IND vs PAK, ODI World Cup: ಭಾರತ-ಪಾಕಿಸ್ತಾನ ಪಂದ್ಯ ಆರಂಭಕ್ಕೂ ಮುನ್ನ ಅಪರೂಪದ ಘಟನೆ: ರಾಷ್ಟ್ರಗೀತೆ ಹಾಡುವಾಗ ಏನಾಯಿತು ನೋಡಿ

India vs Pakistan, National Anthem at the Narendra Modi Stadium: ಐಸಿಸಿ ಏಕದಿನ ವಿಶ್ವಕಪ್​ನಲ್ಲಿ ಇಂದು ಭಾರತ ಹಾಗೂ ಪಾಕಿಸ್ತಾನ ಪಂದ್ಯ ಆರಂಭಕ್ಕೂ ಮುನ್ನ ಉಭಯ ತಂಡಗಳ ಎಲ್ಲ ಆಟಗಾರರು ಮೈದಾನದಲ್ಲಿ ನಿಂತು ರಾಷ್ಟ್ರಗೀತೆ ಹಾಡಿದರು. ಈ ಸಂಧರ್ಭ ಭಾರತದ ರಾಷ್ಟ್ರಗೀತೆಗೆ ಕೂಡ ಗೌರವ ಸೂಚಿಸಲಾಯಿತು. ಈ ಸಂದರ್ಭ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅಪರೂಪದ ಘಟನೆ ನಡೆಯಿತು.

IND vs PAK, ODI World Cup: ಭಾರತ-ಪಾಕಿಸ್ತಾನ ಪಂದ್ಯ ಆರಂಭಕ್ಕೂ ಮುನ್ನ ಅಪರೂಪದ ಘಟನೆ: ರಾಷ್ಟ್ರಗೀತೆ ಹಾಡುವಾಗ ಏನಾಯಿತು ನೋಡಿ
India vs Pakistan National Anthem
Follow us
Vinay Bhat
|

Updated on:Oct 14, 2023 | 5:10 PM

ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಇಂದು ಕ್ರಿಕೆಟ್ ಲೋಕದ ಬದ್ಧವೈರಿಗಳಾದ ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳು ಮುಖಾಮುಖಿ ಆಗುತ್ತಿದೆ. ಈಗಾಗಲೇ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡ ಕಾರಣ ಪಾಕ್ ಬ್ಯಾಟಿಂಗ್ ಶುರು ಮಾಡಿದೆ. ಪಂದ್ಯ ಆರಂಭಕ್ಕೂ ಮುನ್ನ ಉಭಯ ತಂಡಗಳ ಎಲ್ಲ ಆಟಗಾರರು ಮೈದಾನದಲ್ಲಿ ನಿಂತು ರಾಷ್ಟ್ರಗೀತೆ ಹಾಡಿ ಗೌರವ ಸೂಚಿಸುವುದು ವಾಡಿಕೆ. ಅದರಂತೆ ಈ ಪಂದ್ಯದಲ್ಲಿ ಕೂಡ ರಾಷ್ಟ್ರಗೀತೆ ಪ್ರಸಾರ ಮಾಡಲಾಯಿತು. ಈ ಸಂದರ್ಭ ಅಪರೂಪದ ಘಟನೆ ನಡೆದಿದೆ.

ವಿಶ್ವದ ಅತಿ ದೊಡ್ಡ ಕ್ರೀಡಾಂಗಣದಲ್ಲಿ ಒಂದಾಗಿರುವ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಭಾರತ-ಪಾಕ್ ಪಂದ್ಯಕ್ಕೆ ಹೌಸ್​ಫುಲ್ ಆಗಿದೆ. ಸುಮಾರು 1 ಲಕ್ಷದ ಮೂವತ್ತು ಸಾವಿರ ಮಂದಿ ಕುಳಿತು ಪಂದ್ಯ ವೀಕ್ಷಿಸಬಹುದಾದ ಈ ಮೈದಾನದಲ್ಲಿ ಭಾರತದ ರಾಷ್ಟ್ರಗೀತೆ ಪ್ರಸಾರವಾದಾಗ ನೂತನ ದಾಖಲೆ ನಿರ್ಮಾಣವಾಯಿತು. ಭಾರತೀಯ ಆಟಗಾರರು ಮೈದಾನದಲ್ಲಿ ನಿಂತು ರಾಷ್ಟ್ರಗೀತೆಗೆ ಗೌರವ ಸೂಚಿಸುವಾಗ, ಮೈದಾನದಲ್ಲಿ ನೆರದಿದ್ದ 1 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ರಾಷ್ಟ್ರಗೀತೆಗೆ ದನಿಯಾದ ಅಪರೂಪದ ಘಟನೆ ನಡೆಯಿತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
ಭಾರತ-ಪಾಕಿಸ್ತಾನ ಪಂದ್ಯ: ನರೇಂದ್ರ ಮೋದಿ ಸ್ಟೇಡಿಯಂ ಹೊರಗಡೆ ಜನಸಾಗರ
Image
ಎರಡು ಬದಲಾವಣೆ: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI ಪ್ರಕಟ
Image
ಭಾರತದ ಗೆಲುವಿಗೆ ಬೆಳಗಾವಿಯಲ್ಲಿ ವಿಘ್ನ ವಿನಾಶಕ ಗಣಪನಿಗೆ ವಿಶೇಷ ಪೂಜೆ
Image
ಭಾರತ-ಪಾಕ್ ಕದನದಲ್ಲಿ ಸೃಷ್ಟಿಯಾಗಬಹುದಾದ ಪ್ರಮುಖ ದಾಖಲೆಗಳಿವು

ಟೀಂ ಇಂಡಿಯಾದ ಈ ಐದು ದಾಖಲೆಗಳನ್ನು ಮುರಿಯುವುದು ಪಾಕ್ ತಂಡಕ್ಕೆ ಕಷ್ಟಕಷ್ಟ

ಇಲ್ಲಿದೆ ನೋಡಿ ಮೋದಿ ಸ್ಟೇಡಿಯಂನಲ್ಲಿ ಫ್ಯಾನ್ಸ್ ರಾಷ್ಟ್ರಗೀತೆ ಹಾಡುತ್ತಿರುವ ವಿಡಿಯೋ:

ಶುಭ್​ಮನ್ ಗಿಲ್ ಇನ್:

ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಡೆಂಗ್ಯೂಯಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಶುಭ್​ಮನ್ ಗಿಲ್ ಆಡುವ ಬಳಗಕ್ಕೆ ಮರಳಿದ್ದಾರೆ. ಹೀಗಾಗಿ ಇಶಾನ್ ಕಿಶನ್ ಹೊರಬಿದ್ದಿದ್ದಾರೆ. ಅಂತೆಯೆ ಆರ್. ಅಶ್ವಿನ್ ಬದಲು ಶಾರ್ದೂಲ್ ಠಾಕೂರ್ ಸ್ಥಾನ ಪಡೆದುಕೊಂಡಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಮೊಹಮ್ಮದ್ ಶಮಿ ಅವರನ್ನು ಆಡಿಸುವ ಬಗ್ಗೆ ಮಾತುಗಳು ಕೇಳಿಬಂದಿದ್ದವು. ಆದರೆ, ಶಾರ್ದೂಲ್ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತ ಪಾಕ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಭಾರತ ಪ್ಲೇಯಿಂಗ್ ಇಲೆವೆನ್:

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಪಾಕಿಸ್ತಾನ ಪ್ಲೇಯಿಂಗ್ ಇಲೆವೆನ್:

ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಅಝಂ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Sat, 14 October 23

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ