IND vs PAK, ICC World Cup: ವಿಶ್ವಕಪ್​ನಲ್ಲಿಂದು ಭಾರತ-ಪಾಕಿಸ್ತಾನ ಸೆಣೆಸಾಟ: ಹೈವೋಲ್ಟೇಜ್ ಪಂದ್ಯಕ್ಕೆ ಮೋದಿ ಸ್ಟೇಡಿಯಂ ಸಜ್ಜು

India vs Pakistan, ICC World Cup: ಐಸಿಸಿ ಏಕದಿನ ವಿಶ್ವಕಪ್ 2023 ರ ಹೈವೋಲ್ಟೇಜ್ ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿಯಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅಕ್ಟೋಬರ್ 14 ಮಧ್ಯಾಹ್ನ 2 ಗಂಟೆಗೆ ಭಾರತ ಮತ್ತು ಪಾಕಿಸ್ತಾನವು ನಡುವೆ ಮೆಗಾ ಪಂದ್ಯವನ್ನು ಆಯೋಜಿಸಲಾಗಿದೆ.

IND vs PAK, ICC World Cup: ವಿಶ್ವಕಪ್​ನಲ್ಲಿಂದು ಭಾರತ-ಪಾಕಿಸ್ತಾನ ಸೆಣೆಸಾಟ: ಹೈವೋಲ್ಟೇಜ್ ಪಂದ್ಯಕ್ಕೆ ಮೋದಿ ಸ್ಟೇಡಿಯಂ ಸಜ್ಜು
India vs Pakistan
Follow us
Vinay Bhat
|

Updated on: Oct 14, 2023 | 5:55 AM

ಐಸಿಸಿ ಏಕದಿನ ವಿಶ್ವಕಪ್ 2023 ರ 11ನೇ ಪಂದ್ಯದಲ್ಲಿ ಇಂದು ಕ್ರಿಕೆಟ್ ಲೋಕದ ಬದ್ಧವೈರಿಗಳಾದ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಬಾಬರ್ ಅಝಂ ನೇತೃತ್ವದ ಪಾಕಿಸ್ತಾನ (India vs Pakistan) ತಂಡಗಳು ಮುಖಾಮುಖಿ ಆಗುತ್ತಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಉಭಯ ತಂಡಗಳು ಆಡಿದ ಮೊದಲ ಎರಡೂ ಪಂದ್ಯಗಳನ್ನು ಗೆದ್ದು ಬೀಗಿರುವ ಕಾರಣ ಇಂದಿನ ಮ್ಯಾಚ್ ಸಾಕಷ್ಟು ಕುತೂಹಲ ಕೆರಳಿಸಿದೆ. ವಿಶ್ವದ ಅತಿ ದೊಡ್ಡ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದ ಟಿಕೆಟ್ ಕೂಡ ಸಂಪೂರ್ಣ ಸೋಲ್ಡ್ ಔಟ್ ಆಗಿದೆ.

ಇಂದಿನ ಪಂದ್ಯದಲ್ಲಿ ಶುಭ್​ಮನ್ ಗಿಲ್ ಆಡುವುದು ಬಹುತೇಕ ಖಚಿತವಾಗಿದೆ. ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ನಾಯಕ ರೋಹಿತ್ ಶರ್ಮಾ ಅವರು ಗಿಲ್ ಶೇ. 99 ರಷ್ಟು ಆಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಹೀಗಾಗಿ ಇಶಾನ್ ಕಿಶನ್ ಬೆಂಚ್ ಕಾಯಬೇಕಿದೆ. ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಭರ್ಜರಿ ಫಾರ್ಮ್​ನಲ್ಲಿದ್ದು, ಪಾಕ್ ವಿರುದ್ಧದ ಪಂದ್ಯದಲ್ಲೂ ಅಬ್ಬರಿಸುವುದು ಖಚಿತ. ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ ಹಾಗೂ ಜಡೇಜಾ ಸಂದರ್ಭಕ್ಕೆ ತಕ್ಕಂತೆ ಆಡಬೇಕು.

IND vs PAK: ರೋಹಿತ್ ಶರ್ಮಾ ಸುದ್ದಿಗೋಷ್ಠಿ: ಪಾಕ್ ವಿರುದ್ಧ ಗಿಲ್ ಆಡ್ತಾರಾ ಪ್ರಶ್ನೆಗೆ ಹಿಟ್​ಮ್ಯಾನ್ ಏನಂದ್ರು ನೋಡಿ

ಇದನ್ನೂ ಓದಿ
Image
ಪಾಕ್ ವಿರುದ್ಧ ಗಿಲ್ ಆಡ್ತಾರಾ ಪ್ರಶ್ನೆಗೆ ಹಿಟ್​ಮ್ಯಾನ್ ಏನಂದ್ರು ನೋಡಿ
Image
ಗಿಲ್ ಆಡುವುದು ಅನುಮಾನ: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI
Image
ಪಾಕಿಸ್ತಾನ ವಿರುದ್ಧ ಹೈವೋಲ್ಟೇಜ್ ಪಂದ್ಯ: ಅಹ್ಮದಾಬಾದ್​ಗೆ ಬಂದ ಟೀಮ್ ಇಂಡಿಯಾ
Image
ನಾಳೆಯ ಪಂದ್ಯಕ್ಕೆ ಅಭಿಮಾನಿಗಳು ನಮಗೆ ಬೆಂಬಲ ನೀಡುತ್ತಾರೆ: ಬಾಬರ್ ಅಝಂ

ಭಾರತದ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. ಆರ್. ಅಶ್ವಿನ್ ಕೈಬಿಡುವುದು ಬಹುತೇಕ ಖಚಿತವಾಗಿದ್ದು, ಮೂರನೇ ಸೀಮರ್ ಆಗಿ ಯಾರನ್ನು ಆಯ್ಕೆ ಮಾಡುತ್ತಾರೆ ಎಂಬುದು ನೋಡಬೇಕಿದೆ. ಮೊಹಮ್ಮದ್ ಶಮಿ ಅಥವಾ ಶಾರ್ದೂಲ್ ಠಾಕೂರ್ ಪೈಕಿ ಒಬ್ಬರಿಗೆ ಸ್ಥಾನ ಸಿಗಲಿದೆ. ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡುತ್ತಿರುವ ಶಮಿ 2023 ರಲ್ಲಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 17 ವಿಕೆಟ್ ಪಡೆದಿದ್ದರು. ಹೀಗಾಗಿ ಶಮಿ ಮೊದಲ ಆಯ್ಕೆ ಆಗಿದ್ದಾರೆ. ಉಳಿದಂತೆ ಕುಲ್ದೀಪ್, ಬುಮ್ರಾ, ಸಿರಾಜ್ ಇರಲಿದ್ದಾರೆ.

ಇತ್ತ ಪಾಕಿಸ್ತಾನ ತಂಡ ಬಲಿಷ್ಠವಾಗಿದೆ. ಆದರೆ, ನಾಯಕ ಬಾಬರ್ ಅಝಂ ಫಾರ್ಮ್ ವೈಫಲ್ಯ ಅನುಭವಿಸುತ್ತಿದ್ದಾರೆ. ಇಂದು ಹೇಗೆ ಆಡುತ್ತಾರೆ ನೋಡಬೇಕು. ಹೊಸ ಬ್ಯಾಟರ್ ಅಬ್ದುಲ್ ಶಫೀಖ್ ಕಳೆದ ಪಂದ್ಯದಲ್ಲಿ ಶತಕ ಸಿಡಿಸಿ ಅಬ್ಬರಿಸಿದ್ದರು. ಜೊತೆಗೆ ಮೊಹಮ್ಮದ್ ರಿಝ್ವಾನ್ ಕೂಡ ಫಾರ್ಮ್​ಗೆ ಬಂದಿರುವುದು ತಂಡದಲ್ಲಿ ಸಂತಸ ಮೂಡಿದೆ. ಇಮಾಮ್ ಉಲ್ ಹಖ್, ಶಕೀಲ್ ಹಾಗೂ ಇಫ್ತಿಖರ್ ತಂಡಕ್ಕೆ ಆಸರೆಯಾದರೆ ದೊಡ್ಡ ಸ್ಕೋರ್ ಗಳಿಸಬಹುದು. ಬೌಲಿಂಗ್​ನಲ್ಲಿ ಶಾಹಿನ್ ಅಫ್ರಿದಿ, ಹಸನ್ ಅಲಿ, ನವಾಜ್, ರೌಫ್ ಹಾಗೂ ಶಬಾದ್ ಖಾನ್ ಇದ್ದಾರೆ.

ನರೇಂದ್ರ ಮೋದಿ ಸ್ಟೇಡಿಯಂ ಪಿಚ್ ವರದಿ:

ಅತಿ ದೊಡ್ಡ ಕ್ರೀಡಾಂಗಣ ಎಂಬ ಹೆಸರು ಪಡೆದುಕೊಂಡಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಸ್ಟೇಡಿಯಂ ಪಿಚ್‌ ಬ್ಯಾಟಿಂಗ್‌ ಸ್ನೇಹಿಯಾಗಿದೆ. ಪಂದ್ಯದ ಆರಂಭದಲ್ಲಿ ಬ್ಯಾಟಿಂಗ್‌ಗೆ ಯೋಗ್ಯವಾಗಿದ್ದರೆ, ಪಂದ್ಯ ಸಾಗುತ್ತಿದ್ದಂತೆ ಇಲ್ಲಿನ ವಿಕೆಟ್‌ ಸ್ಪಿನ್ನರ್‌ಗಳು ಪರಿಣಾಮಕಾರಿಯಾಗಲಿದ್ದಾರೆ. ಇಲ್ಲಿರುವ ಕಪ್ಪು ಮಣ್ಣಿನ ಪಿಚ್‌ಗಳು ಉತ್ತಮ ಬೌನ್ಸ್‌ನೊಂದಿಗೆ ಬೌಲರ್‌ಗಳಿಗೆ ಯೋಗ್ಯವಾಗಿದೆ. ಬ್ಯಾಟರ್‌ಗಳಿಗೆ ಆರಂಭಿಕ ಓವರ್‌ಗಳು ಸವಾಲಾಗಿರಬಹುದು. ಆಟಗಾರರು ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವುದರಿಂದ, ಪಿಚ್ ಸ್ವಲ್ಪಮಟ್ಟಿಗೆ ಬ್ಯಾಟಿಂಗ್ ಸ್ವರ್ಗವಾಗಿ ಬದಲಾಗುತ್ತದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಪರಿಸ್ಥಿತಿಗಳನ್ನು ಹೆಚ್ಚಿಸಲು ಇಬ್ಬನಿ ಅಂಶವು ಸಹ ಸಹಾಯ ಮಾಡುತ್ತದೆ.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.

ಪಾಕಿಸ್ತಾನ ತಂಡ: ಬಾಬರ್ ಅಝಂ (ನಾಯಕ), ಶಾದಾಬ್ ಖಾನ್, ಮುಹಮ್ಮದ್ ರಿಜ್ವಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಸೌದ್ ಶಕೀಲ್, ಫಖರ್ ಜಮಾನ್, ಹಾರಿಸ್ ರೌಫ್, ಹಸನ್ ಅಲಿ, ಇಫ್ತಿಕರ್ ಅಹ್ಮದ್, ಮುಹಮ್ಮದ್ ನವಾಜ್, ಮುಹಮ್ಮದ್ ವಾಸಿಂ ಜೂನಿಯರ್ , ಅಘಾ ಸಲ್ಮಾನ್, ಶಾಹೀನ್ ಶಾ ಅಫ್ರಿದಿ, ಒಸಾಮಾ ಮಿರ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ