AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಭಾರತ-ಪಾಕಿಸ್ತಾನ್ ಯುದ್ಧ ಭೀತಿ: ಐಪಿಎಲ್​ಗೆ ಬೀಳುತ್ತಾ ಬ್ರೇಕ್?

Operation Sindoor: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಹಲವಾರು ಭಯೋತ್ಪಾದಕ ಶಿಬಿರಗಳ ಮೇಲೆ ಬುಧವಾರ ನಸುಕಿನಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ. ‘‘ಆಪರೇಷನ್ ಸಿಂಧೂರ್’’ ಹೆಸರಿನಲ್ಲಿ ನಡೆಸಲಾದ ಈ ಕಾರ್ಯಾಚರಣೆಯಲ್ಲಿ ಹಲವು ಉಗ್ರರು ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

IPL 2025: ಭಾರತ-ಪಾಕಿಸ್ತಾನ್ ಯುದ್ಧ ಭೀತಿ: ಐಪಿಎಲ್​ಗೆ ಬೀಳುತ್ತಾ ಬ್ರೇಕ್?
Air Force - Ipl 2025
ಝಾಹಿರ್ ಯೂಸುಫ್
|

Updated on:May 07, 2025 | 9:06 AM

Share

ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ (Operation Sindoor) ಮೂಲಕ ಸೇಡು ತೀರಿಸಿಕೊಂಡಿದೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Attack) ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಹತರಾಗಿದ್ದರು. ಇದಕ್ಕೆ ಪ್ರತಿಯಾಗಿ ಇದೀಗ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಶುರು ಮಾಡಿದ್ದು, ಅದರಂತೆ ಮೇ 7 ರ ನಸುಕಿನಲ್ಲಿ ಪಾಕ್ ಮೇಲೆ ಪ್ರತೀಕಾರದ ದಾಳಿ ನಡೆಸಿದೆ. ಈ ದಾಳಿ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನ್ ನಡುವೆ ಯುದ್ಧದ ಭೀತಿ ಎದುರಾಗಿದೆ. ಉಭಯ ದೇಶಗಳ ನಡುವಣ ಉದ್ವಿಗ್ನತೆ ಹೆಚ್ಚಾದ ಹಿನ್ನಲೆಯಲ್ಲಿ ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ ಮೇಲೂ ಕಾರ್ಮೋಡ ಆವರಿಸಿದೆ.

ಪಂದ್ಯದ ಬೆನ್ನಲ್ಲೇ ಭಾರತದ ವಾಯುದಾಳಿ:

ಭಾರತವು ಮಧ್ಯರಾತ್ರಿ ಪಿಒಕೆಯಲ್ಲಿನ 9 ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಿದೆ. ಈ ವೇಳೆ ಐಪಿಎಲ್ 2025 ರ 56ನೇ ಪಂದ್ಯ ಮುಗಿದಿತ್ತು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವು ಮುಗಿದ ಕೆಲವೇ ಗಂಟೆಗಳ ಬಳಿಕ ಭಾರತವು ಪಿಒಕೆಯಲ್ಲಿನ ಉಗ್ರರ ಅಡುಗುತಾಣಗಳ ಮೇಲೆ ದಾಳಿ ನಡೆಸಿದೆ.

ಐಪಿಎಲ್​ ಏನಾಗಬಹುದು?

ಭಾರತ ಮತ್ತು ಪಾಕಿಸ್ತಾನ್ ನಡುವೆ ಯುದ್ಧ ಆರಂಭವಾದರೆ, ಐಪಿಎಲ್​​ಗೆ ಬ್ರೇಕ್ ಬೀಳಲಿದೆ. ಈಗಾಗಲೇ ಬಿಸಿಸಿಐ ಮತ್ತು ಐಪಿಎಲ್ ವ್ಯವಸ್ಥಾಪಕರು ಈ ಬಗ್ಗೆ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ. ಐಪಿಎಲ್ ವ್ಯವಸ್ಥಾಪಕರು ಸದ್ಯದ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದು, ಕೇಂದ್ರ ಸರ್ಕಾರ ಸೂಚನೆ ನೀಡಿದರೆ ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಿದ್ದಾರೆ.

ಇದನ್ನೂ ಓದಿ
Image
ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ
Image
IPL 2025: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು
Image
IPL 2025: ಕರುಣ್ ನಾಯರ್ ಡಕೌಟ್: ಈ ಬಾರಿ ಮುಂಬೈ ಇಂಡಿಯನ್ಸ್ ಚಾಂಪಿಯನ್ಸ್?
Image
IPL ನಲ್ಲಿ ಬದಲಾವಣೆ: ರೌಂಡ್ ರಾಬಿನ್ ಸ್ವರೂಪ, ಒಂದು ತಂಡಕ್ಕೆ 18 ಪಂದ್ಯ

ಪ್ರಸ್ತುತ ಪರಿಸ್ಥಿತಿ ಸಾಮಾನ್ಯವಾಗಿದ್ದು, ಹೀಗಾಗಿ ಐಪಿಎಲ್‌ನ ಉಳಿದ ಪಂದ್ಯಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ. ಅಂದರೆ ಸದ್ಯದ ಪರಿಸ್ಥಿತಿಯಲ್ಲಿ ಟೂರ್ನಿಯನ್ನು ನಿಲ್ಲಿಸಲಾಗುತ್ತಿಲ್ಲ. ಬದಲಾಗಿ ಕೇಂದ್ರ ಸರ್ಕಾರ ಅಥವಾ ಇಂಡಿಯನ್ ಆರ್ಮಿ ಸೂಚನೆ ನೀಡಿದರೆ ಮಾತ್ರ ಟೂರ್ನಿಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ವಿರಾಟ್ ಕೊಹ್ಲಿ ಕೋಡಂಗಿ… ಅವನ ಅಭಿಮಾನಿಗಳು ಅದಕ್ಕಿಂತ ದೊಡ್ಡ ಕೋಡಂಗಿಗಳು!

IPL 2025 ಮುಗಿಯುವುದು ಯಾವಾಗ?

ಇಂಡಿಯನ್ ಪ್ರೀಮಿಯರ್ ಲೀಗ್​ನ ಲೀಗ್ ಹಂತದ 56 ಪಂದ್ಯಗಳು ಮುಗಿದಿವೆ. ಇನ್ನೂ 18 ಪಂದ್ಯಗಳು ಬಾಕಿಯಿದೆ. ಅಲ್ಲದೆ ಟೂರ್ನಿಯು ಮೇ 25 ರಂದು ಮುಗಿಯಲಿದೆ. ಒಂದು ವೇಳೆ ಭಾರತ-ಪಾಕಿಸ್ತಾನ್ ನಡುವೆ ಯುದ್ಧ ನಡೆದರೆ, ಐಪಿಎಲ್​ ಪಂದ್ಯಾವಳಿಯನ್ನು ಮುಂದೂಡಲಾಗುತ್ತದೆ. ಹೀಗಾಗಿ ಕೇಂದ್ರ ಸರ್ಕಾರದ ಸೂಚನೆಯನ್ನು ಐಪಿಎಲ್ ವ್ಯವಸ್ಥಾಪಕರು ಎದುರು ನೋಡುತ್ತಿದ್ದು, ಅದುವರೆಗೆ ಐಪಿಎಲ್ ಪಂದ್ಯಾವಳಿ ಮುಂದುವರೆಸಲು ನಿರ್ಧರಿಸಲಾಗಿದೆ.

Published On - 9:04 am, Wed, 7 May 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ