IND vs PAK: 6 ಸಿಕ್ಸ್ ಹೊಡೆಯುವುದಿರಲಿ, ಖಾತೆಯನ್ನೂ ತೆರೆಯದ ಸೈಮ್ ಅಯೂಬ್; ವಿಡಿಯೋ ನೋಡಿ
Saim Ayub Golden Duck: ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಪಾಕಿಸ್ತಾನ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿತು. ಆದರೆ ಪಾಕಿಸ್ತಾನದ ಆರಂಭಿಕ ಆಟಗಾರ ಸೈಮ್ ಅಯೂಬ್ ಮೊದಲ ಎಸೆತದಲ್ಲೇ ಔಟ್ ಆದರು (ಗೋಲ್ಡನ್ ಡಕ್).ವಾಸ್ತವವಾಗಿ ಕೆಲವೇ ದಿನಗಳ ಹಿಂದೆ ಪಾಕಿಸ್ತಾನದ ಮಾಜಿ ಆಟಗಾರ ತನ್ವೀರ್ ಅಹ್ಮದ್, ಸೈಮ್ ಅಯೂಬ್, ಜಸ್ಪ್ರೀತ್ ಬುಮ್ರಾ ಅವರ ಒಂದೇ ಓವರ್ನಲ್ಲಿ 6 ಸಿಕ್ಸರ್‌ಗಳನ್ನು ಬಾರಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದ್ದರು. ಆದರೆ ಅವರಿಗೆ ಖಾತೆಯನ್ನು ತೆರೆಯಲಾಗಲಿಲ್ಲ.

ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಿನ ಏಷ್ಯಾಕಪ್ (Asia Cup 2025) ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ನಾಯಕ ಸಲ್ಮಾನ್ ಅಲಿ ಆಘಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಉಭಯ ತಂಡಗಳು ಮೊದಲ ಪಂದ್ಯವನ್ನು ಗೆದ್ದು ಬರುತ್ತಿರುವ ಕಾರಣ ತಮ್ಮ ತಮ್ಮ ಪ್ಲೇಯಿಂಗ್ 11 ನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಆದಾಗ್ಯೂ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಪಾಕ್ ತಂಡಕ್ಕೆ ನಿರೀಕ್ಷಿತ ಆರಂಭ ಸಿಕ್ಕಿಲ್ಲ. ಇನ್ನಿಂಗ್ಸ್‌ನ ಮೊದಲ ಓವರ್ನ ಮೊದಲ ಎಸೆತದಲ್ಲೇ ಪಾಕ್ ಆರಂಭಿಕ ಸೈಮ್ ಅಯೂಬ್ ಮತ್ತೊಮ್ಮೆ ಗೋಲ್ಡನ್ ಡಕ್ಗೆ ವಿಕೆಟ್ ಒಪ್ಪಿಸಿದ್ದಾರೆ.
ಮೊದಲ ಎಸೆತದಲ್ಲೇ ಔಟ್
ಟೀಂ ಇಂಡಿಯಾ ಪರ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮೊದಲ ಓವರ್ ಬೌಲಿಂಗ್ ಮಾಡುವ ಜವಾಬ್ದಾರಿ ಪಡೆದರು. ಓವರ್ನ ಮೊದಲ ಎಸೆತವನ್ನು ವೈಡ್ ಬಾಲ್ ಮಾಡಿದ ಹಾರ್ದಿಕ್ ನಂತರದ ಎಸೆತದಲ್ಲೇ ವಿಕೆಟ್ ಉರುಳಿಸಿದರು. ಪಾಕ್ ಪರ ಸ್ಟ್ರೈಕ್ನಲ್ಲಿದ್ದ ಆರಂಭಿಕ ಸ್ಯಾಮ್ ಅಯೂಬ್, ಬುಮ್ರಾಗೆ ಸುಲಭ ಕ್ಯಾಚ್ ನೀಡಿ ಔಟಾದರು. ಸ್ಯಾಮ್ಗೆ ತಮ್ಮ ಖಾತೆಯನ್ನು ತೆರೆಯಲೂ ಸಾಧ್ಯವಾಗಲಿಲ್ಲ.
Aapka Mother of all Rivalries mein 𝘏𝘈𝘙𝘋𝘐𝘒 swaagat 😉
Watch #INDvPAK LIVE NOW on the Sony Sports Network TV channels & Sony LIV.#SonySportsNetwork #DPWorldAsiaCup2025 pic.twitter.com/AEQE0TLQju
— Sony Sports Network (@SonySportsNetwk) September 14, 2025
ಬುಮ್ರಾಗೆ 6 ಎಸೆತಗಳಲ್ಲಿ 6 ಸಿಕ್ಸರ್
ವಾಸ್ತವವಾಗಿ ಕೆಲವೇ ದಿನಗಳ ಹಿಂದೆ ಪಾಕಿಸ್ತಾನದ ಮಾಜಿ ಆಟಗಾರ ತನ್ವೀರ್ ಅಹ್ಮದ್, ‘ಪ್ರಸ್ತುತ ಪಾಕ್ ತಂಡದಲ್ಲಿರುವ ಆರಂಭಿಕ ಆಟಗಾರ ಸೈಮ್ ಅಯೂಬ್, ಜಸ್ಪ್ರೀತ್ ಬುಮ್ರಾ ಅವರ ಒಂದೇ ಓವರ್ನಲ್ಲಿ 6 ಸಿಕ್ಸರ್‌ಗಳನ್ನು ಬಾರಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದ್ದರು. ಆದರೆ ಆಯೂಬ್ಗೆ ಬುಮ್ರಾ ಓವರ್ನಲ್ಲಿ ಆಡುವ ಅವಕಾಶವೇ ಸಿಗಲಿಲ್ಲ. ಕಾಕತಾಳೀಯ ಸಂಗತಿಯೆಂದರೆ ಯಾವ ಬುಮ್ರಾಗೆ 6 ಸಿಕ್ಸರ್ ಹೊಡೆಯುತ್ತಾರೆ ಎಂದಿದ್ದರೋ ಅದೇ ಬುಮ್ರಾಗೆ ಕ್ಯಾಚ್ ನೀಡಿ ಸೈಮ್ ಅಯೂಬ್ ಔಟಾಗಿದ್ದಾರೆ.
ವಾಸ್ತವವಾಗಿ ಏಷ್ಯಾಕಪ್‌ನಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿ ಸೈಮ್ ಅಯೂಬ್ಗೆ ತಮ್ಮ ಖಾತೆಯನ್ನು ತೆರೆಯಲಾಗಿಲ್ಲ. ಇಲ್ಲಿ ಗಮನಿಸಬೇಕಾದ ಸಂಗತಿಯೆಂದರೆ, ಎರಡೂ ಪಂದ್ಯಗಳಲ್ಲಿ ಆಯೂಬ್ ಗೋಲ್ಡನ್ ಡಕ್ಗೆ ಅಂದರೆ ಮೊದಲ ಎಸೆತದಲ್ಲೇ ಔಟಾಗಿದ್ದಾರೆ.
ಭಾರತದ ಪ್ಲೇಯಿಂಗ್ 11: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
ಪಾಕಿಸ್ತಾನದ ಪ್ಲೇಯಿಂಗ್ 11: ಸೈಮ್ ಅಯೂಬ್, ಸಾಹಿಬ್‌ಜಾದಾ ಫರ್ಹಾನ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಫಖರ್ ಜಮಾನ್, ಸಲ್ಮಾನ್ ಆಘಾ (ನಾಯಕ), ಹಸನ್ ನವಾಜ್, ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ಸುಫಿಯಾನ್ ಮುಕೀಮ್, ಅಬ್ರಾರ್ ಅಹ್ಮದ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:27 pm, Sun, 14 September 25
