India vs Pakistan: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ? ಇಲ್ಲಿದೆ ಸಂಪೂರ್ಣ ಮಾಹಿತಿ

India vs Pakistan: ಭಾರತ-ಪಾಕಿಸ್ತಾನ್ ನಡುವಣ ಕೊನೆಯ ಮುಖಾಮುಖಿಯನ್ನು ಟೀಮ್ ಇಂಡಿಯಾ ಕ್ರಿಕೆಟ್ ಪ್ರೇಮಿಗಳು ಯಾವತ್ತೂ ಮರೆಯಲು ಸಾಧ್ಯವಿಲ್ಲ.

India vs Pakistan: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ? ಇಲ್ಲಿದೆ ಸಂಪೂರ್ಣ ಮಾಹಿತಿ
India vs Pakistan
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 27, 2022 | 12:25 PM

Asia Cup 2022: ಬದ್ಧವೈರಿಗಳ ಚುಟುಕು ಕ್ರಿಕೆಟ್ ಕದನಕ್ಕಾಗಿ ವೇದಿಕೆ ಸಿದ್ದವಾಗಿದೆ. ದುಬೈ ಇಂಟರ್​ನ್ಯಾಷನಲ್ ಮೈದಾನದಲ್ಲಿ ಭಾನುವಾರ ನಡೆಯಲಿರುವ ಪಂದ್ಯದಲ್ಲಿ ಮುಖಾಮುಖಿಯಾಗುವ ಮೂಲಕ ಭಾರತ-ಪಾಕಿಸ್ತಾನ್ (India vs Pakistan) ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಉಭಯ ತಂಡಗಳಿಗೂ ಇದು ಮೊದಲ ಪಂದ್ಯವಾಗಿರುವುರಿಂದ ಗೆಲುವಿನೊಂದಿಗೆ ಶುಭಾರಂಭ ಮಾಡುವ ಇರಾದೆಯಲ್ಲಿದೆ. ಆದರೆ ಮೇಲ್ನೋಟಕ್ಕೆ ಎರಡೂ ತಂಡಗಳು ಬಲಿಷ್ಠವಾಗಿರುವ ಕಾರಣ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಇದಾಗ್ಯೂ ಈ ಬಾರಿ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ. ಅತ್ತ ಏಷ್ಯಾಕಪ್ ಇತಿಹಾಸದ ಅಂಕಿ ಅಂಶಗಳು ಕೂಡ ಭಾರತ ತಂಡದ ಈ ಆತ್ಮ ವಿಶ್ವಾಸವನ್ನು ಹೆಚ್ಚಿಸಿದೆ. ಏಕೆಂದರೆ ಉಭಯ ತಂಡಗಳು ಏಷ್ಯಾಕಪ್​ನಲ್ಲಿ ಇದುವರೆಗೆ 14 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಯಾರು ಮೇಲುಗೈ ಸಾಧಿಸಿದ್ದರು, ಉಭಯ ತಂಡಗಳ ಟಾಪ್ ರನ್ ಸ್ಕೋರರ್ ಯಾರು ಎಂಬಿತ್ಯಾದಿಗಳ ಸಂಪೂರ್ಣ ಮಾಹಿತಿ ಇಲ್ಲಿದೆ…

ಟಿ20 ದಾಖಲೆ:

ಈ ಬಾರಿ ಏಷ್ಯಾಕಪ್ ಟಿ20 ಮಾದರಿಯಲ್ಲಿ ನಡೆಯಲಿದೆ. ಈ ಸ್ವರೂಪದಲ್ಲಿ ಭಾರತ ಪಾಕಿಸ್ತಾನ್ ತಂಡಗಳು 8 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಪಾಕ್ ಗೆದ್ದಿದ್ದು ಕೇವಲ 2 ಬಾರಿ ಮಾತ್ರ. ಅಂದರೆ 6 ಬಾರಿ ಪಾಕಿಸ್ತಾನ್ ತಂಡವನ್ನು ಭಾರತ ಬಗ್ಗು ಬಡಿದಿದೆ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಏಷ್ಯಾಕಪ್ ದಾಖಲೆ:

ಏಷ್ಯಾಕಪ್​ನಲ್ಲಿ ಭಾರತ-ಪಾಕಿಸ್ತಾನ್ ಇದುವರೆಗೆ 14 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 8 ಪಂದ್ಯಗಳಲ್ಲಿ ಪಾಕ್ ತಂಡಕ್ಕೆ ಸೋಲುಣಿಸಿದೆ. ಇನ್ನು ಪಾಕಿಸ್ತಾನ್ ಗೆದ್ದಿದ್ದು ಕೇವಲ 5 ಪಂದ್ಯಗಳಲ್ಲಿ ಮಾತ್ರ. ಹಾಗೆಯೇ 1997 ರಲ್ಲಿ ಒಂದು ಪಂದ್ಯವು ರದ್ದಾಗಿತ್ತು.

ಅತಿ ಹೆಚ್ಚು ರನ್ ಗಳಿಸಿದವರು:

ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ನಾಯಕ ರೋಹಿತ್ ಶರ್ಮಾ 132 ಪಂದ್ಯಗಳಲ್ಲಿ 140.26 ಸ್ಟ್ರೈಕ್ ರೇಟ್‌ನಲ್ಲಿ 3487 ರನ್​ಗಳಿಸಿದ್ದಾರೆ. ಭಾರತದ ಎರಡನೇ ಅತಿ ಹೆಚ್ಚು ರನ್ ಸ್ಕೋರರ್, ವಿರಾಟ್ ಕೊಹ್ಲಿ. ಕಿಂಗ್ ಕೊಹ್ಲಿ 99 ಪಂದ್ಯಗಳಲ್ಲಿ 50.12 ರ 137.66 ಸ್ಟ್ರೈಕ್ ರೇಟ್‌ನಲ್ಲಿ 3308 ರನ್‌ಗಳನ್ನು ಗಳಿಸಿದ್ದಾರೆ. ಪಾಕಿಸ್ತಾನದ ಪರ ನಾಯಕ ಬಾಬರ್ ಅಜಮ್ 74 ಪಂದ್ಯಗಳಲ್ಲಿ 129.44 ಸ್ಟ್ರೈಕ್ ರೇಟ್‌ನಲ್ಲಿ 2686 ರನ್‌ಗಳೊಂದಿಗೆ ಈ ಪಟ್ಟಿಯಲ್ಲಿದ್ದಾರೆ.

ಅತಿ ಹೆಚ್ಚು ವಿಕೆಟ್ ಪಡೆದವರು:

ಸ್ಪಿನ್ನರ್‌ಗಳು ಎರಡೂ ತಂಡಗಳಲ್ಲಿ ವಿಕೆಟ್ ಟೇಕಿಂಗ್ ವಿಷಯದಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ಪರ ಯುಜ್ವೇಂದ್ರ ಚಹಾಲ್ 62 ಟಿ20 ಪಂದ್ಯಗಳಲ್ಲಿ 79 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ ಪಾಕಿಸ್ತಾನದ ಉಪನಾಯಕ ಶಾದಾಬ್ ಖಾನ್ ಅವರು 64 ಪಂದ್ಯಗಳಲ್ಲಿ 73 ವಿಕೆಟ್ ಕಬಳಿಸುವ ಮೂಲಕ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಇನ್ನು ಭಾರತದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಅವರು 72 ಟಿ20 ಪಂದ್ಯಗಳಲ್ಲಿ 73 ವಿಕೆಟ್ ಉರುಳಿಸಿದ್ದಾರೆ.

ಗೆಲುವಿನ ನಾಗಾಲೋಟ:

ಪಾಕಿಸ್ತಾನವು 2022 ರಲ್ಲಿ ಒಂಬತ್ತು ಏಕದಿನ ಮತ್ತು ಕೇವಲ ಒಂದು ಟಿ20 ಪಂದ್ಯವನ್ನು ಆಡಿದೆ. ಇದಕ್ಕೆ ತದ್ವಿರುದ್ಧವಾಗಿ ಭಾರತ, ಈ ವರ್ಷ 15 ಏಕದಿನ ಮತ್ತು 21 ಟಿ20 ಪಂದ್ಯಗಳನ್ನಾಡಿದೆ. ಟಿ20 ಯಲ್ಲಿ ಭಾರತವು 21 ಪಂದ್ಯಗಳಲ್ಲಿ 16 ಪಂದ್ಯಗಳನ್ನು ಗೆದ್ದಿದೆ. ಲಾಹೋರ್‌ನಲ್ಲಿ ಆಡಿದ ಏಕೈಕ ಟಿ20 ಪಂದ್ಯದಲ್ಲಿ ​ಆಸ್ಟ್ರೇಲಿಯಾ ವಿರುದ್ಧ ಪಾಕಿಸ್ತಾನವು ಮೂರು ವಿಕೆಟ್‌ಗಳಿಂದ ಸೋತಿತ್ತು.

ಕೊನೆಯ ಮುಖಾಮುಖಿ:

ಭಾರತ-ಪಾಕಿಸ್ತಾನ್ ನಡುವಣ ಕೊನೆಯ ಮುಖಾಮುಖಿಯನ್ನು ಟೀಮ್ ಇಂಡಿಯಾ ಕ್ರಿಕೆಟ್ ಪ್ರೇಮಿಗಳು ಯಾವತ್ತೂ ಮರೆಯಲು ಸಾಧ್ಯವಿಲ್ಲ. 2021 ರ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು 10 ವಿಕೆಟ್​ಗಳಿಂದ ಹೀನಾಯವಾಗಿ ಸೋಲಿಸಿ ಪಾಕ್ ತಂಡವು ಸಂಭ್ರಮಿಸಿತ್ತು. ಇದೀಗ ಆ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ ಟೀಮ್ ಇಂಡಿಯಾ.

ಯಾರು ಬಲಿಷ್ಠ?

ಇಲ್ಲಿ ಉಭಯ ತಂಡಗಳು ಮೇಲ್ನೋಟಕ್ಕೆ ಬಲಿಷ್ಠವಾಗಿ ಕಂಡರೂ, ರನ್​ ಸರದಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಆಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ ವಿಕೆಟ್ ಕಬಳಿಕೆ ವಿಷಯದಲ್ಲಿ ಚಹಾಲ್ ಟಾಪ್ ಆಗಿ ಗುರುತಿಸಿಕೊಂಡಿದ್ದಾರೆ. ಇನ್ನು ಒಟ್ಟಾರೆ ಏಷ್ಯಾಕಪ್ ಫಲಿತಾಂಶದಲ್ಲೂ ಟೀಮ್ ಇಂಡಿಯಾ ಗೆಲುವಿನ ಸರಾಸರಿಯಲ್ಲಿ ಮುಂದಿದೆ. ಹೀಗಾಗಿ ಪಾಕಿಸ್ತಾನಕ್ಕಿಂತ ಟೀಮ್ ಇಂಡಿಯಾವೇ ಬಲಿಷ್ಠ ಎಂದು ಹೇಳಬಹುದು.

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ