Asia Cup: ಏಕದಿನ ಏಷ್ಯಾಕಪ್‌ನಲ್ಲಿ ಪಾಕ್ ಎದುರು ಭಾರತದ್ದೇ ಪಾರುಪತ್ಯ..!
Asia Cup: 50 ಓವರ್‌ಗಳ ಮಾದರಿಯಲ್ಲಿ ನಾಲ್ಕು ವರ್ಷಗಳ ನಂತರ ಸಾಂಪ್ರದಾಯಿಕ ಎದುರಾಳಿಗಳು ಪರಸ್ಪರ ಮುಖಾಮುಖಿಯಾಗುತ್ತಿದ್ದಾರೆ. ಜೂನ್ 2019 ರಲ್ಲಿ ಈ ಉಭಯ ತಂಡಗಳು ಕೊನೆಯ ಬಾರಿಗೆ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಟೀಂ ಇಂಡಿಯಾ 89 ರನ್‌ಗಳಿಂದ ಪಾಕ್ ತಂಡವನ್ನು ಮಣಿಸಿತ್ತು.
ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ (Pakistan and Sri Lanka) ನಡೆಯಲಿರುವ ಏಷ್ಯಾಕಪ್ಗೆ ಟೀಂ ಇಂಡಿಯಾ (Team India) ಇಂದಿನಿಂದ ಬೆಂಗಳೂರಿನ ಎನ್ಸಿಎನಲ್ಲಿ ತಯಾರಿ ಆರಂಭಿಸಿದೆ. ಬಹಳ ದಿನಗಳಿಂದ ಟೀಂ ಇಂಡಿಯಾದಿಂದ ದೂರ ಉಳಿದಿದ್ದ ತಂಡದ ಸ್ಟಾರ್ ಆಟಗಾರರು ಈ ಟೂರ್ನಿಗಾಗಿ ಫಿಟ್ನೆಸ್ ಟೆಸ್ಟ್ಗೆ ಒಳಗಾಗಲಿದ್ದಾರೆ. ಇನ್ನು ಈ ಬಾರಿಯ ಏಷ್ಯಾಕಪ್‌ನಲ್ಲಿ ರೋಹಿತ್ ಶರ್ಮಾ (Rohit Sharma) ನಾಯಕತ್ವದ ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಸೆಪ್ಟೆಂಬರ್ 2 ರಂದು ಪಾಕಿಸ್ತಾನದ (India vs Pakistan) ವಿರುದ್ಧ ಆಡಲಿದೆ. ಈ ಹೈ ವೋಲ್ಟೇಜ್ ಪಂದ್ಯದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಆದರೆ ಇದಕ್ಕೂ ಮುನ್ನ ಈ ಟೂರ್ನಿಯಲ್ಲಿ ಉಭಯ ತಂಡಗಳ ಮುಖಾಮುಖಿ ವರದಿಯನ್ನು ನೋಡುವುದಾದರೆ… ಇಲ್ಲಿ ಟೀಂ ಇಂಡಿಯಾ, ಪಾಕ್ ವಿರುದ್ಧ ಮೇಲುಗೈ ಸಾಧಿಸಿರುವುದನ್ನು ಕಾಣಬಹುದಾಗಿದೆ.
50 ಓವರ್‌ಗಳ ಮಾದರಿಯಲ್ಲಿ ನಾಲ್ಕು ವರ್ಷಗಳ ನಂತರ ಸಾಂಪ್ರದಾಯಿಕ ಎದುರಾಳಿಗಳು ಪರಸ್ಪರ ಮುಖಾಮುಖಿಯಾಗುತ್ತಿದ್ದಾರೆ. ಜೂನ್ 2019 ರಲ್ಲಿ ಈ ಉಭಯ ತಂಡಗಳು ಕೊನೆಯ ಬಾರಿಗೆ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಟೀಂ ಇಂಡಿಯಾ 89 ರನ್‌ಗಳಿಂದ ಪಾಕ್ ತಂಡವನ್ನು ಮಣಿಸಿತ್ತು.
Asia Cup 2023: ಏಷ್ಯಾಕಪ್ ಟಿಕೆಟ್ ಮಾರಾಟ ಆರಂಭ; ಭಾರತ- ಪಾಕ್ ಪಂದ್ಯಕ್ಕೆ ನಿಯಮ ಬದಲಾವಣೆ..!
ಮೂರು ಬಾರಿ ಮುಖಾಮುಖಿ ಸಾಧ್ಯತೆ
ಈ ಬಾರಿಯ ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಮೂರು ಬಾರಿ ಮುಖಾಮುಖಿಯಾಗುವ ಸಾಧ್ಯತೆಗಳು ಹೆಚ್ಚಿವೆ. ಉಭಯ ತಂಡಗಳು ಮೊದಲು ಗುಂಪು ಹಂತದಲ್ಲಿ ಮುಖಾಮುಖಿಯಾಗಲಿವೆ. ಇದರ ನಂತರ ಸೂಪರ್ 4 ಹಂತದಲ್ಲಿ ಮತ್ತೊಮ್ಮೆ ಎದುರುಬದುರಾಗಿ ಅಖಾಡಕ್ಕಿಳಿಯಲ್ಲಿವೆ. ಒಂದು ವೇಳೆ ಎರಡೂ ತಂಡಗಳು ಫೈನಲ್ಗೆ ಎಂಟ್ರಿ ಕೊಟ್ಟರೆ, ಅಲ್ಲಿ ಮೂರನೇ ಬಾರಿಗೆ ಪಂದ್ಯವನ್ನಾಡಲಿವೆ.
ಕಳೆದ 5 ಪಂದ್ಯಗಳಲ್ಲಿ 4 ಪಂದ್ಯ ಗೆದ್ದ ಭಾರತ
ಇನ್ನು ಏಕದಿನ ಮಾದರಿಯಲ್ಲಿ ಉಭಯ ತಂಡಗಳ ಮುಖಾಮುಖಿ ವರದಿಯನ್ನು ನೋಡುವುದಾದರೆ.. ಕಳೆದ 5 ಏಕದಿನ ಪಂದ್ಯಗಳಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಭರ್ಜರಿ ಮೇಲುಗೈ ಸಾಧಿಸಿದೆ. ಕಳೆದ 5 ಪಂದ್ಯಗಳಲ್ಲಿ ಭಾರತ 4 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ಆದರೆ 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಟೀಂ ಇಂಡಿಯಾ ವಿರುದ್ಧ 180 ರನ್ಗಳ ಜಯ ಸಾಧಿಸಿ, ಭಾರತಕ್ಕೆ ಮುಜುಗರದ ಸೋಲಿನ ಶಾಕ್ ನೀಡಿತ್ತು.
ಏಕದಿನ ಏಷ್ಯಾಕಪ್ಗೆ ಭಾರತದ್ದೇ ಮೇಲುಗೈ
ಇನ್ನು ಏಕದಿನ ಏಷ್ಯಾಕಪ್‌ನಲ್ಲಿ ಉಭಯ ತಂಡಗಳ ಮುಖಾಮುಖಿ ವರದಿಯನ್ನು ನೋಡುವುದಾದರೆ ಇಲ್ಲಿ ಭಾರತ ಪಾಕ್ ಎದುರು 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಪಾಕಿಸ್ತಾನ 5 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಒಂದು ಪಂದ್ಯ ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.
ಏಕದಿನ ಮಾದರಿಯಲ್ಲಿ 2018 ರಲ್ಲಿ ನಡೆದ ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾ ಗ್ರೂಪ್ ಸ್ಟೇಜ್ ಮತ್ತು ಸೂಪರ್ ಫೋರ್ ಹಂತ ಎರಡರಲ್ಲೂ ಪಾಕ್ ತಂಡವನ್ನು ಬಗ್ಗುಬಡಿಯುವಲ್ಲಿ ಯಶಸ್ವಿಯಾಗಿತ್ತು. ಈ ಎರಡೂ ತಂಡಗಳು ಈವೆಂಟ್‌ನ 12 ಆವೃತ್ತಿಗಳನ್ನು ಆಡಿದ್ದು, ಪ್ರಶಸ್ತಿ ವಿಚಾರದಲ್ಲೂ ಭಾರತ, ಪಾಕಿಸ್ತಾನಕ್ಕಿಂತ ಮುಂದಿದೆ. ಈ ಲೀಗ್ನಲ್ಲಿ ಭಾರತ 6 ಬಾರಿ ಚಾಂಪಿಯನ್ ಆಗಿದ್ದರೆ, ಪಾಕಿಸ್ತಾನ ಕೇವಲ 2 ಬಾರಿ ಮಾತ್ರ ಪ್ರಶಸ್ತಿ ಗೆದ್ದಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ