ಸಾಕ್ಷಿಯಾದ ಈ ಪಂದ್ಯದಲ್ಲಿ ಟೀಂ ಇಂಡಿಯಾದ ಅನೇಕ ಆಟಗಾರರು ಹಲವು ದಾಖಲೆಗಳನ್ನು ನಿರ್ಮಿಸಿದರು. ಕೊಹ್ಲಿ, ರೋಹಿತ್, ಶ್ರೇಯಸ್ ತಮ್ಮ ಬ್ಯಾಟಿಂಗ್‌ನಲ್ಲಿ ಹಲವಾರು ದಾಖಲೆಗಳನ್ನು ಸೃಷ್ಟಿಸಿದರೆ, ಹಾರ್ದಿಕ್ ಪಾಂಡ್ಯ ಮತ್ತು ಕುಲ್ದೀಪ್ ಯಾದವ್ ಬೌಲಿಂಗ್‌ನಲ್ಲಿ ದಾಖಲೆಗಳನ್ನು ನಿರ್ಮಿಸಿದರು. ಇದೀಗ ಇದರ ಜೊತೆಗೆ ಈ ಉಭಯ ತಂಡಗಳ ನಡುವಿನ ಪಂದ್ಯದ ವೀಕ್ಷಣೆಯೂ ದೊಡ್ಡ ದಾಖಲೆಯನ್ನು ಮಾಡಿದೆ. ಈ ಪಂದ್ಯವನ್ನು ಬರೋಬ್ಬರಿ 60 ಕೋಟಿ ಜನರು ವೀಕ್ಷಿಸಿದ್ದು, ನೂತನ ದಾಖಲೆಯಾಗಿದೆ.
ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾದಾಗಲೆಲ್ಲಾ ಒಂದಿಲ್ಲೊಂದು ದಾಖಲೆ ಸೃಷ್ಟಿಯಾಗುತ್ತಲೇ ಇರುತ್ತದೆ. ಇದೀಗ ಈ ಉಭಯ ತಂಡಗಳ ಹೈವೋಲ್ಟೇಜ್ ಕದನವು ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಪಂದ್ಯವಾಗಿದೆ. ಜಿಯೋ ಹಾಟ್‌ಸ್ಟಾರ್‌ನಲ್ಲಿ ನೇರ ಪ್ರಸಾರವಾದ ಈ ಪಂದ್ಯವನ್ನು ಬರೋಬ್ಬರಿ 60.2 ಕೋಟಿ ಜನರು ವೀಕ್ಷಿಸಿದ್ದಾರೆ.
ಇದಕ್ಕೂ ಮೊದಲು, ಭಾರತ-ಪಾಕಿಸ್ತಾನ 2023 ರ ಏಕದಿನ ವಿಶ್ವಕಪ್ ಪಂದ್ಯವನ್ನು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ 22.5 ಕೋಟಿ ವೀಕ್ಷಕರು ವೀಕ್ಷಿಸಿದ್ದರು. ಈ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿತ್ತು. ಕ್ರೀಡಾಂಗಣದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಸೇರಿದ್ದರು. ಏತನ್ಮಧ್ಯೆ, ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಕೋಟ್ಯಂತರ ಜನರು ಪಂದ್ಯವನ್ನು ವೀಕ್ಷಿಸಿದ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 191 ರನ್‌ಗಳಿಗೆ ಆಲೌಟ್ ಆದರೆ ಭಾರತ 31ನೇ ಓವರ್‌ನಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ ಗುರಿಯನ್ನು ಬೆನ್ನಟ್ಟಿತು.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 241 ರನ್ ಗಳಿಸಿತ್ತು. ಪಾಕಿಸ್ತಾನ ಪರ ಸೌದ್ ಶಕೀಲ್ ಅತಿ ಹೆಚ್ಚು ರನ್ ಗಳಿಸಿ 62 ರನ್‌ಗಳ ಇನ್ನಿಂಗ್ಸ್ ಆಡಿದರು. ಗುರಿಯನ್ನು ಬೆನ್ನಟ್ಟಿದ ಭಾರತ ಕೇವಲ 42.3 ಓವರ್‌ಗಳಲ್ಲಿ ಪಂದ್ಯವನ್ನು ಗೆದ್ದುಕೊಂಡಿತು. ಭಾರತದ ಪರ ಕಿಂಗ್ ಕೊಹ್ಲಿ 111 ಎಸೆತಗಳಲ್ಲಿ ಅಜೇಯ 100 ರನ್ ಗಳಿಸಿದರು. ಕೊಹ್ಲಿಯನ್ನು ಹೊರತುಪಡಿಸಿ, ಶ್ರೇಯಸ್ ಅಯ್ಯರ್ ಕೂಡ 56 ರನ್‌ಗಳ ಕಾಣಿಕೆ ನೀಡಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ