India vs Pakistan: ಪಾಕ್ ವಿರುದ್ಧ ಭಾರತಕ್ಕೆ ಜಯ: 7.6 ಕೋಟಿ ರೂ. ಗೆದ್ದ ಡ್ರೇಕ್

India vs Pakistan: ನ್ಯೂಯಾರ್ಕ್​ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ 19ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 19 ಓವರ್​ಗಳಲ್ಲಿ 119 ರನ್​ಗಳಿಸಿ ಆಲೌಟ್ ಆಗಿತ್ತು. 120 ರನ್​ಗಳ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು 113 ರನ್​ಗಳಿಸಲಷ್ಡೇ ಶಕ್ತರಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿದೆ.

India vs Pakistan: ಪಾಕ್ ವಿರುದ್ಧ ಭಾರತಕ್ಕೆ ಜಯ: 7.6 ಕೋಟಿ ರೂ. ಗೆದ್ದ ಡ್ರೇಕ್
IND vs PAK
Follow us
|

Updated on:Jun 10, 2024 | 12:02 PM

T20 World Cup 2024: ಭಾರತ ಮತ್ತು ಪಾಕಿಸ್ತಾನ್ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯದಲ್ಲಿ ಬಾಜಿ ಕಟ್ಟಿದ್ದ ಕೆನಡಾದ ಖ್ಯಾತ ರಾಪರ್ ಆಬ್ರೆ ಡ್ರೇಕ್ ಗ್ರಹಾಂ ಬರೋಬ್ಬರಿ 7.6 ಕೋಟಿ ರೂ. ಜೇಬಿಗಿಳಿಸಿಕೊಂಡಿದ್ದಾರೆ. ಇಂಡೊ-ಪಾಕ್ ನಡುವಣ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಲಿದೆ ಎಂದು ಡ್ರೇಕ್ 650,000 ಯುಎಸ್ ಡಾಲರ್ ಬೆಟ್ ಕಟ್ಟಿದ್ದರು. ಅಂದರೆ ಭಾರತೀಯ ರೂ. ಮೌಲ್ಯ ಸುಮಾರು 5.42 ಕೋಟಿ ರೂಪಾಯಿ.

ಇತ್ತ ಪಾಕ್ ತಂಡವನ್ನು ಭಾರತ ಬಗ್ಗು ಬಡಿಯುತ್ತಿದ್ದಂತೆ ಅತ್ತ ಡ್ರೇಕ್ ಬಾಜಿಯಲ್ಲಿ ಗೆದ್ದಿದ್ದಾರೆ. ಅದರಂತೆ ಒಟ್ಟು ಮೊತ್ತವಾಗಿ 910,000 ಯುಎಸ್​ ಡಾಲರ್ ಗೆದ್ದಿದ್ದಾರೆ. ಅಂದರೆ ಡ್ರೇಕ್  ಭಾರತೀಯ ರೂಪಾಯಿ ಮೌಲ್ಯ ಬರೋಬ್ಬರಿ 7.6 ಕೋಟಿ ರೂ. ಪಡೆದಿದ್ದಾರೆ.

ಅಂದಹಾಗೆ ಕೆನಡಾ ಗಾಯಕ ಹೀಗೆ ಬೆಟ್ ಕಟ್ಟುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದಿನಿಂದಲೂ ಬಾಜಿಯಲ್ಲಿ ತೊಡಗಿಸಿಕೊಂಡಿರುವ ಡ್ರೇಕ್ ಗ್ರಹಾಂ ಐಪಿಎಲ್​ನಿಂದ 2.5 ಕೋಟಿ ರೂ. ಸಂಪಾದಿಸಿದ್ದರು.

ಐಪಿಎಲ್ 2024 ರ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಗೆಲ್ಲಲಿದೆ ಎಂದು ಡ್ರೇಕ್ 2.5 ಕೋಟಿ ರೂ. ಬೆಟ್ ಕಟ್ಟಿದ್ದರು. ಅದರಂತೆ ಫೈನಲ್ ಪಂದ್ಯದಲ್ಲಿ ಕೆಕೆಆರ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸುವುದರೊಂದಿಗೆ ಸುಮಾರು 4.5 ಕೋಟಿ ರೂ. ಬೆಟ್ ಮೊತ್ತ ಪಡೆದಿದ್ದರು.

ಇದೀಗ ಪಾಕಿಸ್ತಾನ್ ಮತ್ತು ಭಾರತ ನಡುವಣ ಪಂದ್ಯದಲ್ಲೂ ಅದೃಷ್ಟ ಪರೀಕ್ಷೆಗೆ ಇಳಿದು ಆಬ್ರೆ ಡ್ರೇಕ್ ಗ್ರಹಾಂ 7.6 ಕೋಟಿ ರೂ. ಜೇಬಿಗಿಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಗೆದ್ದು ಬೀಗಿದ ಭಾರತ:

ನ್ಯೂಯಾರ್ಕ್​ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ 19ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 19 ಓವರ್​ಗಳಲ್ಲಿ 119 ರನ್​ಗಳಿಸಿ ಆಲೌಟ್ ಆಗಿತ್ತು.

120 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು ಟೀಮ್ ಇಂಡಿಯಾದ ಕರಾರುವಾಕ್ ದಾಳಿಗೆ ರನ್​ಗಳಿಸಲು ಪರದಾಡಿದರು. ಅಲ್ಲದೆ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 113 ರನ್​ಗಳಿಸಿ 6 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ಕೆನಡಾ ಗಾಯಕ ಆಬ್ರೆ ಡ್ರೇಕ್ ಗ್ರಹಾಂ 7.6 ಕೋಟಿ ರೂ. ಬೆಟ್ಟಿಂಗ್ ಮೊತ್ತವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: T20 World Cup 2024: ಸೂಪರ್-8 ಹಂತಕ್ಕೇರಲು ಪಾಕಿಸ್ತಾನ್ ತಂಡಕ್ಕೆ ಇನ್ನೂ ಇದೆ ಚಾನ್ಸ್​

ಗಮನಿಸಿ: ಟಿವಿ9 ಕನ್ನಡ ಯಾವುದೇ ರೀತಿಯ ಬೆಟ್ಟಿಂಗ್ ಅನ್ನು ಬೆಂಬಲಿಸುತ್ತಿಲ್ಲ.

Published On - 11:59 am, Mon, 10 June 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್